ಕೂಡಿಗೆ, ನ. ೧೧: ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿ, ಮಡಿಕೇರಿ ವತಿಯಿಂದ ಕೂಡುಮಂಗಳೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ ಕೂಡುಮಂಗಳೂರು ಗ್ರಾಮ ಪಂಚಾಯಿತಿ, ಶಾಲೆಯ ಇಕೋ ಕ್ಲಬ್ ಹಾಗೂ ರಾಷ್ಟಿçÃಯ ಸೇವಾ ಯೋಜನೆ (ಎನ್.ಎಸ್.ಎಸ್.) ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಘಟಕ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕ, ಎಸ್‌ಡಿಎಂಸಿ ಹಾಗೂ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಪ್ರೌಢಶಾಲೆಯಲ್ಲಿ ‘ಗೋ ಗ್ರೀನ್ ಅಭಿಯಾನ'ದಡಿ ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಣೆ ಕುರಿತ ಪರಿಸರ ಜಾಗೃತಿ ಆಂದೋಲನವನ್ನು ಏರ್ಪಡಿಸಲಾಗಿತ್ತು.

‘ಹಸಿರು ದೀಪಾವಳಿ ಆಚರಿಸುವ ಅಗತ್ಯತೆ' ಕುರಿತು ಮಾಹಿತಿ ನೀಡಿದ ಶಾಲೆಯ ಮುಖ್ಯ ಶಿಕ್ಷಕರು ಶಿಕ್ಷಣ ಇಲಾಖೆಯ ರಾಷ್ಟಿçÃಯ ಹಸಿರು ಪಡೆ ಇಕೋ ಕ್ಲಬ್‌ನ ಜಿಲ್ಲಾ ನೋಡೆಲ್ ಅಧಿಕಾರಿ ಟಿ.ಜಿ. ಪ್ರೇಮಕುಮಾರ್, ಮಾಲಿನ್ಯಕಾರಿ ಪಟಾಕಿ ಸಿಡಿತದಿಂದ ಉಂಟಾಗುವ ಅನಾಹುತಗಳು ಹಾಗೂ ಮಾಲಿನ್ಯದ ದುಷ್ಪರಿಣಾ ಮಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಶಾಲಾಭಿವೃದ್ಧಿ ಸಮಿತಿಯ ಸಲಹೆಗಾರ ಕೆ.ಕೆ. ಪವನ್ ಕುಮಾರ್,

ಎಸ್‌ಡಿಎಂಸಿ ಅಧ್ಯಕ್ಷ ಎ.ಎಂ. ಜವರಯ್ಯ ಮಾತನಾಡಿದರು.

ಹಸಿರು ದೀಪಾವಳಿ ಆಚರಣೆಯ ಮಹತ್ವ ಕುರಿತು ಇಕೋ ಕ್ಲಬ್‌ನ ಉಸ್ತುವಾರಿ ಶಿಕ್ಷಕಿ ಬಿ.ಡಿ. ರಮ್ಯ ಮಾಹಿತಿ ನೀಡಿದರು. ಶಾಲಾ ಶಿಕ್ಷಕರಾದ ಎಂ.ಟಿ. ದಯಾನಂದ ಪ್ರಕಾಶ್, ಬಿ.ಡಿ. ರಮ್ಯ, ಬಿ.ಎನ್. ಸುಜಾತ, ಎಸ್.ಎಂ. ಗೀತಾ, ಅನ್ಸಿಲಾ ರೇಖಾ, ಕೆ.ಟಿ. ಸೌಮ್ಯ, ಸಿಬ್ಬಂದಿ ಎಂ. ಉಷಾ, ವಿದ್ಯಾರ್ಥಿಗಳು ಇದ್ದರು.

ಹಸಿರು ದೀಪಾವಳಿ ಜಾಗೃತಿ ಅಭಿಯಾನ ಕೂಡ್ಲೂರು ಗ್ರಾಮದಲ್ಲಿ ಘೋಷಣೆಗಳ ಭಿತ್ತಿ ಫಲಕಗಳನ್ನು ಹಿಡಿದು ಜನರಲ್ಲಿ ಹಸಿರು ದೀಪಾವಳಿ ಆಚರಿಸುವಂತೆ ಅಭಿಯಾನದ ಮೂಲಕ ಜನಜಾಗೃತಿ ಮೂಡಿಸಿದರು.