ಮಡಿಕೇರಿ, ನ. ೧೫: ಕರ್ನಾಟಕ ಸಂಭ್ರಮ ೫೦ ಪ್ರಯುಕ್ತ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಹಾಕತ್ತೂರು ಸರ್ಕಾರಿ ಪ್ರೌಢಶಾಲೆ ಇವರ ಸಂಯುಕ್ತಾಶ್ರಯದಲ್ಲಿ ಬಿ.ಆರ್.ಸಾಯಿನಾಥ್ ಮತ್ತು ತ್ರಿಭಾಷಾ ಸಾಹಿತಿ ದಿ.ಮುಲ್ಲೇಂಗಡ ಬೇಬಿ ಚೋಂದಮ್ಮ ದತ್ತಿ ಉಪನ್ಯಾಸ ಕಾರ್ಯಕ್ರಮವು ತಾ.೧೭ ರಂದು ಮಧ್ಯಾಹ್ನ ೨.೩೦ ಗಂಟೆಗೆ ಹಾಕತ್ತೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹ್ಮದ್, ಮಡಿಕೇರಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಬಿ.ಸಿ.ದೊಡ್ಡೇಗೌಡ, ಮೂರ್ನಾಡು ಕವಯಿತ್ರಿ ಕೆ.ಜಿ.ರಮ್ಯಾ, ಸಾಹಿತಿ ಗೌರಮ್ಮ ಮಾದಮ್ಮಯ್ಯ, ಇತರರು ಪಾಲ್ಗೊಳ್ಳಲಿದ್ದಾರೆ.