ಮಡಿಕೇರಿ, ನ. ೧೨: ಕಾರ್ಮಿಕ ಕಲ್ಯಾಣ ಕಾರ್ಯಕ್ರಮಗಳ ಯೋಜನೆಯಲ್ಲಿ ಕಾಫಿ ಮಂಡಳಿಯು ೨೦೨೩-೨೪ನೇ ಸಾಲಿಗೆ ಅನ್ವಯಿಸುವಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾಫಿ ಕೃಷಿ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ.

೨೦೨೨-೨೩ ರಲ್ಲಿ ೧೦ನೇ ತರಗತಿ ಉತ್ತೀರ್ಣ ಹೊಂದಿ ಪ್ರಸಕ್ತ ಸಾಲಿನಲ್ಲಿ ಪ್ರಥಮ ಪಿ.ಯು.ಸಿ., ವೃತ್ತಿಪರ ಕೋರ್ಸ್ಗಳು, ಪಾಲಿಟೆಕ್ನಿಕ್ ಓದುತ್ತಿರುವ ವಿದ್ಯಾರ್ಥಿಗಳು, ೨೦೨೨-೨೩ ರಲ್ಲಿ ಪಿ.ಯು.ಸಿ. ಉತ್ತೀರ್ಣ ಹೊಂದಿ ಪ್ರಸಕ್ತ ೨೦೨೩-೨೪ ರಲ್ಲಿ ಯಾವುದೇ ಪದವಿ, ಸ್ನಾತಕೋತ್ತರ ಪದವಿ, ವೃತ್ತಿಪರ ಕೋರ್ಸ್ಗಳು, ವೈದ್ಯಕೀಯ, ಇಂಜಿನಿಯರಿAಗ್, ಕೃಷಿ, ಫಾರ್ಮಸಿ ಮತ್ತು ನರ್ಸಿಂಗ್‌ಗೆ ಪ್ರವೇಶ ಹೊಂದಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಅನುದಾನದ ಲಭ್ಯತೆ ಹಾಗೂ ಮೆರಿಟ್ ಆಧಾರದಲ್ಲಿ ವಿದ್ಯಾರ್ಥಿ ವೇತನವನ್ನು ವಿತರಣೆ ಮಾಡಲಾಗುವುದು. ಮೊದಲು ಬಂದವರಿಗೆ ಆದ್ಯತೆ. ಅರ್ಜಿ ಸಲ್ಲಿಸಲು ತಾ. ೩೦ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಕಾಫಿ ಮಂಡಳಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕಾಫಿ ಮಂಡಳಿ ಪ್ರಕಟಣೆ ತಿಳಿಸಿದೆ.