ಕಂದಕಕ್ಕೆ ಉರುಳಿ ಬಿದ್ದ ಬಸ್: ೩೬ ಮಂದಿ ಸಾವು

ದೋಡಾ, ನ. ೧೫: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಬುಧವಾರ ಪ್ರಯಾಣಿಕರ ಬಸ್ಸೊಂದು ರಸ್ತೆಯಿಂದ ಸ್ಕಿಡ್ ಆಗಿ ಸುಮಾರು ೩೦೦ ಅಡಿ ಆಳದ ಕಮರಿಗೆ ಉರುಳಿ ಬಿದ್ದಿದ್ದು, ಭೀಕರ ಅಪಘಾತದಲ್ಲಿ ಸುಮಾರು ೩೬ ಮಂದಿ ಸಾವನ್ನಪ್ಪಿದ್ದಾರೆ. ಇಂದು ಬೆಳಿಗ್ಗೆ ಬಟೋಟೆ-ಕಿಶ್ತಾ÷್ವರ್ ರಾಷ್ಟಿçÃಯ ಹೆದ್ದಾರಿಯ ಟ್ರುಂಗಲ್-ಅಸ್ಸಾರ್ ಬಳಿ ಈ ದುರ್ಘಟನೆ ನಡೆದಿದ್ದು, ಬಸ್‌ನಲ್ಲಿ ೫೫ ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಸ್ಥಳೀಯರಲ್ಲದೆ ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಸಿಬ್ಬಂದಿ ರಕ್ಷಣಾ ಕಾರ್ಯಾಚ ರಣೆಯಲ್ಲಿ ತೊಡಗಿಸಿಕೊಂಡು, ಗಾಯಗೊಂಡ ಪ್ರಯಾಣಿಕರನ್ನು ಆಸ್ಪತ್ರೆಗೆ ರವಾನಿಸಲಾಯಿತು. ಅಪಘಾತದ ಸ್ಥಳದಲ್ಲಿದ್ದ ದೋಡಾ ಜಿಲ್ಲಾಧಿಕಾರಿ ಶ್ ಹರ್ವಿಂದರ್ ಸಿಂಗ್ ಅವರು ನೀಡಿದ ಮಾಹಿತಿಯ ಪ್ರಕಾರ, ಭೀಕರ ಅಪಘಾತದಲ್ಲಿ ದುರದೃಷ್ಟವಶಾತ್ ೩೬ ಜನ ಸಾವನ್ನಪ್ಪಿದ್ದಾರೆ ಮತ್ತು ೧೯ ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ ೬ ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಹೇಳಿದ್ದಾರೆ. ದುರ್ಘಟನೆಗೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ವಿರಾಟ್ ಕೊಹ್ಲಿ

ಮುಂಬೈ, ನ. ೧೫: ಭಾರತದ ಕ್ರಿಕೆಟಿಗ ವಿರಾಟ್ ಕೊಹ್ಲಿ ಒಂದೇ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ ಅವರ ೨ ವಿಶ್ವ ದಾಖಲೆಯನ್ನು ಮುರಿದಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ರನ್‌ಗಳನ್ನು ಗಳಿಸಿ ದಾಖಲೆ ನಿರ್ಮಿಸಿರುವುದು ಒಂದು ದಾಖಲೆ ಯಾದರೆ, ಏಕದಿನ ಕ್ರಿಕೆಟ್‌ನಲ್ಲಿ ೫೦ನೇ ಶತಕ ದಾಖಲಿಸಿ ಸಚಿನ್ ದಾಖಲೆಯನ್ನು ಸರಿಗಟ್ಟಿರುವುದು ೨ನೇ ದಾಖಲೆಯಾಗಿದೆ. ಸಚಿನ್ ತೆಂಡೂಲ್ಕರ್ ಏಕದಿನ ಕ್ರಿಕೆಟ್‌ನಲ್ಲಿ ೪೯ ಶತಕ ದಾಖಲಿಸಿದ್ದಾರೆ. ವಿರಾಟ್ ಕೊಹ್ಲಿ ಸಾಧನೆಗೆ ಮೆಚ್ಚಿ ಸಚಿನ್ ತೆಂಡೂಲ್ಕರ್ ಅಭಿನಂದಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅಧಿಕಾರ ಸ್ವೀಕಾರ

ಬೆಂಗಳೂರು, ನ. ೧೫: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ರಾಜ್ಯ ಬಿಜೆಪಿಯಲ್ಲಿ ಈಗ ಮತ್ತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿಯ ಶಕ್ತಿ ಕೇಂದ್ರ ಬೆಂಗಳೂರಿನ ಮಲ್ಲೇಶ್ವರ ದಲ್ಲಿರುವ ಜಗನ್ನಾಥ ಭವನದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ಶಿಕಾರಿಪುರ ಕ್ಷೇತ್ರದ ಶಾಸಕ, ಬಿ.ವೈ. ವಿಜಯೇಂದ್ರ ಬಿ.ಜೆ.ಪಿ. ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ರಾಜ್ಯ ಬಿಜೆಪಿಯ ಹಿರಿಯ ನಾಯಕರು, ಸಂಸದರು, ಶಾಸಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವಿಜಯೇಂದ್ರ ಅವರಿಗೆ ಕೇಸರಿ ಶಾಲು ತೊಡಿಸಿ ಸನ್ಮಾನಿಸಿ ಅಧಿಕಾರ ಹಸ್ತಾಂತರ ಮಾಡಿದರು.

