ಮಡಿಕೇರಿ: ಮಡಿಕೇರಿ ಸಮೀಪದ ಮೇಕೇರಿ ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣ ವಾಗಿ ಆಚರಿಸಲಾಯಿತು. ಮೇಕೇರಿ ಬಿಳಿಗೇರಿ ಜಂಕ್ಷನ್‌ನಲ್ಲಿ ದಾನಿಗಳ ನೆರವಿನಿಂದ ನೂತನವಾಗಿ ನಿರ್ಮಿಸಲಾದ ಸುಸಜ್ಜಿತ ಸಾರ್ವಜನಿಕ ಬಸ್ ತಂಗುದಾಣವನ್ನು ಲೋಕಾ ರ್ಪಣೆ ಗೊಳಿಸಲಾಯಿತು. ಮಾಜಿ ಯೋಧರಾದ ಎಂ.ಟಿ. ಚಿಣ್ಣಪ್ಪ, ಚೊಟ್ಟೆಯಂಡ ಅಪ್ಪಾಜಿ, ಕ್ಯಾಪ್ಟನ್ ತುಂತಜ್ಜೀರ ದಯಾನಂದ, ಮೇಕೇರಿ ಗ್ರಾಮ ಪಂಚಾಯಿತಿ ಸದಸ್ಯ ಎಂ.ಯು. ಹನೀಫ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಮಂಜ್ಞೀರ ಸಾಬಾ ತಿಮ್ಮಯ್ಯ ಅವರು ಬಸ್ ತಂಗು ದಾಣವನ್ನು ಲೋಕಾರ್ಪ ಣೆಗೊಳಿಸಿದರು. ಈ ಸಂದರ್ಭ ಸಮೀಪದಲ್ಲೇ ನೂತನವಾಗಿ ನಿರ್ಮಿಸಲಾದ ಧ್ವಜ ಸ್ತಂಭವನ್ನು ಉದ್ಘಾಟಿಸಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಲಾಯಿತು. ಬಿಳಿಗೇರಿ, ರ‍್ವತ್ತೋಕ್ಲು, ಕುಂಬಳದಾಳು, ಹೊದವಾಡ ಗ್ರಾಮಕ್ಕೆ ಮೇಕೇರಿ ಬಿಳಿಗೇರಿ ಜಂಕ್ಷನ್‌ನಿAದ ತೆರಳಬಹುದಾಗಿದ್ದು, ಈ ಭಾಗದ ಜನರ ಬಹು ವರ್ಷದ ಬೇಡಿಕೆ ಯಾಗಿದ್ದ ಬಸ್ ತಂಗುದಾಣವನ್ನು ಸ್ಥಳೀಯರಾದ ಹಾಕತ್ತೂರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಪಿಯುಸ್ ಪೆರೆರಾ, ಸ್ಥಳೀಯರಾದ ಚೆಟ್ಟೋಳಿ ನಾಣಯ್ಯ ಹಾಗೂ ಎಂ.ಆರ್. ರಘು ಅವರು ಸಾರ್ವಜನಿಕರು ಹಾಗೂ ದಾನಿಗಳಿಂದ ಆರ್ಥಿಕ ನೆರವನ್ನು ಪಡೆದು ಒಂದು ವಾರಗಳ ಕಾಲ ಸ್ವತ ತಾವೇ ಕೆಲಸ ನಿರ್ವಹಿಸಿ ಕಟ್ಟಡವನ್ನು ನಿರ್ಮಿಸಿರುವುದು ವಿಶೇಷವಾಗಿದೆ.

