ಕೂಡಿಗೆ, ನ. ೧೫: ವಿದ್ಯಾರ್ಥಿ ಗಳಲ್ಲಿ ಗುಪ್ತವಾಗಿರುವ ಪ್ರತಿಭೆಗಳನ್ನು ಅನಾವರಣ ಗೊಳಿಸಲು ಪ್ರತಿಭಾ ಕಾರಂಜಿ, ಕಲೋತ್ಸವ ಸ್ಪರ್ಧೆಗಳು ಸಹಕಾರಿಯಾಗಿವೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಹೇಳಿದರು.

ಜಿಲ್ಲಾಡಳಿತ, ಜಿ.ಪಂ., ಶಾಲಾ ಶಿಕ್ಷಣ ಇಲಾಖೆ ಸಮಗ್ರ ಶಿಕ್ಷಣ ಕರ್ನಾಟಕ ಇವರ ಸಂಯುಕ್ತ ಆಶ್ರಯದಲ್ಲಿ ಅತ್ತೂರು ಜ್ಞಾನಗಂಗಾ ವಸತಿ ಶಾಲೆ ಸಭಾಂಗಣದಲ್ಲಿ ಏರ್ಪಡಿಸಿದ್ದ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಕ್ಕಳಲ್ಲಿ ಮನೋವಿಕಾಸ ಬೆಳವಣಿಗೆಯೊಂದಿಗೆ ಅವರಲ್ಲಿ ಸ್ಪರ್ಧಾ ಮನೋಭಾವ ಬೆಳವಣಿಗೆಗೆ ಉತ್ತಮ ವೇದಿಕೆ ಒದಗಿಸುತ್ತವೆ. ಇಂತಹ ಸ್ಪರ್ಧಾ ಕಾರ್ಯಕ್ರಮವು ನಮ್ಮ ನಾಡಿನ ಸಂಸ್ಕೃತಿ ಬಿಂಬಿಸುವ ಸ್ಪರ್ಧೆಯಾಗಿದ್ದು, ಇವು ಪಠ್ಯದ ಜೊತೆಗೆ ಮಕ್ಕಳ ಪ್ರತಿಭಾ ಅನ್ವೇಷಣೆಗೆ ಅವಶ್ಯಕವಾಗಿದೆ ಎಂದರು.

ಸೋಮವಾರಪೇಟೆ ತಾಲೂಕು ಪ್ರಬಾರ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ವಿ.ಮAಜೇಶ್ ಮಾತನಾಡಿ, ಮಕ್ಕಳ ಪ್ರತಿಭೆಗೆ ಸೂಕ್ತ ವೇದಿಕೆ ಒದಗಿಸುವ ಇಂತಹ ಸ್ಪರ್ಧೆಗಳಿಗೆ ನಾವೆಲ್ಲರೂ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ. ಇದರಿಂದ ಮಕ್ಕಳ ಪ್ರತಿಭೆಯನ್ನು ಹೊರತರಲು ಸಾಧ್ಯ ಎಂದರು. ಈ ಸ್ಪರ್ಧೆಯು ಮಕ್ಕಳಿಗೆ ಪಠ್ಯದ ಜತೆಗೆ ಕಲೆ, ಸಂಸ್ಕೃತಿಯ ಕಲಿಕೆಗೆ ಸಹಕಾರಿಯಾಗಿದೆ ಎಂದರು. ಈ ಸಂದರ್ಭ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರುಕ್ಮಿಣಿ, ಐಶ್ವರ್ಯ ಪಬ್ಲಿಕ್ ಸ್ಕೂಲ್ ಸಂಸ್ಥಾಪಕ ರಾಮ್ ದೇವಯ್ಯ, ಶಿಕ್ಷಣ ಇಲಾಖೆ ಸಮಾನ್ವಯಾಧಿಕಾರಿ ಹೇಮಂತ್, ಜ್ಞಾನಗಂಗಾ ವಸತಿ ಶಾಲೆ ಪ್ರಾಂಶುಪಾಲೆ ಪ್ರೀಯಂಕ ನಾಯ್ಡ್, ಉಪ ಪ್ರಾಂಶುಪಾಲ ನಾಗರಾಜು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಎಸ್.ಎ. ಯೋಗೇಶ್, ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಹೆಚ್.ಎನ್. ಮಂಜುನಾಥ್, ತಾಲೂಕು ಘಟಕದ ಅಧ್ಯಕ್ಷ ಟಿ.ಕೆ. ಬಸವರಾಜು, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸೋಮವಾರಪೇಟೆ ತಾಲೂಕು ಘಟಕದ ಅಧ್ಯಕ್ಷ ರತ್ನಕುಮಾರ್, ತಾಲೂಕು ದೈಹಿಕ ಶಿಕ್ಣಣ ಅಧೀಕ್ಷಕಿ ಸುಕುಮಾರಿ, ಶಿಕ್ಷಣ ಸಂಯೋಜಕ ರಾಧಾಕೃಷ್ಣ, ಬಿಆರ್‌ಪಿ ಲೋಕೇಶ್, ಶಿವಕುಮಾರ್, ಮಮತಾ, ಶಾಂತಕುಮಾರ್, ಸಿಆರ್‌ಪಿ ವೈಶಾಲಿ, ನೋಡೆಲ್ ಅಧಿಕಾರಿ ಶೇಖರ್, ಕೂಡಿಗೆ ಸಿಆರ್‌ಪಿ ಶಾಂತಕುಮಾರ್ ಇದ್ದರು. ಮಕ್ಕಳ ಪ್ರತಿಭಾ ಕಾರಂಜಿ, ಕಲೋತ್ಸವದಲ್ಲಿ ವಿದ್ಯಾರ್ಥಿಗಳು ವಿವಿಧ ಕಲೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು. ಮಕ್ಕಳಿಗೆ ಹಾಡು, ನೃತ್ಯ, ಛದ್ಮವೇಷ, ಭಾಷಣ, ಆಶು ಭಾಷಣ, ಧಾರ್ಮಿಕ ಪಠಣ, ಜಾನಪದ ನೃತ್ಯ, ರಂಗೋಲಿ, ಚಿತ್ರಕಲೆ, ಕಥೆ ಹೇಳುವುದು, ಚರ್ಚಾ ಸ್ಪರ್ಧೆ, ರಸಪ್ರಶ್ನೆ, ಮಣ್ಣಿನ ಮಾದರಿ ತಯಾರಿಕೆ, ಮುಂತಾದ ಸ್ಪರ್ಧೆಗಳು ಪ್ರೇಕ್ಷಕರ ಗಮನ ಸೆಳೆದವು.