ಸೋಮವಾರಪೇಟೆ, ನ. ೧೦: ಇಲ್ಲಿನ ನಾವು ಪ್ರತಿಷ್ಠಾನದ ವತಿಯಿಂದ ಸಿ.ಎಂ.ಸಿ.ಎ. ಹಾಗೂ ಅರಸೀಕೆರೆ ಪ್ರಕೃತಿ ಫೌಂಡೇಷನ್ ಸಹಯೋಗದೊಂದಿಗೆ ತಾಲೂಕಿನ ಸರ್ಕಾರಿ ಹಾಗೂ ಸರ್ಕಾರೇತರ ಶಾಲೆಗಳ ಮಕ್ಕಳಿಗೆ ಮಕ್ಕಳ ಹಕ್ಕುಗಳು ಸೇರಿದಂತೆ ಇನ್ನಿತರ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು.
ಮಕ್ಕಳ ಗ್ರಾಮಸಭೆ, ಮಕ್ಕಳ ಹಕ್ಕುಗಳು, ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ, ಮಕ್ಕಳ ಸಹಾಯವಾಣಿ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಜಾಗೃತಿ ಕಾರ್ಯಾಗಾರ ಆಯೋಜಿಸಲಾಗಿದ್ದು, ತಾಲೂಕಿನ ಕಿರಗಂದೂರು ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಐಗೂರಿನ ಕಾಜೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕಾರ್ಯಕ್ರಮ ನಡೆಯಿತು.
ಪ್ರತಿ ನವೆಂಬರ್ ತಿಂಗಳಿನಲ್ಲಿ ನಡೆಯಬೇಕಿರುವ ಮಕ್ಕಳ ಗ್ರಾಮಸಭೆಗೆ ಮಕ್ಕಳನ್ನು ಪೂರ್ವ ತಯಾರಿ ಮಾಡುವುದು ಸೇರಿದಂತೆ ಮಕ್ಕಳ ಹಕ್ಕುಗಳು, ರಕ್ಷಣೆಗೆ ಸಂಬAಧಿಸಿದAತೆ ಜ್ಞಾನ ಒದಗಿಸುವ ಉದ್ದೇಶದಿಂದ ಶಾಲೆಗಳಲ್ಲಿ ಇಂತಹ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಫೌಂಡೇಷನ್ನ ಸಂಸ್ಥಾಪಕ ಗೌತಮ್ ಕಿರಗಂದೂರು ತಿಳಿಸಿದರು.
ಅಭಿಯಾನದ ಅಂಗವಾಗಿ ಕಿರಗಂದೂರಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಐಗೂರು ಪಂಚಾಯಿತಿ ವ್ಯಾಪ್ತಿಯ ಕಾಜೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯಾಗಾರ ನಡೆಸಲಾಗಿದೆ ಎಂದು ಸದಸ್ಯರಾದ ಪಿ.ಬಿ. ಪೊನ್ನಪ್ಪ ಮಾಹಿತಿ ನೀಡಿದರು.
ಮುಂದಿನ ದಿನಗಳಲ್ಲಿ ತಾಲೂಕಿನ ಐದು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಗೆ ಒಳಪಡುವ ಶಾಲೆಗಳಲ್ಲಿ ಕಾರ್ಯಕ್ರಮ ಆಯೋಜಿಸಿ ಈ ತಿಂಗಳಾAತ್ಯದಲ್ಲಿ ಆಯಾ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳ ಸಹಕಾರದಲ್ಲಿ ಮಕ್ಕಳ ಗ್ರಾಮಸಭೆಯನ್ನು ಅರ್ಥಪೂರ್ಣವಾಗಿಸುವ ಉದ್ದೇಶವಿದೆ ಎಂದು ಸಂಸ್ಥೆಯ ಅರ್ಥಪೂರ್ಣವಾಗಿಸುವ ಉದ್ದೇಶವಿದೆ ಎಂದು ಸಂಸ್ಥೆಯ ಅರ್ಥಪೂರ್ಣವಾಗಿಸುವ ಉದ್ದೇಶವಿದೆ ಎಂದು ಸಂಸ್ಥೆಯ