ಬಸ್ ತಂಗುದಾಣವನ್ನು ಉದ್ಘಾಟಿಸಿದ ಮಾಜಿ ಯೋಧ ಚೊಟ್ಟೆಯಂಡ ಅಪ್ಪಾಜಿ ಮಾತನಾಡಿ, ಸ್ಥಳೀಯರ ಪ್ರಯತ್ನದಿಂದ ನೂತನ ಸಾರ್ವಜನಿಕ ಬಸ್ ತಂಗುದಾಣವನ್ನು ನಿರ್ಮಿಸಿರುವುದಕ್ಕೆ ಶ್ಲಾಘನೆ ವ್ಯಕ್ತಪಡಿಸಿ, ಬಸ್ ತಂಗುದಾಣವನ್ನು ಶುಚಿತ್ವದಿಂದ ಕಾಪಾಡಿಕೊಂಡು ಹೋಗುವಂತೆ ಕೋರಿದರು. ಮಾಜಿ ಯೋಧರಾದ ಎಂ.ಟಿ ಚಿಣ್ಣಪ್ಪ ಹಾಗೂ ಕ್ಯಾಪ್ಟನ್ ತುಂತಜ್ಜೀರ ದಯಾನಂದ, ಮೇಕೇರಿ ಗ್ರಾಮ ಪಂಚಾಯಿತಿ ಪಿಡಿಓ ಶ್ರೀಧರ್, ಪಿಯುಸ್ ಪೆರೆರಾ, ಚೆಟ್ಟೋಳಿ ನಾಣಯ್ಯ ಹಾಗೂ ಎಂ.ಆರ್. ರಘು ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಬಸ್ ತಂಗುದಾಣ ಲೋಕಾರ್ಪಣೆ ಹಿನ್ನೆಲೆ ನೆರೆದಿದ್ದವರಿಗೆ ಸಿಹಿ ವಿತರಿಸಲಾಯಿತು. ಈ ಸಂದರ್ಭ ಧ್ವಜಸ್ತಂಭ ಸ್ಥಳ ದಾನಿಗಳಾದ ಕಾಳೆಯಂಡ ಮಂಜುನಾಥ್, ಕಾಳೆಯಂಡ ಸರೋಜಿನಿ, ಕಾಳೆಯಂಡ ಸುಬ್ಬಯ್ಯ, ಮೇಕೇರಿ ಗ್ರಾ.ಪಂ. ಮಾಜಿ ಸದಸ್ಯರಾದ ಭೀಮಯ್ಯ, ಸ್ಥಳೀಯರಾದ ಪೊನ್ನಚ್ಚನ ಆನಂದ, ಪೊನ್ನಚ್ಚನ ಪವನ್, ಚೆಟ್ಟೋಳಿರ ಸುಧಿ, ಪಿ.ಕೆ. ಹುಸೇನ್, ರಾಬರ್ಟ್, ಪುಟ್ಟುಸ್ವಾಮಿ, ಎಂ.ಎA. ಸುಭಾಶ್ ಸೇರಿದಂತೆ ಸ್ಥಳೀಯ ಮೇಕೇರಿ, ಬಿಳಿಗೇರಿ, ಕಗ್ಗೋಡ್ಲು ಹಾಗೂ ರ‍್ವತ್ತೋಕ್ಲು ಗ್ರಾಮಸ್ಥರು ಹಾಜರಿದ್ದರು.ಕೂಡಿಗೆ: ಕೂಡಿಗೆ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ಸಡಗರ ಸಂಭ್ರಮದಿAದ ಆಚರಿಸಲಾಯಿತು. ಇದರ ಅಂಗವಾಗಿ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಕನ್ನಡದ ಬಾವುಟವನ್ನು ಕಟ್ಟುವುದರ ಜೊತೆಗೆ ತಳಿರು ತೋರಣಗಳಿಂದ ಸಿಂಗಾರಗೊಳಿಸಿದರು.

ಕನ್ನಡಾAಭೆಯ ಭಾವಚಿತ್ರಕ್ಕೆ ಕಾಲೇಜು ಪ್ರಾಂಶುಪಾಲ ಡಾ. ಬಸಪ್ಪ ಪುಷ್ಪಾರ್ಚನೆ ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಕೆ.ಕೆ ನಾಗರಾಜ ಶೆಟ್ಟಿ ವಹಿಸಿದ್ದರು. ದಿನದ ಮಹತ್ವದ ಕುರಿತು ಕಾಲೇಜು ಪ್ರಾಂಶುಪಾಲ ಡಾ. ಬಸಪ್ಪ ಮತ್ತು ಕನ್ನಡ ಉಪನ್ಯಾಸಕ ರವೀಶ್ ಸವಿಸ್ತಾರವಾಗಿ ವಿದ್ಯಾರ್ಥಿಗಳಿಗೆ ತಿಳಿಸಿದರು.

ದಿನದ ಮಹತ್ವದ ಬಗ್ಗೆ ಕಾಲೇಜಿನ ಬಾಲಕ-ಬಾಲಕಿಯರು ಭಾಷಣ ಮಾಡಿದರು. ಈ ಸಂದರ್ಭ ಕಾಲೇಜು ಅಭಿವೃದ್ಧಿ ಸಮಿತಿಯ ನಿರ್ದೇಶಕ ಜನಾರ್ಧನ್, ಉಪನ್ಯಾಸಕರಾದ ನಾಗಪ್ಪ, ರಮೇಶ್, ಕಾವೇರಮ್ಮ ಸೇರಿದಂತೆ ವಿವಿಧ ವಿಭಾಗದ ಉಪನ್ಯಾಸಕ ವೃಂದದವರು ಹಾಜರಿದ್ದರು.

