ಮಡಿಕೇರಿ, ನ. ೩: ತಾ. ೧೨ ಹಾಗೂ ತಾ. ೧೪ ರಂದು ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಿವಿಧ ರೀತಿಯ ಪಟಾಕಿಗಳನ್ನು ಸ್ಫೋಟಿಸುವುದರಿಂದ ಉಂಟಾಗುವ ಶಬ್ಧ ಮಾಲಿನ್ಯ ಮತ್ತು ವಾಯು ಮಾಲಿನ್ಯದಿಂದ ಸಾರ್ವಜನಿಕರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಉಂಟಾಗುವುದನ್ನು ತೆಡೆಗಟ್ಟಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಸರ್ವೋಚ್ಛ ನ್ಯಾಯಾಲಯದ ರಿಟ್ ಪಿಟಿಶನ್ ಸಂಖ್ಯೆ:೭೨೮:೨೦೧೫ ನಲ್ಲಿ ನೀಡಲಾದ ನಿರ್ದೇಶನಕ್ಕನುಸಾರವಾಗಿ ಕಳೆದ ತಿಂಗಳು ಮಾರ್ಗಸೂಚಿಯನ್ನು ಹೊರಡಿಸಿ ಸಂಬAಧಿಸಿದ ಇಲಾಖೆ, ಸ್ಥಳೀಯ ಸಂಸ್ಥೆಗಳಿಗೆ ಈ ನಿರ್ದೇಶನÀ ಕಟ್ಟುನಿಟ್ಟಾಗಿ ಪಾಲನೆಯಾಗುವಂತೆ ಸುತ್ತೋಲೆ ಹೊರಡಿಸಿದೆ. ಮಾರ್ಗ ಸೂಚಿ ಕಟ್ಟುನಿಟ್ಟಾಗಿ ಪಾಲನೆ ಯಾಗುವಂತೆ ರಾಜ್ಯ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಎಲ್ಲಾ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ಪತ್ರದ ಮೂಲಕ ಸೂಚಿಸಿದ್ದಾರೆ.

ರಾತ್ರಿ ೮ ರಿಂದ ೧೦ ರವರೆಗೆ

ಮಾತ್ರ ಅವಕಾಶ - ಹಸಿರು ಪಟಾಕಿ ಮಾತ್ರ ಬಳಕೆ

ದೀಪಾವಳಿ ಸಂದರ್ಭ ರಾತ್ರಿ ೮ ಗಂಟೆಯಿAದ ರಾತ್ರಿ ೧೦ ಗಂಟೆ ಯವರೆಗೆ ಮಾತ್ರ ಪಟಾಕಿಗಳನ್ನು ಸ್ಫೋಟಿಸಲು ಅವಕಾಶವಿದೆ. ಉಳಿದ ಸಮಯದಲ್ಲಿ ಪಟಾಕಿಗಳ ಸ್ಪೋಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಇದಲ್ಲದೆ ಸರ್ವೋಚ್ಛ ನ್ಯಾಯಾಲಯವು ಅನುಮತಿಸಿರುವ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಇತರೆ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸ ಲಾಗಿದೆ. 'ಹಸಿರು ಪಟಾಕಿ' ಕುರಿತು ಉಲ್ಲೇಖ (೨) ರ ಸರ್ಕಾರದ ಆದೇಶ ಸಂಖ್ಯೆ:ಆರ್‌ಡಿ ೪೬೫ ಟಿಎನ್‌ಆರ್ ೨೦೨೦, ದಿನಾಂಕ ೧೨/೧೧/೨೦೨೦ ರಲ್ಲಿ ವಿವರಣೆಯನ್ನು ನೀಡಲಾಗಿದ್ದು, ಮಂಡಳಿಯ ವೆಬ್‌ಸೈಟ್‌ನಲ್ಲಿ ಮಾಹಿತಿ ಲಭ್ಯವಿದೆ.

