ಮಡಿಕೇರಿ, ನ. ೭: ನಗರದ ಐಡಿಬಿಐ ಬ್ಯಾಂಕ್ ಎದುರು ಪ್ರಭಾಕರ್ ಎಂಬವರ ಮನೆಯಲ್ಲಿ ನಡೆದಿದ್ದ ದರೋಡೆ ಪ್ರಕರಣದ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಮೊನ್ನೆದಿನ ಸಂಜೆ ಪ್ರಭಾಕರ್ ಅವರು ವಾಕಿಂಗ್‌ಗೆ ತೆರಳಿದ್ದ ಸಂದರ್ಭ ಅವರ ಮನೆಗೆ ನುಗ್ಗಿ ಅವರ ಪತ್ನಿ ಸಾಕಮ್ಮ ಅವರ ಮೇಲೆ ಹಲ್ಲೆ ನಡೆಸಿ ತಾಳಿ ಸರ ಕಿತ್ತು ಪರಾರಿಯಾಗಿದ್ದ ಆರೋಪಿ ರಾಜಸ್ಥಾನ ಮೂಲದ ವಿಕಾಸ್ ಚೋರ್ಡಿಯಾ (೩೩) ಎಂಬಾತನನ್ನು ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸಿದ್ದರು. ಬಳಿಕ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ೧೪ ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.