ಪೊನ್ನಂಪೇಟೆ, ನ. ೧: ತಿತಿಮತಿಯ ಸರಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಇತ್ತೀಚಿಗೆ ನಡೆದ ಜಿಲ್ಲಾಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ತಿತಿಮತಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ವೈ. ಎಸ್. ಸೌಮ್ಯ ಟ್ರಿಪಲ್ ಜಂಪಿನಲ್ಲಿ ಪ್ರಥಮ ಸ್ಥಾನ ಮತ್ತು ಪಿ.ಜಿ. ಸಂಗೀತ ಹ್ಯಾಮರ್ ಥ್ರೋನಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಇಬ್ಬರು ವಿದ್ಯಾರ್ಥಿಗಳು ಮುಂದೆ ಪುತ್ತೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲಾ ತಂಡವನ್ನು ಪ್ರತಿನಿಧಿಸಲಿದ್ದಾರೆ ಎಂದು ಶಾಲೆಯ ದೈಹಿಕ ಶಿಕ್ಷಕರಾದ ಸಿಎಂ ರಾಘವೇಂದ್ರ ತಿಳಿಸಿದ್ದಾರೆ.