ಸರ್ಕಾರವನ್ನು ಕಿತ್ತೊಗೆಯುವ ಕೆಲಸ ಆಗಬೇಕು: ಬಿ.ವೈ. ವಿಜಯೇಂದ್ರ

ಬೆAಗಳೂರು, ನ. ೧೫: ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಭೀಕರ ಬರಗಾಲ ಇದ್ದರೂ ಸರ್ಕಾರ ಯಾವುದೇ ಕ್ರಮವಿಲ್ಲ. ಬರಪೀಡಿತ ಜಿಲ್ಲೆಗಳಿಗೆ ಈವರೆಗೂ ಯಾವುದೇ ಸಚಿವರು ಭೇಟಿ ನೀಡಿಲ್ಲ, ಆರಂಭದಲ್ಲಿ ಇದ್ದ ಉತ್ಸಾಹ ಸರ್ಕಾರದ ಸಚಿವರುಗಳಿಗೆ ಕೇವಲ ಆರು ತಿಂಗಳಲ್ಲಿ ಕುಗ್ಗಿ ಹೋಗಿದೆ. ಕೇವಲ ಆರು ತಿಂಗಳಲ್ಲಿ ಈ ಸರ್ಕಾರದ ಜನಪ್ರಿಯತೆ ಕುಗ್ಗಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಧಿಕಾರದ ಅಹಂ, ಗರ್ವದಿಂದ ಸಚಿವರು ಮೆರೆಯುತ್ತಿದ್ದಾರೆ. ಮುಂದೆ ಈ ಸರ್ಕಾರವನ್ನು ಕಿತ್ತೊಗೆಯುವ ಕೆಲಸ ಆಗಬೇಕು ಎಂದರು. ಲೋಕಸಭೆ ಚುನಾವಣೆಯಲ್ಲಿ ಎಲ್ಲಾ ೨೮ ಕ್ಷೇತ್ರಗಳಲ್ಲೂ ಗೆಲ್ಲುವ ವಿಶ್ವಾಸವಿದೆ. ನನಗೆ ನೀಡಿರುವ ಸ್ಥಾನದ ಬಗ್ಗೆ ಅರಿವು ಇದೆ, ಜವಾಬ್ದಾರಿ ಹೆಚ್ಚಿದೆ. ರಾಜ್ಯದಲ್ಲಿ ಪಕ್ಷ ಸಂಘಟನೆಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇವೆ. ಕಾರ್ಯಕರ್ತರು ತಲೆತಗ್ಗಿಸುವ ಕೆಲಸ ಮಾಡದಂತೆ ಪಕ್ಷ ಸಂಘಟನೆ ಮಾಡುವೆ ಎಂದರು.

‘ಡಿಕೆ ಸಹೋದರರನ್ನು ಕೊಲ್ಲಿ' ಎಂದು ಪೋಸ್ಟ್ ಹಾಕಿದ ವ್ಯಕ್ತಿಯ ಬಂಧನ

ಬೆAಗಳೂರು, ನ. ೧೫: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಅವರ ಸಹೋದರ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರನ್ನು ಕೊಲ್ಲುವಂತೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ್ದಕ್ಕಾಗಿ ಪೊಲೀಸರು ಬುಧವಾರ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ರಂಜಿತ್ ಆರ್‌ಎಂ ಎಂದು ಗುರುತಿಸಲಾಗಿದೆ. ಈ ಸಂಬAಧ ಬೆಂಗಳೂರಿನ ಜಯನಗರ ಬ್ಲಾಕ್‌ನ ಯುವ ಕಾಂಗ್ರೆಸ್ ಅಧ್ಯಕ್ಷ ಶರತ್ ದೂರು ದಾಖಲಿಸಿದ್ದಾರೆ. ಆರೋಪಿ, ‘ಡಿಕೆ ಸಹೋದರರನ್ನು ಕೊಲ್ಲಿ' ಎಂಬ ಶೀರ್ಷಿಕೆಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದ. ಜಯನಗರ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಜೆಡಿಎಸ್, ಬಿಜೆಪಿ ಜೊತೆ ವಿಲೀನವಾದರೂ ಆಶ್ಚರ್ಯವಿಲ್ಲ: ಸಿದ್ದರಾಮಯ್ಯ

