ಶನಿವಾರಸಂತೆ, ನ. ೧೩: ಪಟ್ಟಣದ ಸುಪ್ರಜ ಗುರುಕುಲ ವಿದ್ಯಾಸಂಸ್ಥೆ ಹಾಗೂ ಜಾನಪದ ಪರಿಷತ್ ಹೋಬಳಿ ಘಟಕದ ಸಂಯುಕ್ತಾಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ತಾ. ೧೬ ರಂದು ವಿದ್ಯಾರ್ಥಿಗಳಿಗೆ ಕನ್ನಡ ನಾಡು-ನುಡಿ ಹಾಗೂ ಕೊಡಗು ಜಿಲ್ಲೆಗೆ ಸಂಬAಧಿಸಿದAತೆ ಸೋಮವಾರಪೇಟೆ ತಾಲೂಕು ಮಟ್ಟದ ಕನ್ನಡ ರಸಪ್ರಶ್ನೆ ಸ್ಪರ್ಧಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಸ್ಪರ್ಧೆ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ೨ ಹಂತದಲ್ಲಿ ನಡೆಯಲಿದೆ. ಪ್ರತಿ ಶಾಲೆಯಿಂದ ಮೂವರು ವಿದ್ಯಾರ್ಥಿಗಳ ತಂಡ ಭಾಗವಹಿಸ ಬಹುದಾಗಿದೆ. ಭಾಗವಹಿಸಲು ಇಚ್ಛಿಸುವ ಶಾಲೆಯವರು ಸುಜಲಾದೇವಿ, ಮೊ.ಸಂಖ್ಯೆ : ೯೧೪೧೬೯೨೫೫೬ ಹಾಗೂ ಸುರೇಶ್ ಮೊಗೆರ, ೯೪೪೯೨೦೬೫೭೬ ಅನ್ನು ಸಂಪರ್ಕಿಸಿ ಎಂದು ಜಾನಪದ ಪರಿಷತ್ ಹೋಬಳಿ ಘಟಕ ಪ್ರಕಟಣೆಯಲ್ಲಿ ತಿಳಿಸಿದೆ.