ಮಡಿಕೇರಿ, ನ. ೧೫: ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಮಹಾಸಭೆ ತಾ.೨೧ರಂದು ಮಡಿಕೇರಿಯಲ್ಲಿ ನಡೆಯಲಿದೆ ಎಂದು ಸಂಘದ ಗೌರವಾಧ್ಯಕ್ಷ ಎಂ.ಎ. ಅಪ್ಪಯ್ಯ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಮೈತ್ರಿ ಭವನದಲ್ಲಿ ಸಂಘದ ಅಧ್ಯಕ್ಷ ಎಂ.ಕೆ.ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಸಂಘದ ಗೌರವಾಧ್ಯಕ್ಷ ಎಂ.ಎ.ಅಪ್ಪಯ್ಯ, ವಿಶೇಷ ಆಹ್ವಾನಿತರಾಗಿ ಶೈಲಾ ಚಿಣ್ಣಪ್ಪ ಪಾಲ್ಗೊಳ್ಳಲಿದ್ದಾರೆ ಎಂದರು.

ಸAಘದಲ್ಲಿ ಜಿಲ್ಲಾ ವ್ಯಾಪ್ತಿಯ ೯೬೨ ಮಂದಿ ಸದಸ್ಯತ್ವವನ್ನು ಪಡೆದುಕೊಂಡಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಗಳು ಸದಸ್ಯತ್ವ ಪಡೆಯುವುದರ ಜೊತೆಗೆ ಸರ್ಕಾರದ ಆರೋಗ್ಯ ವಿಮೆ ಸೌಲಭ್ಯವನ್ನು ಸದುಪಯೋಗಪಡಿಸಿ ಕೊಳ್ಳಬೇಕೆಂದು ಮನವಿ ಮಾಡಿದರು.

ವಾರ್ಷಿಕ ಮಹಾಸಭೆಯಲ್ಲಿ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಜಿಲ್ಲೆಯ ಪೊಲೀಸ್ ಅಧಿಕಾರಿಗಳ ಇಬ್ಬರು ಮಕ್ಕಳನ್ನು ಹಾಗೂ ಪೊಲೀಸ್ ಅಧಿಕಾರಿ ಶಂಕರ ಬಿದರಿ ಅವರು ‘ಮಣವಟ್ಟೀರ ಪೊನ್ನಪ್ಪ’ ಅವರ ಸ್ಮರಣಾರ್ಥ ನೀಡಿರುವ ದತ್ತಿ ನಿಧಿಯಲ್ಲಿ ಕೆಎಸ್‌ಆರ್‌ಪಿಯಲ್ಲಿ ಸೇವೆ ಸಲ್ಲಿಸಿದವರ ಇಬ್ಬರು ಮಕ್ಕಳನ್ನು ಪುರಸ್ಕರಿಸಲಾಗುತ್ತದೆ. ಇದೇ ಸಂದರ್ಭ ಸಂಘದ ಹಿರಿಯ ೧೦ ಸದಸ್ಯರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಅಪ್ಪಯ್ಯ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಎಂ.ಕೆ.ಉತ್ತಪ್ಪ, ಉಪಾಧ್ಯಕ್ಷ ಬಿ.ಆರ್. ಲಿಂಗಪ್ಪ, ಕಾರ್ಯದರ್ಶಿ ಎಂ. ಅಚ್ಚುತ್ತನ್ ನಾಯರ್, ನಿರ್ದೇಶಕರಾದ ಎಂ.ಕೆ. ಕಾವೇರಪ್ಪ ಹಾಗೂ ಕೆ.ವೈ. ಹಮೀದ್ ಉಪಸ್ಥಿತರಿದ್ದರು.