ನೇಪಾಳದಲ್ಲಿ ಮತ್ತೆ ೫. ೬ರಷ್ಟು ತೀವ್ರತೆಯ ಪ್ರಬಲ ಭೂಕಂಪನ
ನವದೆಹಲಿ, ನ. ೬: ಕಳೆದ ಮೂರು ದಿನಗಳಿಂದ ಭೂಕಂಪನದಿAದ ೧೫೦ಕ್ಕೂ ಹೆಚ್ಚು ಜನರನ್ನು ಕಳೆದುಕೊಂಡಿರುವ ನೇಪಾಳದಲ್ಲಿ ಸೋಮವಾರ ಮತ್ತೆ ಪ್ರಬಲ ಭೂಕಂಪನ ಸಂಭವಿಸಿದೆ. ಪಶ್ಚಿಮ ನೇಪಾಳದಲ್ಲಿ ೫.೬ ತೀವ್ರತೆಯ ಭೂಕಂಪನವಾಗಿದೆ. ಇದರಿಂದ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರದ ಕೇಂದ್ರ ತಿಳಿಸಿದೆ. ಉತ್ತರ ಪ್ರದೇಶದ ಅಯೋಧ್ಯೆಯ ಉತ್ತರಕ್ಕೆ ೨೩೩ ಕಿಲೋಮೀಟರ್ ದೂರದಲ್ಲಿ ಭೂಕಂಪದ ಕೇಂದ್ರಬಿAದುವಿದೆ ಎಂದು ಅದು ಹೇಳಿದೆ.ದೆಹಲಿ ಮತ್ತು ಎನ್ ಸಿಆರ್ ನ ಹಲವೆಡೆ ಪೀಠೋಪಕರಣಗಳು ಅಲುಗಾಡಿದ ಬಗ್ಗೆ ವರದಿಯಾಗಿದ್ದು, ಭೂಕಂಪನ ಸ್ಥಳೀಯ ಜನರಲ್ಲಿ ಭೀತಿಯನ್ನುಂಟು ಮಾಡಿದೆ. ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಜನರು ವಸತಿ ಕಟ್ಟಡಗಳಿಂದ ಹೊರಬರುವ ದೃಶ್ಯಗಳನ್ನು ಹಂಚಿಕೊAಡಿದ್ದಾರೆ. ೨೦೧೫ ರ ನಂತರದ ಅತ್ಯಂತ ಭೀಕರವಾದ ೬.೪ ತೀವ್ರತೆಯ ಭೂಕಂಪವು ಶುಕ್ರವಾರ ರಾತ್ರಿ ನೇಪಾಳವನ್ನು ಅಪ್ಪಳಿಸಿತ್ತು. ಹಿಮಾಲಯ ರಾಷ್ಟ್ರದ ದೂರದ ಪರ್ವತ ಪ್ರದೇಶದಲ್ಲಿ ನೂರಾರು ಮನೆಗಳನ್ನು ನಾಶಪಡಿಸಿದ್ದು, ಕನಿಷ್ಠ ೧೫೭ ಜನರು ಸಾವನ್ನಪ್ಪಿದ್ದಾರೆ ಮತ್ತು ೧೬೦ ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ನೇಪಾಳವು ಪ್ರಪಂಚದ ಅತ್ಯಂತ ಸಕ್ರಿಯವಾದ ಟೆಕ್ಟೋನಿಕ್ ವಲಯಗಳಲ್ಲಿ ಒಂದಾಗಿದ್ದು, ದೇಶ ಭೂಕಂಪದಿAದ ಅತ್ಯಂತ ಜರ್ಝರಿತವಾಗಿದೆ.
