ಶನಿವಾರಸಂತೆ, ನ. ೭: ಯಾವುದೇ ಇಲಾಖೆಗಳಾಗಲೀ ಅಧಿಕಾರಿಗಳಾಗಲಿ ಪ್ರತಿಫಲಾಪೇಕ್ಷೆ ಇಲ್ಲದೆ ಜನಸಾಮಾನ್ಯರ ಕೆಲಸ ಮಾಡಿಕೊಡಬೇಕು. ಪೂರಕವಾದ ಎಲ್ಲಾ ದಾಖಲಾತಿಗಳಿದ್ದು ಅರ್ಹತೆ ಇದ್ದಲ್ಲಿ ಸರ್ಕಾರದ ಯೋಜನೆಗಳನ್ನು ಪಡೆಯಲು ಸಾರ್ವಜನಿಕರು ಸಂಬAಧಪಟ್ಟ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಿದಲ್ಲಿ ತಕರಾರಿಲ್ಲದೇ ಅವರು ಆ ಕೆಲಸ ಮಾಡಿಕೊಡಲೇಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಸಮಿತಿ ಸದಸ್ಯ ಕಾರ್ಯದರ್ಶಿ ಕೆ. ಗೋಪಾಲಕೃಷ್ಣ ಅಭಿಪ್ರಾಯ ವ್ಯಕ್ತಪಡಿಸಿದರು.

ಸಮೀಪದ ಕೊಡ್ಲಿಪೇಟೆಯ ಸಂಜೀವಿನಿ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಶ್ರೀರಾಮಲಿಂಗ ಚೌಡೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘ, ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆ, ಪೊಲೀಸ್ ಇಲಾಖೆ, ಗ್ರಾಮ ಪಂಚಾಯಿತಿಗಳು, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅರಣ್ಯ ಇಲಾಖೆ, ಅಬಕಾರಿ ಇಲಾಖೆ, ಕಾರ್ಮಿಕರ ಇಲಾಖೆ ಸಹಯೋಗದಲ್ಲಿ ಜಾಗೃತಿ ಅರಿವು ಸಪ್ತಾಹ ೨೦೨೩ ರ ಪ್ರಯುಕ್ತ ನಡೆದ “ಭ್ರಷ್ಟಾಚಾರ ವಿರುದ್ಧ ಜಾಗೃತಿ ಮೂಡಿಸಲು ಕಾನೂನು ಅರಿವು ಕಾರ್ಯಕ್ರಮ’’ ಉದ್ದೇಶಿಸಿ ಅವರು ಮಾತನಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಸೋಮವಾರಪೇಟೆ ನ್ಯಾಯಾಲಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಕೆ. ಗೋಕುಲ್ ಮಾತನಾಡಿ, ಭ್ರಷ್ಟಾಚಾರ ನಿರ್ಮೂಲನೆ ಮಾಡುವಲ್ಲಿ ಲೋಕ ಅದಾಲತ್ ಕಾರ್ಯಕ್ರಮ ಉತ್ತಮವಾಗಿ ಕೆಲಸ ಮಾಡುತ್ತಿದೆ. ಪ್ರತಿಯೊಬ್ಬರು ಕಾನೂನು ವ್ಯವಸ್ಥೆ ಬಗ್ಗೆ ಅರಿವು ಹೊಂದಿದ್ದರೆ ಭ್ರಷ್ಟಾಚಾರದಂತಹ ಸಮಸ್ಯೆ ಬಗೆ ಹರಿಸಲು ಸಹಕಾರಿಯಾಗುತ್ತದೆ. ಕಾನೂನು ನಿಯಮಗಳ ಬಗ್ಗೆ ತಿಳಿದುಕೊಳ್ಳುವುದು ಅತ್ಯಗತ್ಯವಾಗಿದ್ದು, ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಇತರ ಇಲಾಖೆಗಳ ಸಹಭಾಗಿತ್ವದಲ್ಲಿ ಸಾರ್ವಜನಿಕರಿಗೆ ಭ್ರಷ್ಟಾಚಾರ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಮುಖ್ಯ ಅತಿಥಿ ವಕೀಲರ ಸಂಘದ ಅಧ್ಯಕ್ಷ ಕೆ.ಹೆಚ್. ವಿಠಲ್ ಮಾತನಾಡಿ, ಸಾರ್ವಜನಿಕರು ಭ್ರಷ್ಟಾಚಾರದ ವಿರುದ್ಧ ಚಿಂತನೆ ಮಾಡುವುದರ ಜತೆಗೆ ಕಾನೂನು ನಿಯಮದ ಬಗ್ಗೆಯೂ ಜಾಗೃತಿ ಮೂಡಿಸಿಕೊಂಡರೆ ಭ್ರಷ್ಟಾಚಾರದಂತಹ ಅವ್ಯವಸ್ಥೆ ವಿರುದ್ಧ ಹೋರಾಟ ಮಾಡಲು ಸಹಕಾರಿಯಾಗುತ್ತದೆ ಎಂದರು.

ವಕೀಲ ಸಿ.ಎಸ್. ಪ್ರತಾಪ್ ಉಪನ್ಯಾಸ ನೀಡಿದರು. ತಾಲೂಕು ಹಿರಿಯ ಕಾರ್ಮಿಕ ನಿರೀಕ್ಷಕ ಎಂ.ಎA. ಯತ್ನಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿದರು

ಕೊಡ್ಲಿಪೇಟೆ ಸಂಜೀವಿನಿ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಕೆ.ಎ. ನಾಗೇಶ್, ಉಪಾಧ್ಯಕ್ಷ ಕೆ.ಸಿ. ಶೇಖರ್, ಪ್ರಧಾನ ಕಾರ್ಯದರ್ಶಿ ಡಿ.ಆರ್. ವೇದಕುಮಾರ್, ಉಪಕಾರ್ಯದರ್ಶಿ ಇಪ್ತಿಕರ್ ಪಾಷ, ಶ್ರಮಿಕ್ ಸಂಜೀವಿನಿ-ಸAಚಾರಿ ಚಿಕಿತ್ಸಾ ಘಟಕದ ಡಾ. ತುಂಗಾ, ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯರು, ಕಟ್ಟಡ ಕಾರ್ಮಿಕರ ಸಂಘದ ಸದಸ್ಯರು, ವಕೀಲರ ಸಂಘದ ಸದಸ್ಯರು ಹಾಜರಿದ್ದರು.