ಚೆಯ್ಯಂಡಾಣೆ, ನ. ೬: ಕೊಡಗು ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ನಾಪೋಕ್ಲು ಗ್ರಾಮ ಪಂಚಾಯತ್, ಪಶುಪಾಲನಾ ವೈದ್ಯಕೀಯ ಸೇವಾ ಇಲಾಖೆ ಕೊಡಗು ಹಾಗೂ ಬೇತು ಗ್ರಾಮದ ಶ್ರೀ ಮಕ್ಕಿ ಶಾಸ್ತಾವು ಸೇವಾ ಕಾರ್ಯಪಡೆ ಇವುಗಳ ಸಂಯುಕ್ತಾಶ್ರಯದಲ್ಲಿ ತಾ.೮ ರಂದು ಬೇತು ಗ್ರಾಮದ ಊರ್‌ಮಂದ್‌ನಲ್ಲಿ ಉಚಿತ ಪಶು ಚಿಕಿತ್ಸಾ ಶಿಬಿರ ಮತ್ತು ನಾಯಿಗಳಿಗೆ ರೇಬೀಸ್ ಲಸಿಕಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಬೆಳಗ್ಗೆ ೧೦ ಗಂಟೆಯಿAದ ಮಧ್ಯಾಹ್ನ ೧ ಗಂಟೆವರೆಗೆ ಶಿಬಿರ ನಡೆಯಲಿದೆ. ನಾಪೋಕ್ಲು ಗ್ರಾಮ ಪಂಚಾಯಿತಿ ಸದಸ್ಯ ಸಾಬಾ ತಿಮ್ಮಯ್ಯ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಉದ್ಘಾಟನೆಯನ್ನು ಗ್ರಾ.ಪಂ. ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿ ಗಳಾಗಿ ಕೊಡಗು ಪಶುಪಾಲನಾ ಪಶು ವೈದ್ಯಕೀಯ

ನಾಳೆ ಉಚಿತ ಪಶು ಚಿಕಿತ್ಸಾ ಶಿಬಿರ

(ಮೊದಲ ಪುಟದಿಂದ) ಸೇವಾ ಇಲಾಖೆಯ ಉಪ ನಿರ್ದೇಶಕ ಡಾ.ಲಿಂಗರಾಜು ದೊಡ್ಡಮನಿ ಹಾಗೂ ತಾಲೂಕು ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ. ಪ್ರಸನ್ನ ಪಾಲ್ಗೊಳ್ಳಲಿದ್ದಾರೆ.

ಶಿಬಿರದಲ್ಲಿ ತಜ್ಞ ವೈದ್ಯರಿಂದ ಉಚಿತ ಪಶು ಆರೋಗ್ಯ ತಪಾಸಣೆ, ಹಸುಗಳ ಗರ್ಭ ಪರೀಕ್ಷೆ, ಬಂಜೆ ರಾಸುಗಳ ಪರೀಕ್ಷೆ, ಅವರ್ಣಿತ ಹೋರಿಗಳ ಕಸಿ ಹಾಗೂ ಉತ್ತಮ ರಾಸುಗಳಿಗೆ ಪ್ರೋತ್ಸಾಹಕ ಬಹುಮಾನ ವಿತರಣೆ ನಡೆಯಲಿದೆ. ಶಿಬಿರದಲ್ಲಿ ಜಾನುವಾರುಗಳ ವೈಜ್ಞಾನಿಕ ಸಾಕಾಣಿಕೆ ಬಗ್ಗೆ ಹಾಗೂ ಇಲಾಖೆಯ ವಿವಿಧ ಹೊಸ ಕಾರ್ಯಕ್ರಮಗಳ ಬಗ್ಗೆ ವೈದ್ಯರು ಮಾಹಿತಿ ನೀಡಲಿದ್ದಾರೆ.