ಮಡಿಕೇರಿ, ನ. ೧೦: ಆತ್ಮಹತ್ಯೆಗೆ ಶರಣಾದ ಮಾಜಿ ಯೋಧ ಸಂದೇಶ್ ಅವರ ಮನೆಗೆ ಶಾಸಕ ಡಾ.ಮಂಥರ್ ಗೌಡ ಭೇಟಿ ನೀಡಿ ಸಾಂತ್ವನ ಹೇಳಿದರು.

ಮಡಿಕೇರಿಯ ಉಕ್ಕುಡದಲ್ಲಿರುವ ಸಂದೇಶ್ ಅವರ ಮನೆಗೆ ಭೇಟಿ ನೀಡಿದ ಶಾಸಕರು ಸಾವಿಗೆ ಕಾನೂನು ರೀತಿಯಲ್ಲಿ ನ್ಯಾಯ ದೊರಕಿಸುವ ಭರವಸೆ ನೀಡಿ, ಮೃತ ಸಂದೇಶ್ ಅವರ ಇಬ್ಬರು ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗ ದೊರಕಿಸುವ ಭರವಸೆ ನೀಡಿದರು.

ಈ ಸಂದರ್ಭ ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ನಗರಸಭಾ ಸದಸ್ಯ ಮನ್ಸೂರ್, ಕಾಂಗ್ರೆಸ್ ಮುಖಂಡ ಪ್ರಕಾಶ್ ಆಚಾರ್ಯ ಸೇರಿದಂತೆ ಇನ್ನಿತರರು ಹಾಜರಿದ್ದರು.