ಪತ್ನಿಗೆ ಚಾಕುವಿನಿಂದ ಇರಿದು ಬಾಲ್ಕನಿಯಿಂದ ಜಿಗಿದ ಪತಿ
ಲಖನೌ, ನ. ೬: ಪತ್ನಿಯನ್ನು ಇಬ್ಬರು ಮಕ್ಕಳ ಎದುರೇ ಚಾಕುವಿನಿಂದ ಇರಿದು ಕೊಂದ ೪೬ ವರ್ಷದ ವ್ಯಕ್ತಿಯೊಬ್ಬ ನಂತರ ಅಪಾರ್ಟ್ ಮೆಂಟ್ ವೊಂದರ ಮೊದಲ ಅಂತಸ್ತಿನ ಬಾಲ್ಕನಿಯಿಂದ ಜಿಗಿದಿರುವ ಘಟನೆ ಉತ್ತರ ಪ್ರದೇಶದ ಲಖನೌನಲ್ಲಿ ನಡೆದಿದೆ. ಘಟನೆಯಲ್ಲಿ ಪತ್ನಿ ಶಿವಾನಿ ಕಪೂರ್ (೪೩) ಅವರನ್ನು ೧೩ ಮತ್ತು ೧೨ ವರ್ಷದ ಇಬ್ಬರು ಮಕ್ಕಳ ಸಮ್ಮುಖದಲ್ಲಿ ಚಾಕುವಿನಿಂದ ಇರಿದು ಕೊಂದ ಆರೋಪಿ ಪತಿಗೆ ಗಾಯಗಳಾಗಿದ್ದು, ಪ್ರಸ್ತುತ ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದ (ಕೆಜಿಎಂಯು) ಟ್ರಾಮಾ ಸೆಂಟರ್ನಲ್ಲಿ ಪೊಲೀಸ್ ಕಸ್ಟಡಿಯಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾನೆ. ಶಿವಾನಿ ಕಪೂರ್ ಮತ್ತು ಆದಿತ್ಯ ಕಪೂರ್ ಮದುವೆಯಾಗಿ ೧೪ ವರ್ಷಗಳಾಗಿದ್ದು, ಇತ್ತೀಚಿಗೆ ಅವರ ಸಂಬAಧದಲ್ಲಿ ಬಿರುಕು ಮೂಡಿತ್ತು, ಸುಮಾರು ಆರು ತಿಂಗಳಿನಿAದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು ಎಂದು ಲಖನೌದ ಸೆಂಟ್ರಲ್ ಉಪ ಪೊಲೀಸ್ ಆಯುಕ್ತ ಅಪರ್ಣಾ ರಜತ್ ಕೌಶಿಕ್ ತಿಳಿಸಿದ್ದಾರೆ. ಶಿವಾನಿ ಮತ್ತು ಅವರ ಇಬ್ಬರು ಮಕ್ಕಳು ಆಲ್ಯಾ ಅಪಾರ್ಟ್ಮೆಂಟ್ನ ಮೊದಲ ಮಹಡಿಯ ಫ್ಲಾಟ್ನಲ್ಲಿ ವಾಸಿಸುತ್ತಿದ್ದರೆ, ಆದಿತ್ಯ ಮಹಾನಗರದ ಮತ್ತೊಂದು ಮನೆಯಲ್ಲಿ ವಾಸಿಸುತ್ತಿದ್ದರು. ಕುಡಿದ ಅಮಲಿನಲ್ಲಿದ್ದ ಆದಿತ್ಯ ತನ್ನ ಪತ್ನಿಯ ಫ್ಲಾಟ್ಗೆ ಬಂದಾಗ ಈ ಘಟನೆ ನಡೆದಿದೆ. ಆರಂಭದಲ್ಲಿ, ಶಿವಾನಿ ಬಾಗಿಲು ತೆರೆಯಲು ನಿರಾಕರಿಸಿದ್ದಾಳೆ. ಆದರೆ ಆದಿತ್ಯ ತಮ್ಮ ಮಕ್ಕಳನ್ನು ನೋಡಬೇಕೆಂದು ಕಿರುಚಲು ಪ್ರಾರಂಭಿಸಿದಾಗ ಆಕೆ ಅಂತಿಮ ಬಾಗಿಲು ತೆರೆದಿದ್ದಾಳೆ. ಮಾತಿನ ಚಕಮಕಿ ನಡೆದು ಆದಿತ್ಯ ಕೋಪದ ಭರದಲ್ಲಿ ಅಡುಗೆ ಚಾಕುವಿನಿಂದ ಇರಿದಿದ್ದಾನೆ. ಆದಿತ್ಯ ಮೊದಲ ಮಹಡಿಯ ಬಾಲ್ಕನಿಯಿಂದ ಜಿಗಿದಿದ್ದು, ಅಪಾರ್ಟ್ಮೆಂಟ್ ಸಮುಚ್ಚಯದ ಇತರ ನಿವಾಸಿಗಳು ಮತ್ತು ಭದ್ರತಾ ಸಿಬ್ಬಂದಿ ಆರೋಪಿಯನ್ನು ಹಿಡಿದು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ರಾಷ್ಟಿçÃಯ ಮಾದರಿ ಜಾರಿಗೊಳಿಸಿ:ಕೇಂದ್ರಕ್ಕೆ ಸುಪ್ರೀಂ
