ಮಡಿಕೇರಿ, ನ. ೮: ಕಳೆದ ಜುಲೈ ಕೊನೆ ವಾರದಲ್ಲಿ ಸುರಿದ ಧಾರಾಕಾರ ಮಳೆಯಿಂದ ಉಂಟಾದ ಹಾನಿ ಸಂಬAಧ ವರದಿ ನೀಡುವುದು ಹಾಗೂ ಬರ ನಿರ್ವಹಣೆಯನ್ನು ಜವಾಬ್ದಾರಿಯಿಂದ ನಿಭಾಯಿಸುವಂತೆ ಸಂಬAಧಪಟ್ಟ ಅಧಿಕಾರಿಗಳು ಹಾಗೂ ಇಂಜಿನಿಯರ್‌ಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ‘ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ’ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜುಲೈ ಕೊನೆ ವಾರದಲ್ಲಿ ಸುರಿದ ಧಾರಾಕಾರ ಮಳೆ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸೂಚಿಸಿದ್ದಾರೆ. ಅದರಂತೆ ಅಂಗನವಾಡಿ, ಶಾಲೆ ಹಾಗೂ ಸರ್ಕಾರಿ ಕಚೇರಿಗಳಿಗೆ ಸಂಬAಧಿಸಿದAತೆ ಹಾನಿ ಬಗ್ಗೆ ಮಾಹಿತಿ ಪಟ್ಟಿಯನ್ನು ತಾಲೂಕುವಾರು ಒದಗಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಬರ ನಿರ್ವಹಣೆ ಸಂಬAಧಿಸಿದAತೆ ಸರ್ಕಾರ ಈಗಾಗಲೇ ಕೊಡಗು ಜಿಲ್ಲೆಗೆ ೭.೫೦ ಕೋಟಿ ರೂ. ಬಿಡುಗಡೆ ಮಾಡಿದೆ. ಆ ನಿಟ್ಟಿನಲ್ಲಿ ಗ್ರಾಮೀಣ, ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಗಮನಹರಿಸಬೇಕು. ಜೊತೆಗೆ ಜಾನುವಾರುಗಳಿಗೆ ಮೇವು ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ವೆಂಕಟ್ ರಾಜಾ ಸೂಚಿಸಿದರು.

ಈ ಬಾರಿ ಕೊಡಗು ಜಿಲ್ಲೆಯ ೫ ತಾಲೂಕನ್ನು ಬರ ಪೀಡಿತವೆಂದು ಘೋಷಿಸಲಾಗಿದ್ದು, ಮುಂದಿನ ಜನವರಿ, ಫೆಬ್ರವರಿ, ಮಾರ್ಚ್ ತಿಂಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಈ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಬರ ನಿರ್ವಹಣೆಗೆ ಯಾವುದೇ ರೀತಿಯ ಹಣದ ಕೊರತೆ ಇಲ್ಲ. ಆದ್ದರಿಂದ ಅಧಿಕಾರಿಗಳು ಪ್ರಥಮ ಆದ್ಯತೆಯಲ್ಲಿ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.

ಬರ ಪರಿಸ್ಥಿತಿಯಿಂದ ಹಾನಿಯಾಗಿರುವ ಬೆಳೆ ಸಂಬAಧ ಕೃಷಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಬೇಕು.

ತಾಲೂಕು ಹಂತದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಸಿ ಬರ ನಿರ್ವಹಣೆಯನ್ನು ಎದುರಿಸಲು ಮುಂದಾಗುವAತೆ ತಹಶೀಲ್ದಾರ್‌ಗಳಿಗೆ ಸೂಚಿಸಿದರು.

ಜಿ.ಪಂ. ಸಿಇಒ ವರ್ಣಿತ್ ನೇಗಿ ಅವರು ಮಾತನಾಡಿ ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರು ಸಂಪರ್ಕ ಕಲ್ಪಿಸಲಾಗುತ್ತದೆ. ಜೊತೆಗೆ ಗ್ರಾ.ಪಂ.ವ್ಯಾಪ್ತಿಯಲ್ಲಿ ಶಾಶ್ವತ ಕುಡಿಯುವ ನೀರಿನ ಮೂಲಗಳನ್ನು ಗುರುತಿಸಿ, ಕುಡಿಯುವ ನೀರು ಪೂರೈಕೆಗೆ ಅಗತ್ಯ ಕ್ರಮವಹಿಸಬೇಕು ಎಂದು ಸೂಚಿಸಿದರು.

