ಮೂರ್ನಾಡು, ನ. ೧೦: ಮಂಗಳೂರಿನಲ್ಲಿ ನಡೆದ ವಿಭಾಗೀಯ ಮಟ್ಟದ ಪುಟ್ಭಾಲ್ ಪಂದ್ಯಾವಳಿಯಲ್ಲಿ ಜಿಲ್ಲೆಯಿಂದ ಆಯ್ಕೆಯಾದ ಮೂರ್ನಾಡು ಜ್ಞಾನಜ್ಯೋತಿ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿ ದ್ದಾರೆ. ತಂಡದ ಆಟಗಾರರಾದ ಮಹಮ್ಮದ್ ಅಪ್ರಜ್, ರುಬೇಜ್, ಅಬ್ದುಲ್ ರೆಹಮಾನ್ ಮುಂದಿನ ದಿನಗಳಲ್ಲಿ ನಡೆಯಲಿರುವ ರಾಜ್ಯಮಟ್ಟದ ಪುಟ್ಭಾಲ್ ಪಂದ್ಯಾವಳಿಯಲ್ಲಿ ವಿಭಾಗೀಯ ತಂಡವನ್ನು ಪ್ರತಿನಿಧಿಸಲಿದ್ದಾರೆ. ವಿದ್ಯಾರ್ಥಿಗಳಿಗೆ ಶಾಲೆಯ ದೈಹಿಕ ಶಿಕ್ಷಕ ಬೈಲೆ ಎಂ. ಅಶೋಕ್ ಅವರು ತರಬೇತಿ ನೀಡಿದ್ದಾರೆ.