೧೪ ದಿನಗಳು (ಅಂದರೆ ದೀಪಾವಳಿ ಹಬ್ಬದ ೦೭ ದಿನಗಳ ಮೊದಲು ಹಾಗೂ ೦೭ ದಿನಗಳ ನಂತರ) ದಿನಾಂಕ ೦೫/೧೧/೨೦೨೩ ರಿಂದ ೨೦/೧೧/೨೦೨೩ ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪರಿವೇಷ್ಠಕ ವಾಯುವಿನ ಗುಣಮಟ್ಟ ಮಾಪನ ಹಾಗೂ ಶಬ್ಧಮಾಲಿನ್ಯದ ಮಾಪನದ ಈ ಮುಂದೆ ಹೊರಡಿಸಲಾಗುವ ನಿರ್ದೇಶನಗಳ ಅನ್ವಯ ಕ್ರಮವಹಿಸು ವಂತೆ ಸ್ಥಳೀಯ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ.

ಗೋದಾಮುಗಳ ಪರಿಶೀಲನೆಗೆ ಸೂಚನೆ

ಆಯಾಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಜಿಲ್ಲಾ ಅಗ್ನಿಶಾಮಕ ಪಡೆ ಅಧಿಕಾರಿ, ಸ್ಥಳೀಯ ಸಂಸ್ಥೆಯ ಆರೋಗ್ಯಾಧಿಕಾರಿ ಗಳು, ತಹಶೀಲ್ದಾರರು, ಜಿಲ್ಲಾ ಪರಿಸರ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಆಸಕ್ತ ನಾಗರೀಕರು ಹಾಗೂ ಸ್ಥಳೀಯ ಸರ್ಕಾರೇತರ ಸಂಘ ಸಂಸ್ಥೆಗಳ ಪ್ರತಿನಿಧಿಗಳ ನ್ನೊಳಗೊಂಡ ಕಾರ್ಯಪಡೆಗಳನ್ನು ರಚಿಸಿ ತಮ್ಮ ವ್ಯಾಪ್ತಿಯಲ್ಲಿನ ಎಲ್ಲಾ ಪಟಾಕಿ ಮಾರಾಟಗಾರರ ಗೋದಾಮುಗಳನ್ನು ಪರಿಶೀಲಿಸಬೇಕು ಹಾಗೂ ಅಲ್ಲಿ ಹಸಿರು ಪಟಾಕಿಯಲ್ಲದೆ, ಇನ್ನಾವುದಾದರೂ ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡಿದ್ದಲ್ಲಿ, ಇಡೀ ಗೋದಾಮನ್ನು ಮುಟ್ಟು ಗೋಲು ಹಾಕಿಕೊಳ್ಳಬೇಕು ಹಾಗೂ ಸಂಬAಧಿತ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆಯನ್ನು ಹೂಡಬೇಕೆಂದು ಸೂಚಿಸಲಾಗಿದೆ. ಎಲ್ಲಾ ಹಸಿರು ಪಟಾಕಿಗಳ ಮೇಲೆ ಹಾಗೂ ಅವುಗಳ ಪ್ಯಾಕೆಟ್ ಮೇಲೆ ಹಸಿರು ಪಟಾಕಿಯ ಚಿಹ್ನೆಯಿರುತ್ತದೆ ಹಾಗೂ ಕ್ಯೂ.ಆರ್.ಕೋಡ್ ಸಹಾ ಇರುತ್ತದೆ, ಚಿಹ್ನೆಯ ಬಗ್ಗೆ ಸಂಬAಧಪಟ್ಟ ಜಿಲ್ಲೆಯ ಪರಿಸರ ಅಧಿಕಾರಿಗಳಿಂದ ಖಚಿತ ಪಡಿಸಿಕೊಳ್ಳುವುದು. ಸದರಿ ಚಿಹ್ನೆ ಇಲ್ಲದ ಯಾವುದೇ ಪಟಾಕಿ ಹಸಿರು ಪಟಾಕಿಯೆನಿಸುವುದಿಲ್ಲ ಮತ್ತು ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಪರಿಸರ ಮಂಡಳಿ ಹೊರಡಿಸಿರುವ ಸುತ್ತೋಲೆಯಲ್ಲಿ

(ಮೊದಲ ಪುಟದಿಂದ) ಸ್ಥಳೀಯ ಸಂಸ್ಥೆಗಳ ಪ್ರಮುಖರಿಗೆ ಸೂಚನೆ ನೀಡಲಾಗಿದೆ.