ಬೆಂಗಳೂರು, ನ. ೧೫: ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಮುಂದಿನ ದಿನಗಳಲ್ಲಿ ಕೇಸರಿ ಪಕ್ಷದೊಂದಿಗೆ ವಿಲೀನಗೊಂಡರೂ ಆಶ್ಚರ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಜೆಡಿಎಸ್ ಮಾಜಿ ಶಾಸಕರಾದ ಡಿಸಿ ಗೌರಿಶಂಕರ್ ಮತ್ತು ದಾಸರಹಳ್ಳಿ ಮಂಜುನಾಥ್ ಅವರು ಕಾಂಗ್ರೆಸ್ ಸೇರಿದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಜೆಡಿಎಸ್, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ನಂತರ "ಕೋಮುವಾದಿ" ಪಕ್ಷವಾಗಿದೆ. ಹೀಗಾಗಿ ಅದರ ಹೆಸರಿನಿಂದ ‘ಸೆಕ್ಯುಲರ್' ಪದವನ್ನು ತೆಗೆದುಹಾಕಬೇಕು ಎಂದು ಒತ್ತಾಯಿಸಿದರು. ಮುಂದಿನ ದಿನಗಳಲ್ಲಿ ದೇಶದಲ್ಲಿ ರಾಜಕೀಯ ಧ್ರುವೀಕರಣ ಮತ್ತು ಮತಗಳ ಧ್ರುವೀಕರಣ ನಡೆಯಲಿದೆ, ಒಂದು ಕಡೆ ಕೋಮುವಾದಿ ಶಕ್ತಿಗಳು ಮತ್ತು ಇನ್ನೊಂದು ಕಡೆ ಜಾತ್ಯತೀತ ಶಕ್ತಿಗಳು. ಬಿಜೆಪಿ ಎಂದಿಗೂ ಹಿಂದುತ್ವ ಮತ್ತು ಹಿಂದೂ ರಾಷ್ಟ್ರ ರಚಿಸುವ ಅವರ ಯೋಜನೆಯಿಂದ ಹೊರಬರುವುದಿಲ್ಲ. ದೇವೇಗೌಡ ಮತ್ತು ಅವರ ಕುಟುಂಬವೂ ಬಿಜೆಪಿಯೊಂದಿಗೆ ಸೇರಿಕೊಂಡಿದೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಖ್ಯಾತ ಹೊಟೇಲ್ ಉದ್ಯಮಿ ಪೃಥ್ವಿ ರಾಜ್ ಸಿಂಗ್ ಒಬೆರಾಯ್ ನಿಧನ

ನವದೆಹಲಿ, ನ. ೧೫: ಭಾರತೀಯ ಹೊಟೇಲ್ ಉದ್ಯಮದ ದಿಗ್ಗಜ ಖ್ಯಾತ ಹೊಟೇಲ್ ಉದ್ಯಮಿ ಪೃಥ್ವಿ ರಾಜ್ ಸಿಂಗ್ ಒಬೆರಾಯ್ ಮಂಗಳವಾರ ನಿಧನರಾಗಿದ್ದು, ಅವರಿಗೆ ೯೪ ವರ್ಷ ವಯಸ್ಸಾಗಿತ್ತು. ಒಬೆರಾಯ್ ಅವರು ಪ್ರವಾಸೋದ್ಯಮ ಮತ್ತು ಆತಿಥ್ಯದಲ್ಲಿ ದೇಶಕ್ಕೆ ನೀಡಿದ ಅಸಾಧಾರಣ ಕೊಡುಗೆಯನ್ನು ಗುರುತಿಸಿ ಪದ್ಮವಿಭೂಷಣ ಸೇರಿದಂತೆ ಹಲವಾರು ಪ್ರಶಸ್ತಿಗಳು ಮತ್ತು ಪುರಸ್ಕಾರಗಳನ್ನು ಪಡೆದಿದ್ದರು. ಅವರ ಅಸಾಧಾರಣ ನಾಯಕತ್ವ ಮತ್ತು ದೃಷ್ಟಿಕೋನವನ್ನು ಗುರುತಿಸಿ ಅಂತರರಾಷ್ಟಿçÃಯ ಐಷಾರಾಮಿ ಸಕ್ರಿಯ ಮಾರುಕಟ್ಟೆಯಲ್ಲಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. ಒಬೆರಾಯ್ ಅವರಿಗೆ ಹೊಟೇಲ್ಸ್ ಮ್ಯಾಗಜೀನ್ ಅಮೆರಿಕದಿಂದ ‘ಕಾರ್ಪೊರೇಟ್ ಹೊಟೇಲಿಯರ್ ಆಫ್ ದಿ ವರ್ಲ್ಡ್' ಪ್ರಶಸ್ತಿಯನ್ನು ಸಹ ನೀಡಲಾಗಿತ್ತು.