ಶುದ್ಧ ಕುಡಿಯುವ ನೀರು ಪೂರೈಸುವುದು ಮತ್ತು ಜಾನುವಾರು ಗಳಿಗೆ ಮೇವು ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಗಮನಹರಿಸಬೇಕು.

ವಿವೇಕ ಶಾಲೆ ಕಾಮಗಾರಿಗಳು ನಡೆಯುತ್ತಿವೆ. ಆದರೆ ಕರ್ನಾಟಕ ಪಬ್ಲಿಕ್ ಶಾಲೆಗಳ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿದ್ದು, ಈ ಬಗ್ಗೆ ಗಮನಹರಿಸುವಂತೆ ಸಿಇಒ ಸೂಚಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಮಾಹಿತಿ ನೀಡಿ ಕೊಡಗು ಜಿಲ್ಲೆಯಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆ ಮಳೆ ೨೨೩ ಮಿ.ಮೀ. ಆಗಿದ್ದು, ಈ ಬಾರಿ ೨೫೧ ಮಿ.ಮೀ. ಮಳೆಯಾಗಿದೆ. ಹಾಗೆಯೇ ಅಕ್ಟೋಬರ್ ತಿಂಗಳಲ್ಲಿ ವಾಡಿಕೆ ಮಳೆ ೧೯೭ ಮಿ.ಮೀ. ಆಗಿದ್ದು, ಈ ಬಾರಿ ೧೬೬ ಮಿ.ಮೀ. ಮಳೆಯಾಗಿದೆ. ನವೆಂಬರ್ ತಿಂಗಳಲ್ಲಿ ವಾಡಿಕೆ ಮಳೆ ೭೪ ಮಿ,ಮೀ. ಆಗಿದ್ದು, ಈ ಬಾರಿ ನವೆಂಬರ್ ಮೊದಲ ವಾರದಲ್ಲಿ ೪೫ ಮಿ.ಮೀ. ಮಳೆಯಾಗಿದೆ ಎಂದು ವಿವರಿಸಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಸೋಮಸುಂದರ ಈ ಬಾರಿ ಮಳೆ ಕೊರತೆಯಿಂದಾಗಿ ಸುಮಾರು ೯೭೯೧ ಹೆಕ್ಟೇರ್ ಪ್ರದೇಶದಲ್ಲಿ (ಭತ್ತ ಮತ್ತು ಮುಸುಕಿನ ಜೋಳ ಪ್ರದೇಶ) ಬೆಳೆ ಹಾನಿಯಾಗಿದ್ದು, ಅಂದಾಜು ೮೩೮ ಲಕ್ಷ ರೂ ನಷ್ಟವಾಗಿದೆ. ಪರಿಹಾರ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್, ತಹಶೀಲ್ದಾರರಾದ ಪ್ರವೀಣ್ ಕುಮಾರ್, ಎಸ್.ಎನ್.ನರಗುಂದ, ರಾಮಚಂದ್ರ, ಪ್ರಮೋದ್, ಕಿರಣ್ ಗೌರಯ್ಯ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಳ್ಳಿಚಂಡ ಕಾರ್ಯಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪುಟ್ಟರಾಜು, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಸಪ್ಪ, ಪೌರಾಯುಕ್ತರಾದ ವಿಜಯ್, ಭೂ ದಾಖಲೆಗಳ ಉಪ ನಿರ್ದೇಶಕರಾದ ಪಿ.ಶ್ರೀನಿವಾಸ್, ಲೋಕೋಪಯೋಗಿ ಇಲಾಖೆ ಇಇ ಸಿದ್ದೇಗೌಡ, ಪಂಚಾಯತ್ ರಾಜ್ ಎಂಜಿನಿಯರ್‌ಗಳಾದ ಸುರೇಶ್ ಕುಮಾರ್, ಮುತ್ತುರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಬಸವರಾಜು, ಇತರರು ಹಲವು ಮಾಹಿತಿ ನೀಡಿದರು.