ಮಡಿಕೇರಿ, ನ. ೧: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಹಿರಿಯ ಕ್ರೀಡಾಪಟು-ತರಬೇತುದಾರರಾಗಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಂದ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಕರ್ನಾಟಕ ರಾಜ್ಯದ ಗ್ರಾಮೀಣ ಕ್ರೀಡೆಗಳಿಗೆ ಮತ್ತು ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ. ಅದರಂತೆ ೨೦೨೨ನೇ ಸಾಲಿನ ಹಿರಿಯ ಕ್ರೀಡಾಪಟು-ತರಬೇತುದಾರರಾಗಿ ಸಾಧನೆ ಮಾಡಿರುವ ಹಿರಿಯ ಕ್ರೀಡಾಪಟುಗಳಿಂದ ಜೀವಮಾನ ಸಾಧನೆ ಹಾಗೂ ಗ್ರಾಮೀಣ ಕ್ರೀಡೆಗಳಿಗೆ ಮತ್ತು ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲು ಕರ್ನಾಟಕ ಕ್ರೀಡಾ ಪ್ರಶಸ್ತಿಗೆ ಸೇವಾ ಸಿಂಧು ಆನ್‌ಲೈನ್ ವೆಬ್‌ಸೈಟ್ hಣಣಠಿ://sevಚಿsiಟಿಜhuseಡಿviಛಿes.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಕ್ರೀಡಾಪಟುಗಳು ಇಲಾಖಾ ಅಧಿಕೃತ ಜಾಲತಾಣ hಣಣಠಿ://sevಚಿsiಟಿಜhuseಡಿviಛಿes.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಆನ್‌ಲೈನ್‌ನಲ್ಲಿ ತಾ. ೩೦ ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ದೂ. ೦೮೨೭೨-೨೨೦೯೮೬ ಮತ್ತು ೯೪೮೦೦೩೨೭೧೨ ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಕ್ರೀಡಾಪಟುಗಳಿಂದ ಪ್ರೋತ್ಸಾಹಧನಕ್ಕೆ

೨೦೨೧ ಮತ್ತು ೨೦೨೨ನೇ ಸಾಲಿನಲ್ಲಿ ರಾಷ್ಟç ಮತ್ತು ಅಂರ‍್ರಾಷ್ಟಿçÃಯ ಮಟ್ಟದಲ್ಲಿ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದ ರಾಜ್ಯದ ಕ್ರೀಡಾಪಟುಗಳಿಗೆ ನಗದು ಪ್ರೋತ್ಸಾಹಧನ ನೀಡಲಾಗುತ್ತಿದೆ.

ಒಲಂಪಿಕ್ಸ್ ಗೇಮ್ಸ್, ಕಾಮನ್ ವೆಲ್ತ್ ಗೇಮ್ಸ್ ಮತ್ತು ಏಷ್ಯನ್ ಗೇಮ್ಸ್ ಕ್ರೀಡಾಕೂಟ ಹೊರತುಪಡಿಸಿ ರಾಷ್ಟç ಮತ್ತು ಅಂತರರಾಷ್ಟಿçÃಯ ಮಟ್ಟದಲ್ಲಿ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದ ಕೊಡಗು ಜಿಲ್ಲೆಯ ಆಸಕ್ತ ಕ್ರೀಡಾಪಟುಗಳು ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ಮಡಿಕೇರಿ ಇಲ್ಲಿ ಪಡೆದು ತಾ. ೧೮ ರೊಳಗೆ ಕಚೇರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂ. ೦೮೨೭೨-೨೨೦೯೮೬ ಮತ್ತು ೭೯೭೫೩೮೧೭೨೮ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ. ವಿಸ್ಮಯಿ ತಿಳಿಸಿದ್ದಾರೆ.

ಏಕಲವ್ಯ ಪ್ರಶಸ್ತಿಗೆ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಅದರಂತೆ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಪ್ರತಿಭಾನ್ವಿತ ಅರ್ಹ ಕ್ರೀಡಾಪಟುಗಳು ೨೦೨೨ನೇ ಸಾಲಿನ ಏಕಲವ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು, ಅರ್ಜಿ ನಮೂನೆಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ಮಡಿಕೇರಿ ಈ ಕಚೇರಿಯಿಂದ ಪಡೆದು ತಾ. ೧೮ ರೊಳಗೆ ಕಚೇರಿಗೆ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗೆ ದೂ. ೦೮೨೭೨-೨೨೦೯೮೬ ಮತ್ತು ೯೪೮೦೦೩೨೭೧೨ ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.