ಚೆಯ್ಯಂಡಾಣೆ, ನ. ೧೨: ನಾಪೋಕ್ಲು ಪಟ್ಟಣದಿಂದ ಹಳೇ ತಾಲೂಕಿಗೆ ತೆರಳುವ ಮುಖ್ಯ ರಸ್ತೆಯ ಶ್ರೀ ಪೊನ್ನು ಮುತ್ತಪ್ಪ ದೇವಾಲಯದ ಬಳಿ ರಸ್ತೆ ಮಧ್ಯದಲ್ಲಿ ಭಾರಿ ಪ್ರಮಾಣದ ಗುಂಡಿಯೊAದು ಅಪಘಾತಕ್ಕೆ ಆಹ್ವಾನ ನೀಡುವಂತಿದೆ.
ನಾಪೋಕ್ಲುವಿನಿಂದ ವೀರಾಜಪೇಟೆ- ಭಾಗಮಂಡಲ ತೆರಳುವ ಮುಖ್ಯ ರಸ್ತೆ ಇದಾಗಿದ್ದು, ಪ್ರತಿ ದಿನ ನೂರಾರು ವಾಹನಗಳು ಸಂಚರಿಸುತ್ತಿವೆ. ಈ ಗುಂಡಿಯಲ್ಲಿ ದ್ವಿಚಕ್ರ ವಾಹನ ಸವಾರರು ಬಿದ್ದು ಆಸ್ಪತ್ರೆ ಸೇರಿರುವ ಘಟನೆಗಳೂ ಕೂಡ ನಡೆದಿವೆ. ಸಂಬAಧಪಟ್ಟ ಲೋಕೋಪಯೋಗಿ ಇಲಾಖೆ ಕೂಡಲೇ ರಸ್ತೆಯಲ್ಲಿರುವ ಗುಂಡಿ ಮುಚ್ಚಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕೆಂದು ನಾಪೋಕ್ಲುವಿನ ವಾಹನ ಚಾಲಕರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ. -ಅಶ್ರಫ್