ಕೂಡಿಗೆ, ನ. ೬: ರಾತ್ರಿ ಸುರಿದ ಭಾರಿ ಮಳೆ ಗಾಳಿಗೆ ಮಲ್ಲೇನಹಳ್ಳಿ ಗ್ರಾಮದ ಕೃಷ್ಣೇಗೌಡ ಎಂಬವರಿಗೆ ಸೇರಿದ ಮನೆಯ ಸಮೀಪದ ಕೊಟ್ಟಿಗೆಯ ಮೇಲ್ಚಾವಣಿ ಸಹಿತ ಗೋಡೆ ಬಿದ್ದ ಪರಿಣಾಮ ಹಸು ಸಾವನ್ನಪ್ಪಿದೆ.
ಸ್ಥಳಕ್ಕೆ ಕೂಡಿಗೆ ಗ್ರಾಮ ಪಂಚಾಯಿತಿ ಸದಸ್ಯ ಅರುಣ್ ರಾವ್, ಕಂದಾಯ ಪರಿವೀಕ್ಷಕ ಸಂತೋಷ್, ಲೆಕ್ಕಾಧಿಕಾರಿ ಗುರುದರ್ಶನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.