ಮಡಿಕೇರಿ, ನ. ೧೫: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಕಾರದಲ್ಲಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆ ವತಿಯಿಂದ ಬಿರ್ಸಾ ಮುಂಡಾ ಜಯಂತಿ ಕಾರ್ಯಕ್ರಮ ನಡೆಯಿತು.
ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ಐಟಿಡಿಪಿ ಇಲಾಖೆ ಅಧಿಕಾರಿ ಎಸ್.ಹೊನ್ನೇಗೌಡ ಇತರರು ಬಿರ್ಸಾ ಮುಂಡಾ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಬಳಿಕ ಮಾತನಾಡಿ ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ ಅವರು ಬಿರ್ಸಾ ಮುಂಡಾ ಅವರು ಆದಿವಾಸಿ ಜನಾಂಗದ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ಬ್ರಿಟಿಷರ ವಿರುದ್ಧ ಸ್ವಾತಂತ್ರö್ಯಕ್ಕಾಗಿ ಹೋರಾಟ ಮಾಡಿದ್ದಾರೆ ಎಂದು ಹೇಳಿದರು.