ನವದೆಹಲಿ, ನ. ೬: ದೇಶಾದ್ಯಂತ ಎಲ್ಲಾ ಸರ್ಕಾರಿ ಅನುದಾನಿತ ಹಾಗೂ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರ ಸಂಖ್ಯೆಗೆ ಅನುಗುಣವಾಗಿ ಶೌಚಾಲಯ ನಿರ್ಮಾಣಕ್ಕೆ ರಾಷ್ಟ್ರೀಯ ಮಾದರಿಯನ್ನು ಜಾರಿಗೊಳಿಸಲು ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ನಿರ್ದೇಶನ ನೀಡಿದೆ.ಸಿಜೆಐ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರಿದ್ದ ಪೀಠ, ರಾಷ್ಟ್ರಾದ್ಯಂತ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ನ್ಯಾಪ್ ಕಿನ್ ಗಳ ವಿತರಣೆಗಾಗಿ ರೂಪಿಸಿರುವ ನೀತಿಯ ಬಗ್ಗೆಯೂ ಕೇಳಿದ್ದು ಸ್ಯಾನಿಟರಿ ನ್ಯಾಪ್ಕಿನ್ ವಿತರಣೆ ಪ್ರಕ್ರಿಯೆಯಲ್ಲಿ ಕೇಂದ್ರ ಏಕರೂಪತೆ ತರಬೇಕಾಗಿರುವುದಾಗಿ ಹೇಳಿದೆ. ವಿಚಾರಣೆ ವೇಳೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದ್ದು, ಶಾಲೆಗೆ ಹೋಗುವ ಹೆಣ್ಣು ಮಕ್ಕಳಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್ಕಿನ್ಗಳನ್ನು ವಿತರಿಸಲು ಕರಡು ರಾಷ್ಟ್ರೀಯ ನೀತಿಯನ್ನು ರೂಪಿಸಲಾಗಿದೆ ಮತ್ತು ಅಭಿಪ್ರಾಯಗಳನ್ನು ಪಡೆಯಲು ಸಂಬAಧಪಟ್ಟವರಿಗೆ ಕಳುಹಿಸಲಾಗಿದೆ ಎಂದು ತಿಳಿಸಿದೆ. ಶಾಲೆಗಳಲ್ಲಿ ಓದುತ್ತಿರುವ ಬಾಲಕಿಯರ ಋತುಚಕ್ರದ ನೈರ್ಮಲ್ಯದ ಬಗ್ಗೆ ಏಕರೂಪದ ರಾಷ್ಟ್ರೀಯ ನೀತಿಯನ್ನು ರೂಪಿಸುವ ಕುರಿತು ಕೇಂದ್ರಕ್ಕೆ ತಮ್ಮ ಪ್ರತಿಕ್ರಿಯೆಯನ್ನು ಸಲ್ಲಿಸುವಲ್ಲಿ ರಾಜ್ಯಗಳು, ವಿಫಲವಾದರೆ "ಕಠಿಣ ಕಾನೂನು ಪ್ರಯೋಗ"ವನ್ನು ಆಶ್ರಯಿಸುವುದಾಗಿ ಸುಪ್ರೀಂ ಕೋರ್ಟ್ ಈ ಹಿಂದೆ ಎಚ್ಚರಿಕೆ ನೀಡಿತ್ತು.
ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು!
ಬೆಂಗಳೂರು, ನ. ೬: ಕರ್ನಾಟಕದಲ್ಲಿರುವುದು ಸುಳ್ಳಿನ ಕಂತೆ ಸರ್ಕಾರ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಆರೋಪಗಳನ್ನು ತಿರಸ್ಕರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿಯಿಂದ ಇಂತಹ ಮಾತನ್ನು ನಿರೀಕ್ಷಿಸಿರಲಿಲ್ಲ, ಅಂತಹ ಮಾತುಗಳಿಗೆ ಸಾಕ್ಷ್ಯಾಧಾರ ನೀಡಲಿ ಎಂದು ಸೋಮವಾರ ಆಗ್ರಹಿಸಿದ್ದಾರೆ. ಭಾನುವಾರ ಮಧ್ಯಪ್ರದೇಶದ ಖಾಂಡ್ವಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಮೋದಿ, ಕಾಂಗ್ರೆಸ್ ಕರ್ನಾಟಕವನ್ನು ಹಾಳು ಮಾಡಿದೆ. ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತಗೊಂಡಿದೆ ಎಂದು ಹೇಳಿದ್ದರು. ಅಲ್ಲದೇ ತಾನೆಷ್ಟು ದಿನ ಸಿಎಂ ಎಂಬುದು ಸಿದ್ದುಗೇ ಗೊತ್ತಿಲ್ಲ ಎಂದು ಅವರು ಅನುಮಾನ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರ ಇರುವ ಕಡೆಗಳಲ್ಲಿ ಭ್ರಷ್ಟಾಚಾರ, ಆಂತರಿಕ ಕಚ್ಚಾಟ ಮತ್ತು ರಾಜ್ಯಗಳನ್ನು ಹಾಳು ಮಾಡುತ್ತಿದೆ . ಆ ರಾಜ್ಯಗಳಲ್ಲಿ ಮುಖ್ಯಮಂತ್ರಿ ಮತ್ತು ಅವರ ಉಪ ಮುಖ್ಯಮಂತ್ರಿಗಳ ನಡುವೆ ಲೂಟಿಗಾಗಿ ಪೈಪೋಟಿ ನಡೆಯುತ್ತಿದೆ ಎಂದು ಆರೋಪಿಸಿದರು. ಇಂತಹ ಹೇಳಿಕೆ ಸುಳ್ಳಿನ ರಾಜಕೀಯ ಮತ್ತು ಚುನಾವಣಾ ಭಾಷಣ ಎಂದು ಸಿಎಂ ಸಿದ್ದರಾಮಯ್ಯ ಹೇಳುವ ಮೂಲಕ ಪ್ರಧಾನಿಗೆ ತಿರುಗೇಟು ನೀಡಿದ್ದಾರೆ. ಪ್ರಧಾನಿ ಅವರ ಆರೋಪ ಸಂಪೂರ್ಣ ಸುಳ್ಳು. ಮೇ ತಿಂಗಳಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ಪ್ರಧಾನಿ ಹತಾಶರಾಗಿದ್ದಾರೆ. ಅವರು ೪೮ ಬಾರಿ ರಾಜ್ಯಕ್ಕೆ ಬಂದರು, ಆದರೆ ಅವರು ಪ್ರಚಾರಕ್ಕೆ ಹೋದಲ್ಲೆಲ್ಲಾ, ಬಿಜೆಪಿ ಸೋತಿದೆ. ಅದಕ್ಕಾಗಿಯೇ ಇಂದಿನವರೆಗೂ ವಿರೋಧ ಪಕ್ಷದ ನಾಯಕನನ್ನು ನೇಮಿಸಿಲ್ಲ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಪ್ರತಿಮಾ ಕೊಲೆ ಪ್ರಕರಣ: ಪೊಲೀಸ್ ಕಸ್ಟಡಿಗೆ ಆರೋಪಿ ಕಿರಣ್!
ಬೆಂಗಳೂರು, ನ. ೬: ಸಾಕಷ್ಟು ಸುದ್ದಿಗೆ ಗ್ರಾಸವಾಗಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬAಧಿಸಿAತೆ ಬಂಧಿತನಾಗಿರುವ ಆರೋಪಿ ಕಿರಣ್ ಗೆ ನವೆಂಬರ್ ೧೫ರವರೆಗೆ ಪೊಲೀಸ್ ಕಸ್ಟಡಿಗೆ ಬೆಂಗಳೂರಿನ ೨ನೇ ಂಅಒಒ ಕೋರ್ಟ್ ಆದೇಶಿಸಿದೆ. ಪ್ರತಿಮಾ ಅವರ ಮಾಜಿ ಕಾರು ಚಾಲಕ ಕಿರಣ್ನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದು ಇಂದು ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಇನ್ನು ಆರೋಪಿಯನ್ನು ೧೧ ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಆದರೆ ಕೋರ್ಟ್ ೧೦ ದಿನಗಳ ಕಾಲ ಕಸ್ಟಡಿಗೆ ನೀಡಿದೆ. ಸುಬ್ರಮಣ್ಯಪುರ ಪೊಲೀಸರು ಪ್ರತಿಮಾ ಕೊಲೆಗೆ ಸಂಬAಧಿಸಿದAತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು ಈ ವೇಳೆ ತಾನೇ ಕೊಲೆ ಮಾಡಿರುವುದಾಗಿ ಕಿರಣ್ ಒಪ್ಪಿಕೊಂಡಿದ್ದಾನೆ ಎಂದು ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ರಾಹುಲ್ ಕುಮಾರ್ ತಿಳಿಸಿದ್ದಾರೆ. ಪೊಲೀಸ್ ವಿಚಾರಣೆ ವೇಳೆ ಪ್ರತಿಮಾ ಒಂದು ವಾರದ ಹಿಂದೆ ಕಿರಣ್ನನ್ನು ಕೆಲಸದಿಂದ ತೆಗೆದಿದ್ದರು. ಕೆಲ ವಿಚಾರಗಳಿಗೆ ಪ್ರತಿಮಾ ಮತ್ತು ಕಿರಣ್ ನಡುವೆ ಭಿನ್ನಾಭಿಪ್ರಾಯ ಬಂದಿತ್ತು ಎಂದು ಹೇಳಲಾಗಿದೆ. ಕೆಲಸದಿಂದ ವಜಾಗೊಳಿಸಿದ್ದಕ್ಕೆ ಕೋಪಗೊಂಡಿದ್ದ ಕಿರಣ್ ಈ ಕೃತ್ಯ ವೆಸಗಿದ್ದಾರೆ ಎಂದು ಹೇಳಿದ್ದಾರೆ.