ಮಡಿಕೇರಿ, ನ. ೬: ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ತಾ. ೮ ರಂದು ವೀರಾಜಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮತ್ತು ತಾ. ೧೦ ರಂದು ಮಡಿಕೇರಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಆಯಾಯ ದಿನಗಳಂದು ಬೆಳಿಗ್ಗೆ ೧೧ ಗಂಟೆಯಿAದ ೧ ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ.
ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು.
ಲೋಕಾಯುಕ್ತ ದೂರು ಅರ್ಜಿ ಸ್ವೀಕಾರ
(ಮೊದಲ ಪುಟದಿಂದ) ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂ.ಸಂ. ೦೮೨೭೨-೨೯೫೨೯೭ ನ್ನು ಸಂಪರ್ಕಿಸಬಹುದಾಗಿದೆ.