ಮಡಿಕೇರಿ, ನ. ೧೩: ಹೊದ್ದೂರು ಗ್ರಾಮದಲ್ಲಿ ಅಂದಾಜು ರೂ. ೪೦ ಲಕ್ಷದಲ್ಲಿ ನೂತನವಾಗಿ ನಿರ್ಮಾಣ ಗೊಂಡಿರುವ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣ ತಾ. ೧೪ರಂದು (ಇಂದು) ಲೋಕಾರ್ಪಣೆಗೊಳ್ಳಲಿದೆ.

ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ ನೂತನ ಸಭಾಂಗಣ ಉದ್ಘಾಟಿಸಲಿದ್ದಾರೆ. ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷ ಪಟ್ಟಡ ಮನು ರಾಮಚಂದ್ರ ಸಹಕಾರ ಧ್ವಜಾರೋಹಣ ಮಾಡಲಿದ್ದಾರೆ. ಬ್ಯಾಂಕಿನ ಸೇಫ್ ಲಾಕರನ್ನು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಉಪಾಧ್ಯಕ್ಷ ಕೇಟೊಳಿರ ಹರೀಶ್ ಪೂವಯ್ಯ ಉದ್ಘಾಟಿಸಲಿದ್ದು, ಗೋದಾಮು ಕಟ್ಟಡ ಉದ್ಘಾಟನೆಯನ್ನು ನಬಾರ್ಡ್ ಜಿಲ್ಲಾ ಅಭಿವೃದ್ಧಿ ಅಧಿಕಾರಿ ರಮೇಶ್ ಮಾಡಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ನೆರವೇರಿಸಲಿದ್ದಾರೆ. ಹೊದ್ದೂರು ಫ್ಯಾಕ್ಸ್ ಅಧ್ಯಕ್ಷ ನೆರವಂಡ ಸಂಜಯ್ ಪೂಣಚ್ಚ ಅಧ್ಯಕ್ಷತೆ ವಹಿಸಲಿದ್ದು, ಉಪಾಧ್ಯಕ್ಷ ವಾಂಚೀರ ರನ್ನ ಅಜಯ್‌ಕುಮಾರ್, ನಿವೃತ್ತ ಪ್ರಾಂಶುಪಾಲೆ ಎಂ.ಎA. ಶ್ಯಾಮಲಾ, ಬಿದ್ದಾಟಂಡ ಎ. ಚಂಗಪ್ಪ, ನಂದಿನೆರವAಡ ರವಿ ಬಸಪ್ಪ ಸೇರಿದಂತೆ ಪ್ರಮುಖರು ಭಾಗವಹಿಸಲಿದ್ದಾರೆ.