(ಹೆಚ್.ಕೆ. ಜಗದೀಶ್)

ಗೋಣಿಕೊಪ್ಪಲು, ನ. ೧೩: ಕರ್ನಾಟಕ - ಕೇರಳ ರಾಜ್ಯದ ಗಡಿ ಭಾಗ ವಯನಾಡು ಜಿಲ್ಲೆಯಲ್ಲಿ ನಕ್ಸಲ್ ಚಟುವಟಿಕೆ ಕಾಣಿಸಿಕೊಂಡಿದ್ದು, ನಕ್ಸಲರು ಹಾಗೂ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದೆ.

ಈ ಸುದ್ದಿ ತಿಳಿಯುತ್ತಿದ್ದಂತೆಯೇ ಕೊಡಗಿನ ಗಡಿಭಾಗವಾದ ಕುಟ್ಟ ಭಾಗದಲ್ಲಿ ಪೊಲೀಸರು ಕಟ್ಟೆಚ್ಚರ ಕೈಗೊಂಡಿದ್ದಾರೆ. ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಕುಟ್ಟ ಭಾಗಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಕೇರಳ ಗಡಿಗೆ ಹೊಂದಿಕೊAಡಿರುವ ಕೊಡಗಿನ ಕುಟ್ಟ, ಬಿರುನಾಣಿ, ತೆರಾಲು ಭಾಗಕ್ಕೆ ತೆರಳಿ ಕೂಂಬಿAಗ್ ಕಾರ್ಯಾಚರಣೆ ಪರಿಶೀಲನೆ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಸಿಬ್ಬಂದಿಗಳನ್ನು ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ. ಕುಟ್ಟ ಗಡಿಯ ಚೆಕ್‌ಪೋಸ್ಟ್ನಲ್ಲಿ ಪೊಲೀಸರು ವಾಹನ ತಪಾಸಣೆ ಬಿಗಿಗೊಳಿಸಿದ್ದಾರೆ.

(ಮೊದಲ ಪುಟದಿಂದ) ಕೊಡಗಿನ ಅರಣ್ಯ ಪ್ರದೇಶದಲ್ಲಿ ಕೂಂಬಿAಗ್ ಕಾರ್ಯಾಚರಣೆಗೆ ಒತ್ತು ನೀಡಲಾಗಿದೆ.ಎಸ್ಪಿ ರಾಮರಾಜನ್ ಭೇಟಿ ವೇಳೆ ವೀರಾಜಪೇಟೆ ಡಿವೈಎಸ್ಪಿ ಮೋಹನ್ ಕುಮಾರ್ ಹಾಗೂ ಇತರೆ ಹಿರಿಯ ಅಧಿಕಾರಿಗಳು ಹಾಜರಿದ್ದರು.

ನಾಕಾ ಬಂದಿ: ಕೇರಳ - ಕರ್ನಾಟಕ ರಾಜ್ಯದ ಗಡಿಭಾಗವಾದ ವಯನಾಡು ಜಿಲ್ಲೆಯಲ್ಲಿ ಪೊಲೀಸರ ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದ ವೇಳೆ ನಕ್ಸಲರಿಗೆ ತೊಂದರೆ ಸಂಭವಿಸಿರಬಹುದಾದ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ತೊಂದರೆಗೆ ಒಳಗಾದ ನಕ್ಸಲರು ಕರ್ನಾಟಕ ಗಡಿಯತ್ತ ನುಸುಳಬಹುದೆಂಬ ಕಾರಣದಿಂದ ಕೊಡಗಿನ ಗಡಿಯಾದ ಕುಟ್ಟ ಭಾಗದಲ್ಲಿ ಪೊಲೀಸರು ಕಟ್ಟೆಚ್ಚರ ಕೈಗೊಂಡಿದ್ದಾರೆ. ಪರಕಟಗೇರಿ, ತೆರಾಲು ಸೇರಿದಂತೆ ಇತರೆಡೆಗಳಲ್ಲಿ ನಾಕಾಬಂದಿ ಹಾಕಲಾಗಿದೆ. ದಿನದ ೨೪ ಗಂಟೆ ಪೊಲೀಸರು ಕರ್ತವ್ಯದಲ್ಲಿದ್ದಾರೆ. ಯಾವುದೇ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ಕಂಡುಬAದಲ್ಲಿ ವಿಚಾರಣೆಗೆ ಒಳಪಡಿಸುವಂತೆ ಪೊಲೀಸರಿಗೆ ಎಸ್.ಪಿ. ರಾಮರಾಜನ್ ನಿರ್ದೇಶನ ನೀಡಿದ್ದಾರೆ. ಕುಟ್ಟ ಭಾಗದಲ್ಲಿ ಎ.ಎನ್.ಎಫ್. ತಂಡ ಕಳೆದ ಹಲವು ಸಮಯದಿಂದ ಕೆಲಸ ನಿರ್ವಹಿಸುತ್ತಿದೆ. ಅಲ್ಲದೆ ಕೂಂಬಿAಗ್ ಕಾರ್ಯಾಚರಣೆಯಲ್ಲಿ ತೊಡಗಿದೆ.