ಮಡಿಕೇರಿ, ನ. ೧೨: ಸರ್ಕಾರಿ ನೌಕರರು ಸಾರ್ವಜನಿಕರಿಗೆ ಸ್ಪಂದಿಸಿ ಕರ್ತವ್ಯ ನಿರ್ವಹಿಸಬೇಕು. ಅದನ್ನು ಬಿಟ್ಟು ಸತಾಯಿಸಬಾರದು ಎಂದು ಲೋಕಾಯುಕ್ತ ಎಸ್‌ಪಿ ಸುರೇಶ್ ಬಾಬು ಸಲಹೆ ಮಾಡಿದರು.

ನಗರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಾರ್ವಜನಿಕರಿಂದ ದೂರು ಅರ್ಜಿ ಸ್ವೀಕರಿಸಿ ಅವರ ಸಮಸ್ಯೆಗಳನ್ನು ಆಲಿಸಿ ಬಳಿಕ ಅವರು ಮಾತನಾಡಿದರು. ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತುಂಬಾ ಎಚ್ಚರವಹಿಸಿ ನಿಯಮಾನುಸಾರ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕ ಸೇವೆಯನ್ನು ಸರ್ಕಾರದ ಸೇವೆ ಎಂದು ಜವಾಬ್ದಾರಿ ಯಿಂದ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.

ಸರ್ಕಾರಿ ಸೇವೆಗೆ ಸೇರಿದವರು ಸಾರ್ವಜನಿಕರ ಕರ್ತವ್ಯ ಮಡಿಕೇರಿ, ನ. ೧೨: ಸರ್ಕಾರಿ ನೌಕರರು ಸಾರ್ವಜನಿಕರಿಗೆ ಸ್ಪಂದಿಸಿ ಕರ್ತವ್ಯ ನಿರ್ವಹಿಸಬೇಕು. ಅದನ್ನು ಬಿಟ್ಟು ಸತಾಯಿಸಬಾರದು ಎಂದು ಲೋಕಾಯುಕ್ತ ಎಸ್‌ಪಿ ಸುರೇಶ್ ಬಾಬು ಸಲಹೆ ಮಾಡಿದರು.

ನಗರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಾರ್ವಜನಿಕರಿಂದ ದೂರು ಅರ್ಜಿ ಸ್ವೀಕರಿಸಿ ಅವರ ಸಮಸ್ಯೆಗಳನ್ನು ಆಲಿಸಿ ಬಳಿಕ ಅವರು ಮಾತನಾಡಿದರು. ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತುಂಬಾ ಎಚ್ಚರವಹಿಸಿ ನಿಯಮಾನುಸಾರ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕ ಸೇವೆಯನ್ನು ಸರ್ಕಾರದ ಸೇವೆ ಎಂದು ಜವಾಬ್ದಾರಿ ಯಿಂದ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.

ಸರ್ಕಾರಿ ಸೇವೆಗೆ ಸೇರಿದವರು ಸಾರ್ವಜನಿಕರ ಕರ್ತವ್ಯ ಸಭಾಂಗಣದಲ್ಲಿ ನಡೆದ ಸಾರ್ವಜನಿಕರ ದೂರು ಅರ್ಜಿ ಸ್ವೀಕಾರ ಸಂದರ್ಭದಲ್ಲಿ ಖಾತೆ ಬದಲಾವಣೆ, ಸರ್ವೆ ಮಾಡುವುದು, ಮತ್ತಿತರ ಅರ್ಜಿಗಳು ಸಲ್ಲಿಕೆಯಾದವು.

ಸಾರ್ವಜನಿಕರಿಂದ ೮ ಅರ್ಜಿಗಳು ಸ್ವೀಕೃತವಾಗಿದ್ದು, ಅರ್ಜಿಗಳನ್ನು ಪರಿಶೀಲಿಸಿ ೩ ಅರ್ಜಿದಾರರಿಗೆ ಲೋಕಾಯುಕ್ತ ಸಂಸ್ಥೆಯ ನಮೂನೆ ೧ ಮತ್ತು ೨ನ್ನು ನೀಡಲಾಯಿತು. ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಲೋಕೇಶ್, ತಹಶೀಲ್ದಾರ್ ಪ್ರವೀಣ್ ಕುಮಾರ್, ವಿವಿಧ ಇಲಾಖೆ ಅಧಿಕಾರಿಗಳು ಇತರರು ಇದ್ದರು.