ಮಡಿಕೇರಿ, ನ. ೪ : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ತಾ. ೮ ರಂದು ವೀರಾಜಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮತ್ತು ತಾ. ೧೦ ರಂದು ಮಡಿಕೇರಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಆಯಾಯ ದಿನಗಳಂದು ಬೆಳಿಗ್ಗೆ ೧೧ ಗಂಟೆಯಿAದ ೧ ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ.

ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಪಿಡವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂ.ಸಂ.೦೮೨೭೨-೨೯೫೨೯೭ ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ತಿಳಿಸಿದ್ದಾರೆ.

ಮಡಿಕೇರಿ, ನ. ೪ : ನ್ಯಾಷನಲ್ ಮೆಡಿಕೋಸ್ ಆರ್ಗನೈಸೇಷನ್ ದಕ್ಷಿಣ ಪ್ರಾಂತ, ಮಡಿಕೇರಿ ವಿಭಾಗ ಹಾಗೂ ಮಡಿಕೇರಿ ಸೇವಾ ಭಾರತೀ ಸಂಯುಕ್ತ ಆಶ್ರಯದಲ್ಲಿ ತಾ. ೫ ರಂದು (ಇಂದು) ‘‘ಕಾವೇರಿ ಸ್ವಾಸ್ಥö್ಯ ಸೇವಾಯಾತ್ರಾ’’ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ.

ವಾಲ್ನೂರು ಬಾಳೆಗುಂಡಿ ಗಿರಿಜನ ಕಾಲೋನಿಯಲ್ಲಿ ಬೆಳಿಗ್ಗೆ ೯ ಗಂಟೆಯಿAದ ೧ ಗಂಟೆಯವರೆಗೆ ನಡೆಯಲಿರುವ ಶಿಬಿರದಲ್ಲಿ