ದೇವಣಗೇರಿ ಬಿ.ಸಿ. ಪ್ರೌಢಶಾಲೆಸುಂಟಿಕೊಪ್ಪ: ಸುಂಟಿಕೊಪ್ಪದಲ್ಲಿ ಕಳೆದ ಹಲವು ವರ್ಷಗಳಿಂದ ಎಲ್ಲ ಜನಾಂಗ, ಭಾಷಿಗರು ಸೇರಿ ನಾವೆಲ್ಲ ಕನ್ನಡಿಗರು ಎಂಬ ಅಭಿಲಾಷೆಯಿಂದ ಕನ್ನಡ ರಾಜ್ಯೋತ್ಸವ ಆಚರಿಸು ತ್ತಿರುವುದು ಇಡೀ ನಾಡಿಗೆ ಹೆಮ್ಮೆ ತರುವಂತದ್ದು ಎಂದು ಸುಂಟಿಕೊಪ್ಪ ನಾಡು ಗೌಡ ಸಮಾಜದ ಅಧ್ಯಕ್ಷ ಯಂಕನ ಉಲ್ಲಾಸ್ ಅಭಿಪ್ರಾಯಪಟ್ಟರು.

ಇಲ್ಲಿನ ಸುಂಟಿಕೊಪ್ಪ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಗ್ರಾಮ ಪಂಚಾಯಿತಿ, ವಿವಿಧ ಕನ್ನಡ ಪರ ಸಂಘಟನೆಗಳು, ವಿವಿಧ ಇಲಾಖೆಗಳು, ವಿವಿಧ ಸಂಘ-ಸAಸ್ಥೆಗಳ ಸಹಭಾಗಿತ್ವದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಕನ್ನಡ ರಾಜ್ಯೋತ್ಸವವನ್ನು ಈ ಸುಂಟಿಕೊಪ್ಪ: ಸುಂಟಿಕೊಪ್ಪದಲ್ಲಿ ಕಳೆದ ಹಲವು ವರ್ಷಗಳಿಂದ ಎಲ್ಲ ಜನಾಂಗ, ಭಾಷಿಗರು ಸೇರಿ ನಾವೆಲ್ಲ ಕನ್ನಡಿಗರು ಎಂಬ ಅಭಿಲಾಷೆಯಿಂದ ಕನ್ನಡ ರಾಜ್ಯೋತ್ಸವ ಆಚರಿಸು ತ್ತಿರುವುದು ಇಡೀ ನಾಡಿಗೆ ಹೆಮ್ಮೆ ತರುವಂತದ್ದು ಎಂದು ಸುಂಟಿಕೊಪ್ಪ ನಾಡು ಗೌಡ ಸಮಾಜದ ಅಧ್ಯಕ್ಷ ಯಂಕನ ಉಲ್ಲಾಸ್ ಅಭಿಪ್ರಾಯಪಟ್ಟರು.

ಇಲ್ಲಿನ ಸುಂಟಿಕೊಪ್ಪ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಗ್ರಾಮ ಪಂಚಾಯಿತಿ, ವಿವಿಧ ಕನ್ನಡ ಪರ ಸಂಘಟನೆಗಳು, ವಿವಿಧ ಇಲಾಖೆಗಳು, ವಿವಿಧ ಸಂಘ-ಸAಸ್ಥೆಗಳ ಸಹಭಾಗಿತ್ವದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಕನ್ನಡ ರಾಜ್ಯೋತ್ಸವವನ್ನು ಈ ಗೌರವಿಸಲಾಯಿತು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶಿವಮ್ಮ, ಸದಸ್ಯರಾದ ಪ್ರಸಾದ್ ಕುಟ್ಟಪ್ಪ, ಶಬೀರ್, ವಸಂತಿ, ಸೋಮನಾಥ್, ರಫೀಕ್ ಖಾನ್, ಪಿಎಸ್‌ಐ ಶ್ರೀಧರ್, ವಾಹನ ಚಾಲಕರ ಸಂಘದ ಅಧ್ಯಕ್ಷ ಸುರೇಶ್, ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ಡಾ. ಯಶೋಧರ ಪೂಜಾರಿ, ವರ್ತಕರ ಸಂಘದ ಅಧ್ಯಕ್ಷ ಡಿ. ನರಸಿಂಹ, ತಲೆಹೊರೆ ಕಾರ್ಮಿಕರ ಸಂಘದ ಅಧ್ಯಕ್ಷ ಮುತ್ತಯ್ಯ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳಾದ ಕ್ಲಾಡಿಯಸ್ ಲೋಬೋ, ಕೆ.ಇ. ಕರೀಂ, ಎಂ.ಎ. ಉಸ್ಮಾನ್, ಕರವೇ ಅಧ್ಯಕ್ಷ ನಾಗೇಶ್ ಪೂಜಾರಿ, ಮಲಯಾಳಿ ಸಮಾಜದ ಅಧ್ಯಕ್ಷ ಶಶಿಕುಮಾರ್, ಬಿಲ್ಲವ ಸಂಘದ ಅಧ್ಯಕ್ಷ ಮಣಿ ಮುಖೇಶ್ ಹಾಗೂ ಇತರರು ಇದ್ದರು.ಕರಿಕೆ: ಇಲ್ಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ವನ್ನು ಆಚರಿಸಲಾಯಿತು.

ಎಳ್ಳುಕೊಚ್ಚಿ ಸರಕಾರಿ ಪೌಢ ಶಾಲೆಯಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಮೆರವಣಿಗೆಯಲ್ಲಿ ಆಗಮಿಸಿ ಎಳ್ಳುಕೊಚ್ಚಿ ಪೇಟೆಯಲ್ಲಿರುವ ಕನ್ನಡ ಧ್ವಜ ಸ್ತಂಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಾಲಚಂದ್ರ ನಾಯರ್ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭ ಪಂಚಾಯಿತಿ ಸದಸ್ಯರು, ಸಹಕಾರ ಪತ್ತಿನ ಸಂಘಗಳ ನಿರ್ದೇಶಕರು, ಸಾರ್ವಜನಿಕರು ಪಾಲ್ಗೊಂಡಿದ್ದರು.ವೀರಾಜಪೇಟೆ: ದೇವಣಗೇರಿ ಬಿ.ಸಿ. ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಮುಖ್ಯ ಶಿಕ್ಷಕ ಹೆಚ್.ಡಿ. ಲೋಕೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ನಂತರ ಮಾತನಾಡಿದ ಅವರು, ಕನ್ನಡ ಪ್ರೇಮವನ್ನು ಬಿಂಬಿಸುವ ಹಲವಾರು ಕಾವ್ಯಗಳು, ಜ್ಞಾನಪೀಠ ಪ್ರಶಸ್ತಿ ಪಡೆದ ಮಹಾನ್ ಕವಿಗಳ ಬಗ್ಗೆ ಹಾಗೂ ಅವರು ಬರೆದ ಕಾವ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಕನ್ನಡವನ್ನು ಬೆಳೆಸಬೇಕಾದರೆ ಮೊದಲು ಬಳಸಬೇಕು, ಬಳಸಿದರೆ ಮಾತ್ರ ಬೆಳೆಸಲು ಸಾಧ್ಯ ಎಂಬುದನ್ನು ತಿಳಿಸಿಕೊಟ್ಟರು.

ಸಮಾರಂಭದಲ್ಲಿ ಸಹ ಶಿಕ್ಷಕಿ ಎ.ಸಿ. ಸುನೀತ ಅವರು ಮಾತನಾಡಿ, ಕನ್ನಡವನ್ನು ನವೆಂಬರ್ ತಿಂಗಳ ಕನ್ನಡವನ್ನಾಗಿ ಮಾಡದೆ ವರ್ಷಂಪ್ರತಿ ಕನ್ನಡವನ್ನು ಉಳಿಸಿ ಬೆಳೆಸುವಂತಾಗಲಿ ಎಂದರು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದ, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಹಾಜರಿದ್ದರು. ಕಾರ್ಯಕ್ರಮದಲ್ಲಿ ಸ್ವಾಗತವನ್ನು ಶಾಲಾ ಸಹ ಶಿಕ್ಷಕಿ ಎಸ್. ನಂದಿನಿ ನೆರವೇರಿಸಿದರು. ನಿರೂಪಣೆಯನ್ನು ಶಿಕ್ಷಕ ವಿ.ಆರ್. ಸಂದೀಪ್ ಅವರು ಮಾಡಿ, ವೈ. ಪ್ರಮೀಳಾ ಕುಮಾರಿ ವಂದಿಸಿದರು. ವಿದ್ಯಾರ್ಥಿಗಳಿಂದ ದೇಶಭಕ್ತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.

ಸಂತ ಮೈಕಲರ ಶಿಕ್ಷಣ ಸಂಸ್ಥೆಮಡಿಕೇರಿ: ಮಡಿಕೇರಿಯ ಕ್ರೆಸೆಂಟ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣ ವಾಗಿ ಆಚರಿಸಲಾಯಿತು. ಕನ್ನಡ ನಾಡಿನ ಸಂಸ್ಕೃತಿ, ಕಲೆ, ಸಾಹಿತ್ಯ, ವೈಭವದ ಕುರಿತು ಕನ್ನಡ ಶಿಕ್ಷಕಿ ರಂಜಿತ ಅವರು ಮಾತನಾಡಿದರು. ‘ಕೋಟಿ ಕಂಠ ಗಾಯನ' ಕಾರ್ಯಕ್ರಮಕ್ಕೆ ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಧ್ವನಿಗೂಡಿಸಿದರು.

ಪ್ರಾಂಶುಪಾಲೆ ಜೋಯ್ಸಿ ವಿನಯ ಅವರು ರಾಜ್ಯೋತ್ಸವ ಸಂದೇಶ ನೀಡುತ್ತಾ, ಕನ್ನಡ ನಾಡಿನ ಏಕೀಕರಣಕ್ಕೆ ಹೋರಾಡಿದ ಮಹನೀಯರನ್ನು ನೆನಪಿಸಿಕೊಳ್ಳುತ್ತಾ, ಕವಿ ಕಾವ್ಯದ ವೈಭವದ ಕುರಿತು ತಿಳಿಸಿದರು.

ಸುಲ್ಹತ್ ಸ್ವಾಗತಿಸಿ, ಸುಜ್ಯೋತಿ ವಂದಿಸಿದರು. ರಾಷ್ಟçಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.ಪೊನ್ನAಪೇಟೆ: ಇಲ್ಲಿನ ಕುಶಾಲಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಮುಖ್ಯ ಶಿಕ್ಷಕ ಅಮ್ಮತ್ತೀರ ವಾಸುವರ್ಮ, ಸಹ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.ಸಿದ್ದಾಪುರ: ಸಿದ್ದಾಪುರದ ಆಟೋ ಚಾಲಕರ ಮತ್ತು ಮಾಲೀಕರ ಸಂಘ, ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಇವರುಗಳ ಆಶ್ರಯದಲ್ಲಿ ಸಿದ್ದಾಪುರದಲ್ಲಿ ೬೮ನೇ ಕನ್ನಡ ರಾಜ್ಯೋತ್ಸವ ಆಚರಣೆ ನಡೆಯಿತು.

ಆಟೋ ಚಾಲಕರ-ಮಾಲೀಕರ ಸಂಘದ ಅಧ್ಯಕ್ಷ ಎಂ.ಆರ್. ಸಲೀಂ ಧ್ವಜಾರೋಹಣ ನೆರವೇರಿಸಿದರು. ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾವಾ ಮಾಲ್ದಾರೆ ಕಾರ್ಯಕ್ರಮದ ಬಗ್ಗೆ ಹಾಗೂ ದಿನದ ಮಹತ್ವದ ಬಗ್ಗೆ ಮಾತನಾಡಿದರು.

ಈ ಸಂದರ್ಭ ಕ.ರ.ವೇ.ಯ ಸಂಘದ ಅಧ್ಯಕ್ಷ ಎಂ.ಆರ್. ಸಲೀಂ ಧ್ವಜಾರೋಹಣ ನೆರವೇರಿಸಿದರು. ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾವಾ ಮಾಲ್ದಾರೆ ಕಾರ್ಯಕ್ರಮದ ಬಗ್ಗೆ ಹಾಗೂ ದಿನದ ಮಹತ್ವದ ಬಗ್ಗೆ ಮಾತನಾಡಿದರು.

ಈ ಸಂದರ್ಭ ಕ.ರ.ವೇ.ಯ ಸಿದ್ದಾಪುರದ ಹಾಗೂ ನೆಲ್ಲಿಹುದಿಕೇರಿ ಘಟಕಗಳ ಅಧ್ಯಕ್ಷ ಸಂತೋಷ್ ಹಾಗೂ ಆಟೋ ಸಂಘದ ಪದಾಧಿಕಾರಿಗಳಾದ ಸುರೇಶ್ ನೆಲ್ಲಿಕಲ್, ಮುತ್ತಪ್ಪ, ಸುಜಾತ ಹಾಗೂ ಕ.ಸಾ.ಪ.ದ ಪದಾಧಿಕಾರಿಗಳು ಹಾಜರಿದ್ದರು. ಆಟೋ ರಿಕ್ಷಾಗಳನ್ನು ಅಲಂಕರಿಸಲಾಗಿತ್ತು.ಮಡಿಕೇರಿ: ಸಂತ ಮೈಕಲರ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ವೇದಿಕೆಯಲ್ಲಿ ಸಂತ ಮೈಕಲರ ಶಿಕ್ಷಣ ಸಂಸ್ಥೆಗಳ ಸಂಚಾಲಕ ರೆ.ಫಾ. ನವೀನ್ ಕುಮಾರ್, ಸಂತ ಮೈಕಲರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸುಮಂತ್ ಕೆ.ಎಸ್., ಸಿಸ್ಟರ್ ಸರಿತಾ, ಸಿಸ್ಟರ್ ಪ್ರತಿಮಾ ಉಪಸ್ಥಿತರಿದ್ದರು.

ಕನ್ನಡ ಉಪನ್ಯಾಸಕ ಯು.ಸಿ. ಹರಿ ಮಾತನಾಡಿ, ಕನ್ನಡ ಸಾಹಿತ್ಯ ಅಗಾಧವಾದದ್ದು ಎಂದರು. ಹಳೆಕನ್ನಡ, ನಡುಗನ್ನಡ, ಹೊಸಗನ್ನಡದ ಕವಿಗಳ ಕುರಿತು ಮಾತನಾಡಿದರು. ‘ಕನ್ನಡಕ್ಕೆ ಹೋರಾಡು ಕಂದ’ ಕುವೆಂಪು ಅವರ ಕವನಗಳನ್ನು ವಾಚಿಸಿದರು. ಬಸವಣ್ಣನವರ ವಚನಗಳನ್ನು ಉಲ್ಲೇಖಿಸಿದರು.

ಸಂತ ಮೈಕಲರ ಶಿಕ್ಷಣ ಸಂಸ್ಥೆಗಳ ಸಂಚಾಲಕ ರೆ.ಫಾ. ನವೀನ್ ಕುಮಾರ್ ಮಾತನಾಡಿ, ಪಂಚ ದ್ರಾವಿಡ ಭಾಷೆಗಳಲ್ಲಿ ಕನ್ನಡ ದ್ರಾವಿಡ ಭಾಷೆಯಾಗಿದೆ. ಹಿರಿಯರಿಂದ ಕಥೆಗಳನ್ನು ಕೇಳುವ ಅಭ್ಯಾಸ ಇಂದು ಕಡಿಮೆಯಾಗುತ್ತಿದೆ. ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಕನ್ನಡ ಭಾಷೆಯ ಬಗ್ಗೆ ಅಧ್ಯಯನ ಮಾಡಬೇಕಾಗಿದೆ ಎಂದರು.

ಕನ್ನಡ ಉಪನ್ಯಾಸಕಿ ವಿಲ್ಮ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಯು.ಸಿ. ಹರಿ ವಂದಿಸಿದರು.

ಪೊನ್ನAಪೇಟೆ ಕೆ.ಪಿ.ಎಸ್. ಪ್ರಾಥಮಿಕ ವಿಭಾಗಸೋಮವಾರಪೇಟೆ: ತೋಳೂರುಶೆಟ್ಟಳ್ಳಿ ಡಾ. ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ಸಂಭ್ರಮ - ೫೦ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಗಿತ್ತು. ಕನ್ನಡಾಂಭೆಯ ಭಾವಚಿತ್ರಕ್ಕೆ ಶಾಲೆಯ ಪ್ರಾಂಶುಪಾಲ ಚಂದ್ರಶೇಖರ್ ರೆಡ್ಡಿ ಪುಷ್ಪಾರ್ಚನೆ ಮಾಡಿದರು. ಕನ್ನಡ ಶಿಕ್ಷಕಿ ಭವ್ಯ, ಸಮಾಜ ವಿಜ್ಞಾನ ಶಿಕ್ಷಕ ಶಬರಿಗಿರೀಶ್ ದಿನದ ಮಹತ್ವದ ಕುರಿತು ಮಾತನಾಡಿದರು. ಶಾಲೆಯ ವಿವಿಧ ೬ ತಂಡಗಳಿAದ ಗೀತಾಗಾಯನ ನಡೆಯಿತು. ಕಾರ್ಯಕ್ರಮವನ್ನು ೯ನೇ ತರಗತಿ ವಿದ್ಯಾರ್ಥಿನಿ ಬಬಿತಾ ನಿರೂಪಿಸಿದರು.ಮಡಿಕೇರಿ: ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಮಡಿಕೇರಿ ನಗರ ಹಿತರಕ್ಷಣಾ ವೇದಿಕೆ ವತಿಯಿಂದ ಮಡಿಕೇರಿ ನಗರದ ಕುವೆಂಪು ಉದ್ಯಾನವನದಲ್ಲಿ ೬೮ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಅಧ್ಯಕ್ಷ ರವಿಗೌಡ ವಹಿಸಿದ್ದರು. ಅತಿಥಿಗಳಾದ ವಿಷ್ಣು ಸೇನಾ ಜಿಲ್ಲಾಧ್ಯಕ್ಷ ರಫೀಕ್ (ದಾದಾ) ಅವರು ಕುವೆಂಪು ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಮೂಡ ಮಾಜಿ ಅಧ್ಯಕ್ಷ ಮುನೀರ್ ಅಹ್ಮದ್ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ವೇದಿಕೆಯ ತಾಲೂಕು ಅಧ್ಯಕ್ಷೆ ಕವಿತಾ ಪ್ರಸಾದ್, ನವೆಂಬರ್ ಒಂದಕ್ಕೆ ಕನ್ನಡ ರಾಜ್ಯೋತ್ಸವ ಸೀಮಿತ ವಾಗದೆ ಪ್ರತಿನಿತ್ಯವೂ ಕನ್ನಡವನ್ನು ಉಳಿಸಿಕೊಂಡು ಹೋಗುವಂತೆ ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕಲೀಲ್ ಬಾಷಾ. ಕೋಟೆ ಮಾರಿಯಮ್ಮ ದಸರಾ ಸಮಿತಿ ಅಧ್ಯಕ್ಷ ಪ್ರಭು ರೈ, ವೀರಭದ್ರ ಮುನೇಶ್ವರ ದೇವಾಲಯದ ಗೌರವ ಅಧ್ಯಕ್ಷ ಪಿ.ಜಿ. ಮಂಜುನಾಥ್, ಫೀಲ್ಡ್ ಮಾರ್ಷಲ್ ಜನರಲ್ ಕೆ.ಎಂ. ಕಾರ್ಯಪ್ಪ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ಎಂ.ಎ. ಮುನೀರ್ ಮಾಚರ್, ಕನ್ನಡ ಸಾಹಿತ್ಯ ಪರಿಷತ್‌ನ ತಾಲೂಕು ಅಧ್ಯಕ್ಷ ಅಂಬೇಕಲ್ ನವೀನ್, ನಗರಸಭಾ ಮಾಜಿ ಸದಸ್ಯ ಪ್ರಕಾಶ್ ಆಚಾರ್ಯ ಹಾಗೂ ಇತರರು ಇದ್ದರು.ಪೊನ್ನಂಪೇಟೆ: ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆ ಪ್ರಾಥಮಿಕ ವಿಭಾಗದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು. ವಿದ್ಯಾರ್ಥಿಗಳು ಕನ್ನಡ ನಾಡು ನುಡಿಯ ಮಹತ್ವ ಸಾರುವ ಗೀತೆಗಳನ್ನು ಹಾಡಿದರು. ನೃತ್ಯದ ಮೂಲಕ ಭಾಷಾಭಿಮಾನ ಮೂಡಿಸಿದರು. ಶಿಕ್ಷಕ ನಿಂಗರಾಜು ಕನ್ನಡ ಗೀತೆ ಹಾಡಿದರು. ಮುಖ್ಯ ಶಿಕ್ಷಕ ಬಿ.ಎಂ. ವಿಜಯ್ ಅವರು ಕನ್ನಡದ ಮಹತ್ವದ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪುಟ್ಟರಾಜು, ಸಮೂಹ ಸಂಪನ್ಮೂಲ ವ್ಯಕ್ತಿ ತಿರುನೆಲ್ಲಿಮಾಡ ಜೀವನ್, ಎಸ್.ಡಿ.ಎಂ.ಸಿ. ಸದಸ್ಯರು, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಜರಿದ್ದರು. ಶಿಕ್ಷಕಿ ಗಂಗಾಮಣಿ ಕಾರ್ಯಕ್ರಮ ನಿರೂಪಿಸಿದರು.ಕೂಡಿಗೆ: ಕುಶಾಲನಗರ ಕನ್ನಡ ಸಿರಿ ಸ್ನೇಹ ಬಳಗದ ವತಿಯಿಂದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ಅಂಗವಾಗಿ ಕನ್ನಡ ರಾಜ್ಯೋತ್ಸವ ಹಾಗೂ ಸುವರ್ಣ ಹೆಜ್ಜೆಯಲ್ಲಿ ಕರ್ನಾಟಕ ವಿಚಾರಗೋಷ್ಠಿ ನಡೆಯಿತು.

ಕಾರ್ಯಕ್ರಮ ಉದ್ಘಾಟನೆಯನ್ನು ಕಣಿವೆಯ ಹಿರಿಯ ಸಾಹಿತಿ ಭಾರದ್ವಾಜ್ ಕೆ. ಆನಂದತೀರ್ಥ ನೆರವೇರಿಸಿ ಕನ್ನಡ ರಾಜ್ಯೋತ್ಸವ ದಿನದ ಮಹತ್ವದ ಬಗ್ಗೆ ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಕೆ. ಪ್ರಕಾಶ್ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಮುಖ್ಯ ಅತಿಥಿಗಳಾಗಿ ಕುಶಾಲನಗರ ಪುರಸಭಾ ಸದಸ್ಯ ವಿ.ಎಸ್. ಆನಂದ್ ಕುಮಾರ್, ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಬಿ.ಎನ್. ಪುಷ್ಪ, ವಿವಿಧ ಕನ್ನಡ ಪರ ಸಂಘಟನೆ ಅಧ್ಯಕ್ಷರುಗಳಾದ ಎಂ. ಕೃಷ್ಣ, ನಾಗೇಗೌಡ, ಅಣ್ಣಯ್ಯ, ಮೈಸೂರಿನ ಪ್ರಾಂಶುಪಾಲ ಪಿ.ಎಸ್. ಜಾನ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ‘೫೦ ವರ್ಷಗಳಲ್ಲಿ ಕರ್ನಾಟಕ ಸಾಂಸ್ಕೃತಿಕ ವೈಭವ’ ಎಂಬ ವಿಷಯ ಮಂಡನೆಯನ್ನು ಹಂಡ್ರAಗಿ ನಾಗರಾಜ್, ‘ಕನ್ನಡಪರ ಸಂಘಟನೆಗಳ ಕೊಡುಗೆ’ ಎಂಬ ವಿಷಯದ ಬಗ್ಗೆ ಎಂ.ಡಿ. ರಂಗಸ್ವಾಮಿ ಮಂಡಿಸಿದರು. ಚುಟುಕು ಸಾಹಿತ್ಯದಲ್ಲಿ ಹಾಸ್ಯ ಮತ್ತು ಮೌಲ್ಯ ಎಂಬ ವಿಷಯದ ಬಗ್ಗೆ ಕುಶಾಲನಗರ ಸರಕಾರಿ ಪ್ರೌಢಶಾಲೆಯ ಶಿಕ್ಷಕರು ಹಾಗೂ ಕಲಾವಿದರು ಉ.ರಾ. ನಾಗೇಶ್ ಮಂಡಿಸಿದರು.

ಈ ಸಂದರ್ಭ ಕನ್ನಡಪರ ಸಂಘಟನೆಗಳ ಮುಖ್ಯಸ್ಥರು ಹಾಗೂ ಕನ್ನಡಾಭಿಮಾನಿಗಳು ಹಾಗೂ ಕನ್ನಡ ಸಿರಿ ಸ್ನೇಹ ಬಳಗದ ಸದಸ್ಯರು, ತಾಲೂಕು ಮಟ್ಟದ ವಿವಿಧ ಶಾಲೆಯ ಶಿಕ್ಷಕರು ಹಾಜರಿದ್ದರು.

ಪ್ರಾಂಶುಪಾಲ ಪಿ.ಎಸ್. ಜಾನ್ ಸ್ವಾಗತಿಸಿ, ರಮೇಶ್ ಕಾರ್ಯಕ್ರಮ ನಿರೂಪಿಸಿ, ಕೆ.ಕೆ. ನಾಗರಾಜಶೆಟ್ಟಿ ವಂದಿಸಿದರು.ಮಡಿಕೇರಿ ಆಟೋ ನಿಲ್ದಾಣ

ಮಡಿಕೇರಿ: ನಗರದ ಸರಕಾರಿ ಬಸ್ ನಿಲ್ದಾಣದ ಎದುರಿನ ಆಟೋ ನಿಲ್ದಾಣದಲ್ಲಿ ರಾಜ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣ ನಡೆಸಿದ ಹಿರಿಯ ಆಟೋ ಚಾಲಕ ಜಾಲಿ ಅವರು ಕನ್ನಡವನ್ನು ನಾವೆಲ್ಲಾ ಉಳಿಸಿ ಬೆಳೆಸು ವಂತಾಗಬೇಕು ಎಂಬ ಸಂದೇಶ ನೀಡಿದರು. ಈ ಸಂದರ್ಭ ಆಟೋ ಚಾಲಕರು, ಸಾರ್ವಜನಿಕರು ಹಾಜರಿದ್ದರು. (ಮುಂದುವರಿಯುವುದು)