ಮಡಿಕೇರಿ, ನ. ೧೬: ವೀರಾಜಪೇಟೆ ಅರಣ್ಯ ವಿಭಾಗದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಾದ ಕೆ. ಬೈಗೋಡು, ಹೊಸಕೋಟೆ, ನಲ್ವತೋಕ್ಲು, ಕಾವಾಡಿ, ಕುಂಬೇರಿ, ಹೊಸೂರು, ಕೈಕೇರಿ, ಕಳತ್ಮಾಡು, ಬಿಳುಗುಂದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಕಾಡಾನೆಗಳನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆ ತಾ. ೧೭ರಂದು ನಡೆಯಲಿದೆ. ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರು, ಸಾರ್ವಜನಿಕರು ಮತ್ತು ಶಾಲಾ ಮಕ್ಕಳು ಮುನ್ನೆಚ್ಚರಿಕೆಯಿಂದ ಇರಬೇಕೆಂದು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆ ಕಂಡು ಬಂದರೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ವೀರಾಜಪೇಟೆ ಅರಣ್ಯ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೊಚ್ಚೆರ ನೆಹರೂ ತಿಳಿಸಿದ್ದಾರೆ.