ಮಡಿಕೇರಿ, ನ. ೧: ಜಿಲ್ಲಾಡಳಿತ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ರಾಷ್ಟಿçÃಯ ಏಕತಾ ದಿನಾಚರಣೆ ಪ್ರಯುಕ್ತ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್. ವೀಣಾ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.

ರಾಷ್ಟçದ ಐಕ್ಯತೆ, ಸಮಗ್ರತೆ ಮತ್ತು ಭದ್ರತೆ ಕಾಪಾಡಲು ನಮ್ಮನ್ನು ಅರ್ಪಿಸಿಕೊಳ್ಳುತ್ತೇವೆ ಮತ್ತು ದೇಶ ಬಾಂಧವರಲ್ಲಿ ಸಂದೇಶವನ್ನು ಸಾರಲು ಶ್ರಮಿಸುತ್ತೇನೆ ಎಂದು ಪ್ರಜ್ಞಾಪೂರ್ವಕವಾಗಿ ಪ್ರತಿಜ್ಞೆ ಮಾಡಲಾಯಿತು.

ರಾಷ್ಟçದ ಪ್ರಥಮ ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ದೂರದೃಷ್ಟಿ ಮತ್ತು ಕಾರ್ಯಕ್ಷಮತೆಯಿಂದ ಸಾಧಿಸಿದ ರಾಷ್ಟಿçÃಯ ಏಕೀಕರಣದ ಸ್ಫೂರ್ತಿ ಕಾಪಾಡುತ್ತೇನೆ. ರಾಷ್ಟçದ ಆಂತರಿಕ ಭದ್ರತೆಯನ್ನು ಖಾತ್ರಿಪಡಿಸಲು ತಮ್ಮದೇ ಆದ ಕೊಡುಗೆ ನೀಡುತ್ತೇನೆ ಎಂದು ಪ್ರತಿಜ್ಞೆ ಸ್ವೀಕರಿಸಲಾಯಿತು. ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇದ್ದರು.

‘ಜಾಗೃತಿ ಅರಿವು ಸಪ್ತಾಹ’

ಮಡಿಕೇರಿ: ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ‘ಜಾಗೃತಿ ಅರಿವು ಸಪ್ತಾಹ’ ಪ್ರಯುಕ್ತ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಲೋಕಾಯುಕ್ತ ಡಿವೈಎಸ್‌ಪಿ ಪವನ್ ಕುಮಾರ್ ಅವರ ಉಪಸ್ಥಿತಿಯಲ್ಲಿ ಪ್ರತಿಜ್ಞಾ ವಿಧಿ ಕಾರ್ಯಕ್ರಮವು ಜರುಗಿತು. ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್. ವೀಣಾ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.

ಲೋಕಾಯುಕ್ತ ಡಿವೈಎಸ್‌ಪಿ ಪವನ್ ಕುಮಾರ್ ಅವರು ಮಾತನಾಡಿ, ಸರ್ಕಾರಿ ನೌಕರರಿಗೆ ಸರ್ಕಾರ ಕಾಲ ಕಾಲಕ್ಕೆ ವೇತನ ಹೆಚ್ಚಳ, ಮುಂಬಡ್ತಿ, ಗಳಿಕೆ ರಜೆ ಹೀಗೆ ಹಲವು ಸೌಲಭ್ಯಗಳನ್ನು ಕಲ್ಪಿಸುತ್ತಿದೆ. ಆ ನಿಟ್ಟಿನಲ್ಲಿ ಯಾವುದೇ ಕಾರಣಕ್ಕೂ ಭ್ರಷ್ಟಾಚಾರಕ್ಕೆ ಮುಂದಾಗಬಾರದು ಎಂದು ಹೇಳಿದರು.

ನಮ್ಮ ದೇಶದ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಅಭಿವೃದ್ಧಿಗೆ ಭ್ರಷ್ಟಾಚಾರವು ಒಂದು ಪ್ರಮುಖ ಅಡಚಣೆಯಾಗಿದೆ. ಭ್ರಷ್ಟಾಚಾರ ನಿರ್ಮೂಲನೆಗೆ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಿದೆ ಎಂದು ಪವನ್ ಕುಮಾರ್ ತಿಳಿಸಿದರು. ಜಿಲ್ಲಾಧಿಕಾರಿ ಅವರ ಕಾನೂನು ಸಲಹೆಗಾರ ಎ. ಲೋಕೇಶ್ ಕುಮಾರ್, ಭೂದಾಖಲೆಗಳ ಉಪ ನಿರ್ದೇಶಕ ಪಿ. ಶ್ರೀನಿವಾಸ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಸಪ್ಪ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಶ್ರೀನಿವಾಸ್, ಚುನಾವಣಾ ತಹಶೀಲ್ದಾರ್ ಸಿ.ಜಿ. ರವಿಶಂಕರ್ ಇತರರು ಇದ್ದರು.

ವೀರಾಜಪೇಟೆ: ಸೆಂಟ್ ಆ್ಯನ್ಸ್ ಪದವಿ ಕಾಲೇಜು