ಸುಂಟಿಕೊಪ್ಪ, ನ.೧೦: ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿಂದೂ ಮಲಯಾಳಿ ಸಮಾಜದ ವತಿಯಿಂದ ೨ನೇ ವರ್ಷದ ಓಣಂ ಆಚರಣೆ ನಡೆಯಲಿದೆ. ತಾ.೧೨ ರಂದು ನಡೆಯಲಿದೆ. ಬೆಳಿಗ್ಗೆ ೯ ಗಂಟೆಗೆ ಕಲ್ಲೂರು ಶ್ರೀ ಬಸವೇಶ್ವರ ದೇವಸ್ಥಾನದಿಂದ ಚಂಡೆಮೇಳ ದೊಂದಿಗೆ ಮೆರವಣಿಗೆ ಸಾಗಲಿದೆ.
ಕಾನ್ಬೈಲ್ ಸರ್ಕಾರಿ ಮಾದರಿ ಶಾಲೆಯಲ್ಲಿ ೧೧ ಗಂಟೆಗೆ ಸಭಾ ಕಾರ್ಯಕ್ರಮವನ್ನು ಜಿಲ್ಲಾ ಮಲಯಾಳಿ ಸಮಾಜದ ಅಧ್ಯಕ್ಷ ವಿ.ಎಂ.ವಿಜಯ ಉದ್ಘಾಟಿಸಲಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ನಾಕೂರು ಶಿರಂಗಾಲ ಹಿಂದೂ ಮಲಯಾಳಿ ಸಮಾಜದ ಅಧ್ಯಕ್ಷ ವಿ.ಕೆ.ಗಂಗಾಧರ್ ವಹಿಸಲಿದ್ದಾರೆ. ಮೆರವಣಿಗೆ ಉದ್ಘಾಟನೆಯನ್ನು ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ಸದಸ್ಯೆ ರಾಧಮಣಿ ನೆರವೇರಿಸುವರು.
ಮುಖ್ಯ ಅತಿಥಿಗಳಾಗಿ ನಾಕೂರು ಶಿರಂಗಾಲ ಗ್ರಾ.ಪಂ.ಅಧ್ಯಕ್ಷ ಮಂದೋಡಿ ಜಗನ್ನಾಥ್, ಕೊಡಗು ಜಿಲ್ಲಾ ಮಲಯಾಳಿ ಸಮಾಜದ ಗೌರವ ಅಧ್ಯಕ್ಷ ರಮೇಶ್ ಕೆ.ಎಸ್., ಸೋಮವಾರಪೇಟೆ ತಾಲೂಕು ಮಲಯಾಳಿ ಸಮಾಜ ಸ್ಥಾಪಕ ಅಧ್ಯಕ್ಷ ಪಿ.ಡಿ.ಪ್ರಕಾಶ್, ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಬಿ.ಇ.ಸತೀಶ್,ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೂಳಪ್ಪ ಕೂತಿನ, ಕಾನ್ಬೈಲ್ ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾದ್ಯಾಯ ಎಂ.ವಿ.ಮAಜೇಶ್, ಕಾನ್ಬೈಲ್ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯನಿ ಬಿ.ಜಿ.ವಾಣಿ, ನಾಕೂರು ಕೊಡವ ಕೂಟ ಉಪಾಧ್ಯಕ್ಷ ಕೆ.ಎ.ಕಾರ್ಯಪ್ಪ, ನಾಕೂರು ಶಿರಂಗಾಲ ಗೌಡ ಸಂಘದ ಅಧ್ಯಕ್ಷ ಎಂ.ಎA.ಕಾರ್ಯಪ್ಪ, ಮಳೂರು ಬೆಳ್ಳರಿಕಮ್ಮ ದೇವಸ್ಥಾನ ಅಧ್ಯಕ್ಷ ಕೆ.ಪಿ.ಬೋಪಯ್ಯ, ಬೆಳ್ಳರಿಕಮ್ಮ ದೇವಸ್ಥಾನ ಕಾರ್ಯದರ್ಶಿ ಎಂ.ಎನ್.ಲೋಹಿತಾಶ್ವ, ನಾಕೂರು ಗಂಗಾಧರೇಶ್ವ ದೇವಸ್ಥಾನ ಅಧ್ಯಕ್ಷ ಎಲ್.ಎಂ.ರುದ್ರಪ್ಪ, ಕಾನ್ಬೈಲ್ ರಾಮಮಂದಿರ ದೇವಸ್ಥಾನ ಅಧ್ಯಕ್ಷ ಬಿ.ಜಿ.ನರೇಂದ್ರ, ನಾಕೂರು ಫ್ರೆಂಡ್ಸ್ ಯೂತ್ ಕ್ಲಬ್ ಅಧ್ಯಕ್ಷ ಎ.ಬಿ.ಚಂದ್ರಶೇಖರ್, ಸುಂಟಿಕೊಪ್ಪ ಹೋಬಳಿ ಜೈಜವಾನ್ ಮಾಜಿ ಸೈನಿಕರ ಟ್ರಸ್ಟ್ ಅಧ್ಯಕ್ಷ ಪಿ.ಜಿ.ಶ್ರೀನಿವಾಸ್ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರುಗಳು ಪಾಲ್ಗೊಳ್ಳಲಿದ್ದಾರೆ ಎಂದು ನಾಕೂರು ಶಿರಂಗಾಲ ಹಿಂದೂ ಮಲಯಾಳಿ ಸಮಾಜ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.