ಮಡಿಕೇರಿ, ನ.೧೬ : ಕರ್ನಾಟಕ ಸಂಭ್ರಮ ೫೦ ಪ್ರಯುಕ್ತ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಹಾಕತ್ತೂರು ಸರ್ಕಾರಿ ಪ್ರೌಢಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಬಿ.ಆರ್.ಸಾಯಿನಾಥ್ ಮತ್ತು ತ್ರಿಭಾಷಾ ಸಾಹಿತಿ ದಿ.ಮುಲ್ಲೇಂಗಡ ಬೇಬಿ ಚೋಂದಮ್ಮ ದತ್ತಿ ಉಪನ್ಯಾಸ ಕಾರ್ಯಕ್ರಮವು ತಾ ೧೭ ರಂದು ಮಧ್ಯಾಹ್ನ ೨.೩೦ ಗಂಟೆಗೆ ಹಾಕತ್ತೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ.