ಸಂಪಾಜೆ, ನ. ೧೬: ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ೨೨ನೇ ನೂತನ ಶಾಖೆಯಾಗಿ ಸಂಪಾಜೆ ಶಾಖೆಯನ್ನು ತಾ. ೧೫ ರಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರು ಉದ್ಘಾಟಿಸಿದರು.
ಭದ್ರತಾ ಕೊಠಡಿಯನ್ನು ಮಾಜಿ ಶಾಸಕ ಕೆ.ಜಿ. ಬೋಪಯ್ಯ ಅವರು ಉದ್ಘಾಟಿಸಿದರು. ಸಹಕಾರ ರತ್ನ ಪುರಸ್ಕೃತ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಪಿ. ಗಣಪತಿ ಅವರು ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಉಪಾಧ್ಯಕ್ಷ ಕೇಟೋಳಿರ ಎಸ್. ಹರೀಶ್ ಪೂವಯ್ಯ, ಸಂಪಾಜೆ ಸಹಕಾರಿ ಸಂಘದ ಅಧ್ಯಕ್ಷ ಅನಂತ್ ಎನ್.ಸಿ., ಪೆರಾಜೆ ಸಹಕಾರಿ ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಸೇರಿದಂತೆ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ನಿರ್ದೇಶಕರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.