ಮಡಿಕೇರಿ, ನ. ೮: ಕುಶಾಲನಗರ ೨೨೦/೧೧ ಕೆವಿ ವಿದ್ಯುತ್ ಉಪ-ಕೇಂದ್ರ ದಿಂದ ಹೊರಹೋಗುವ ಎಫ್ ೧೫ ಭುವನಗಿರಿ ಫೀಡರ್‌ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿ ರುವುದರಿಂದ ತಾ. ೯ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೫ ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.

ಆದ್ದರಿಂದ ಕೂಡಿಗೆ ಫಾರ್ಮ, ಹೆಗ್ಗೆಡಹಳ್ಳಿ, ಹಾರಂಗಿ, ಸೀಗೆಹೊ ಸೂರು, ಭುವನಗಿರಿ, ಯಡವನಾಡು, ಹುದುಗೂರು ಸುತ್ತಮುತ್ತಲ÷ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಹಾಗೆಯೇ ಸುಂಟಿಕೊಪ್ಪ ೬೬/೧೧ ಕೆವಿ ವಿದ್ಯುತ್ ಉಪ-ಕೇಂದ್ರದಿAದ ಹೊರಹೋಗುವ ಎಫ್ ೬ ಹೊಸ ಕೋಟೆ ಫೀಡರ್‌ನಲ್ಲಿ ತುರ್ತು ನಿರ್ವ ಹಣೆ ಕಾಮಗಾರಿ ಕೈಗೊಳ್ಳಬೇಕಿದ್ದು, ತಾ.೧೦ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೫ ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುತ್ತದೆ. ಆದ್ದರಿಂದ ಕೊಡಗರಹಳ್ಳಿ, ಕಂಬಿ ಬಾಣೆ, ಹೊಸಕೋಟೆ ಸುತ್ತಮು ತ್ತಲ÷ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.