ಪೊನ್ನAಪೇಟೆ, ನ. ೧ : ಬಿಟ್ಟಂಗಾಲ ಸಮೀಪದ ವಿ. ಬಾಡಗದ ಹೈ ಪ್ಲೆöÊಯರ್ಸ್ ತಂಡದ ವತಿಯಿಂದ ತಾ.೩೦ರಿಂದ ಡಿ.೩ರವರೆಗೆ ದ. ಕೊಡಗಿನ ೩ ನಾಡು ವ್ಯಾಪ್ತಿಯ ತಂಡಗಳಿಗಾಗಿ ೨ನೇ ವರ್ಷದ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ತಂಡದ ಅಧ್ಯಕ್ಷ ಅಮ್ಮಣಿಚಂಡ ರಂಜು ಪೂಣಚ್ಚ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇರಳಿನಾಡು, ಕುತ್ತುನಾಡು ಮತ್ತು ಬೊಟ್ಟಿಯತ್ ನಾಡು ವ್ಯಾಪ್ತಿಯಲ್ಲಿ ಐನ್‌ಮನೆ ಹೊಂದಿರುವ ಕೊಡವ ಕುಟುಂಬ ತಂಡಗಳಿಗಾಗಿ ಆಯೋಜಿಸಲಾಗಿರುವ ಈ ಹಾಕಿ ಪಂದ್ಯಾವಳಿಯು ವಿ. ಬಾಡಗ ಗ್ರಾಮದಲ್ಲಿ ೨ನೇ ಬಾರಿಗೆ ಜರುಗುತ್ತಿದೆ. ವಿ.ಬಾಡಗದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಒಟ್ಟು ೪ ದಿನಗಳ ಕಾಲ ನಡೆಯುವ ಈ ಕೌಟುಂಬಿಕ ಹಾಕಿ ಪಂದ್ಯಾವಳಿಗಾಗಿ ಈಗಾಗಲೇ ಸಿದ್ಧತೆಗಳು ಆರಂಭಗೊAಡಿರುವುದಾಗಿ ರಂಜು ಪೂಣಚ್ಚ ಮಾಹಿತಿ ನೀಡಿದರು.

(ಮೊದಲ ಪುಟದಿಂದ) ಕುಟುಂಬ ತಂಡಗಳಲ್ಲಿ ಗರಿಷ್ಟ ೪ ಅತಿಥಿ ಆಟಗಾರರು ಭಾಗವಹಿಸಬಹುದಾಗಿದೆ. ಆದರೆ, ಅತಿಥಿ ಆಟಗಾರರು ಕಡ್ಡಾಯವಾಗಿ ಕೊಡವ ಆಟಗಾರರಾಗಿರಬೇಕು. ವಿಜೇತ ತಂಡಗಳಿಗೆ ಆಕರ್ಷಕ ನಗದು ಬಹುಮಾನ ಮತ್ತು ಕೊಡವ ಸಾಂಪ್ರದಾಯಿಕ ಪಾರಿತೋಷಕಗಳನ್ನು ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಹಾಕಿ ಪಂದ್ಯಾವಳಿಗೆ ಒತ್ತು ನೀಡುವ ಹಿನ್ನೆಲೆಯಲ್ಲಿ ಈ ಹಾಕಿ ಪಂದ್ಯಾವಳಿಯನ್ನು ಆಯೋಜಿಸಲಾಗುತ್ತಿದೆ. ಈ ಕಾರಣಕ್ಕಾಗಿ ಹೈ ಫ್ಲೈಯರ್ಸ್ ಎಂಬ ಕ್ರೀಡಾ ಸಂಸ್ಥೆಯನ್ನು ಹುಟ್ಟು ಹಾಕಲಾಗಿದೆ ಎಂದು ವಿವರಿಸಿರುವ ರಂಜು ಪೂಣಚ್ಚ, ಹಾಕಿ ಕೂರ್ಗ್ ಸಂಸ್ಥೆಯ ಅಧೀನದಲ್ಲಿ ನಡೆಯಲಿರುವ ಈ ಹಾಕಿ ಪಂದ್ಯಾವಳಿಯು ಹಾಕಿ ಕರ್ನಾಟಕ ಸಂಸ್ಥೆಯ ನಿಯಮಾವಳಿಗೆ ಬದ್ಧವಾಗಿ ನಾಕ್‌ಔಟ್ ಮಾದರಿಯಲ್ಲಿ ಆಯೋಜಿಸಲಾಗುತ್ತದೆ. ಕುಟುಂಬ ತಂಡಗಳು ಪಂದ್ಯಾವಳಿಗೆ ಹೆಸರು ನೋಂದಾಯಿಸಲು ತಾ.೨೦ ಕೊನೆಯ ದಿನವಾಗಿರುತ್ತದೆ. ಪಂದ್ಯಾವಳಿಯ ಕುರಿತ ಹೆಚ್ಚಿನ ಮಾಹಿತಿಗಾಗಿ ೯೭೩೧೭೨೯೧೧೮/ ೯೪೮೧೮೮೩೭೩೮ ಅಥವಾ ೯೭೪೦೧೯೬೩೧೮ ಅನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಕ್ರೀಡಾ ಕಾರ್ಯದರ್ಶಿಗಳಾದ ಕುಪ್ಪಂಡ ದಿಲನ್ ಬೋಪಣ್ಣ ಮಾತನಾಡಿ, ಕಳೆದ ಬಾರಿ ಆಯೋಜಿಸಿದ್ದ ಈ ಕೌಟುಂಬಿಕ ಹಾಕಿ ಪಂದ್ಯಾವಳಿಯಲ್ಲಿ ೩ ನಾಡಿನ ಒಟ್ಟು ೧೯ ಕುಟುಂಬ ತಂಡಗಳು ಭಾಗವಹಿಸಿದ್ದವು. ಈ ಬಾರಿ ೨೫ ತಂಡಗಳನ್ನು ನಿರೀಕ್ಷಿಸಲಾಗಿದೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಸಂಸ್ಥೆಯ ಸಲಹಾ ಸಮಿತಿ ನಿರ್ದೇಶಕ ಕೊಂಗAಡ ಕಾಶಿ ಕಾರ್ಯಪ್ಪ, ಉಪಾಧ್ಯಕ್ಷ ಕಂಜಿತAಡ ವಿಕ್ರಾಂತ್ ಮತ್ತು ಸ್ವಾಗತ ಸಮಿತಿ ಸಂಚಾಲಕ ಚೇಮಿರ ಪ್ರಭು ಪೂವಯ್ಯ ಉಪಸ್ಥಿತರಿದ್ದರು.