ಹಸಿರು ಪಟಾಕಿಗಳ ಪ್ಯಾಕೆಟುಗಳನ್ನು ಸಂಗ್ರಹಿಸಿ, ನಿಗಧಿತ ವಿಧಿ ವಿಧಾನಗಳ ಮೂಲಕ ಅವುಗಳ ಶಬ್ದ ಮಟ್ಟವನ್ನು ಮಾಪನ ಮಾಡಬೇಕು ಮತ್ತು ನಿಗಧಿತ ಗುಣಮಾಪನಗಳಿಗೆ ಸರಿಹೊಂದಿದ್ದಲ್ಲಿ, ಅವುಗಳನ್ನು ಸಹಾ ಕೂಡಲೆ ಮುಟ್ಟುಗೋಲು ಹಾಕಿಕೊಳ್ಳುವಂತೆ ಸುತ್ತೋಲೆಯ ಮೂಲಕ ಸೂಚಿಸಲಾಗಿದೆ.

ಪ್ರಾಣಿ ಪಕ್ಷಿಗಳಿಗೆ ತೊಂದರೆಯಾಗದAತೆ ಎಚ್ಚರಕ್ಕೆ ಸೂಚನೆ

ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಹಾಗೂ ಇವುಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿಗಳು, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದAತೆ ಬಳಸಬೇಕು. ಸರ್ವೋಚ್ಚ ನ್ಯಾಯಾಲಯದ ನಿರ್ದೇಶನಗಳ ಕುರಿತಂತೆ ಸಾರ್ವಜನಿಕರಿಗೆ ಮತ್ತು ಮಕ್ಕಳಲ್ಲಿ ಅರಿವು ಮೂಡಿಸಲು ಪರಿಣಾಮಾಕಾರಿಯಾಗಿ ಜಾಗೃತಿ ಕಾರ್ಯಕ್ರಮಗಳನ್ನು ಜಿಲ್ಲಾಡಳಿತ ಮತ್ತು ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಯಾವುದೇ ಸ್ಥಳೀಯ ಆಸ್ಪತ್ರೆ ಹಾಗೂ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತಲಿನ ಹಾಗೂ ಇನ್ನಾವುದೇ ನಿಷೇಧಿತ ಪ್ರದೇಶದಲ್ಲಿ ಯಾವುದೇ ರೀತಿಯ ಪಟಾಕಿಗಳನ್ನು ಸ್ಪೋಟಿಸುವಂತಿಲ್ಲ.

ಗಡಿಯಲ್ಲಿ ಎಚ್ಚರ ವಹಿಸಲು ಪೊಲೀಸ್ ಇಲಾಖೆಗೆ ಸೂಚನೆ

ಹೊರ ರಾಜ್ಯಗಳಿಂದ ಅನಧಿಕೃತವಾಗಿ ಯಾವುದೇ ರೀತಿಯ ನಿಷೇಧಿತ ಪಟಾಕಿಗಳನ್ನು ಸಾಗಾಟ ಮಾಡುತ್ತಿದ್ದಲ್ಲಿ ಕೂಡಲೆ ವಾಣಿಜ್ಯ ತೆರಿಗೆ ಇಲಾಖೆಯ ವತಿಯಿಂದ ರಾಜ್ಯದ ಗಡಿಗಳಲ್ಲಿರುವ ತಮ್ಮ ತಮ್ಮ ತನಿಖಾ ಠಾಣೆಗಳ ಮುಖಾಂತರ ನಿಷೇಧಿತ ಪಟಾಕಿಗಳು ಹಾಗೂ ಸಂಬAಧಿತ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಹಾಗೂ ಸಾಗಾಟ ಮಾಡುವ ವಾಹನವನ್ನು ಸಾರಿಗೆ ಇಲಾಖೆಯಿಂದ ಮುಟ್ಟುಗೋಲು ಹಾಕಿಕೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ.