ಮಡಿಕೇರಿ, ನ. ೬: ಡಿವೈನ್ ಪಾರ್ಕ್ ಸಂಸ್ಥೆಯ ಅಂಗ ಸಂಸ್ಥೆ ಯಾದ ಮೂರ್ನಾಡು ವಿವೇಕ ಜಾಗೃತ ಬಳಗದ ವತಿಯಿಂದ ವಿವೇಕ ಸಂಪದ ಓದುಗರ ಸಮಾವೇಶ ನಡೆಯಿತು. ಸಿದ್ದಾಪುರದ ಕರಡಿಗೋಡು ಗ್ರಾಮದ ಶ್ರೀ ಬಸವೇಶ್ವರ ದೇವಾಲಯದ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ಮಾತನಾಡಿದ ಡಿವೈನ್ ಪಾರ್ಕ್ನ ಅಧಿಕಾರಿ ಗುರುಪ್ರಸಾದ್, ಓದುಗರ ಸಮಾವೇಶದ ಕುರಿತು ವಿವರಿಸಿದರು.
ಕಾರ್ಯಕ್ರಮದಲ್ಲಿ ಮೂರ್ನಾಡು ವಿವೇಕ ಜಾಗೃತ ಬಳಗದ ಅಧ್ಯಕ್ಷೆ ದಿವ್ಯ ತೇಜಕುಮಾರ್, ಉಪಾಧ್ಯಕ್ಷ ಯಶವಂತ್ ಹಾಗೂ ಸರ್ವ ಸದಸ್ಯರು ಹಾಜರಿದ್ದರು. ಶೃತಿ ಸ್ವಾಗತಿಸಿದರು. ಬಿ.ಜಿ. ಸೌಮ್ಯ ನಿರೂಪಿಸಿದರು. ಸಿ.ಜಿ. ಲೀಲಾವತಿ ವಂದಿಸಿದರು.