ಮಡಿಕೇರಿ, ನ. ೧೬: ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲೆಮಾಡು ಕಾನ್ಸಿರಾಮ್ ನಗರದ ೯೦ ಕುಟುಂಬಗಳಿಗೆ ಹೊಸ ವರ್ಷದ ವೇಳೆಗೆ ಹಕ್ಕುಪತ್ರ ವಿತರಿಸಲಾಗುವುದು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕÀ ಡಾ.ಮಂಥರ್ ಗೌಡ ಭರವಸೆ ನೀಡಿದರು. ಪಾಲೆಮಾಡು ಗ್ರಾಮದ ಕಾನ್ಸಿರಾಮ್ ನಗರ ನಿವಾಸಿಗಳ ಕುಂದುಕೊರತೆ ಸಭೆ ನಡೆಸಿ ಶಾಸಕರು ಮಾತನಾಡಿದರು.

ಹೊದ್ದೂರು ಗ್ರಾ.ಪಂ.ವ್ಯಾಪ್ತಿಯ ಪಾಲೆಮಾಡು ಬಳಿಯಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ ಆಗುವುದರಿಂದ ಸ್ಥಳೀಯರಿಗೆ ಉದ್ಯೋಗ ದೊರೆಯಲಿದೆ. ಇದರಿಂದ ಸುತ್ತಮುತ್ತಲ ಪ್ರದೇಶಗಳ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಆ ನಿಟ್ಟಿನಲ್ಲಿ ಪಾಲೆಮಾಡು ಕಾನ್ಸಿರಾಮ್ ನಗರದಲ್ಲಿ ವಾಸಿಸುತ್ತಿರುವ ಎಲ್ಲಾ ಅರ್ಹ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಾಗುವುದು.

ಇಲ್ಲಿನ ರಸ್ತೆ ಅಗಲೀಕರಣ, ರಸ್ತೆ ಸರಿಪಡಿಸುವುದು, ಕುಡಿಯುವ ನೀರು ಸಂಪರ್ಕ ಕಲ್ಪಿಸುವುದು, ಬಸ್ ಸೌಕರ್ಯ ಜೊತೆಗೆ ನ್ಯಾಯ ಬೆಲೆ ಅಂಗಡಿ ಕಲ್ಪಿಸುವುದು ಹೀಗೆ ಹಲವು ಮೂಲಭೂತ ಸೌಕರ್ಯವನ್ನು ತ್ವರಿತವಾಗಿ ಬಗೆಹರಿಸಲಾಗುವುದು. ಸರ್ಕಾರ ಬಡ ಜನರ ಏಳಿಗೆಗಾಗಿ ಎಲ್ಲಾ ರೀತಿಯ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದು, ಅದನ್ನು ಬಳಸಿಕೊಂಡು ಇತರರಂತೆ ಬದುಕು ಕಟ್ಟಿಕೊಳ್ಳುವಂತಾಗಬೇಕು ಎಂದು ಶಾಸಕರು ಇದೇ ಸಂದರ್ಭ ಸಲಹೆ ನೀಡಿದರು.

ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, ಇಲ್ಲಿನ ಪಾಲೆಮಾಡು ನಿವಾಸಿಗಳಿಗೆ ಹಕ್ಕುಪತ್ರ ಕಲ್ಪಿಸುವ ನಿಟ್ಟಿನಲ್ಲಿ ಉಪ ವಿಭಾಗಾಧಿಕಾರಿ ಯವರ ನ್ಯಾಯಾಲಯದಲ್ಲಿ ಇತ್ಯರ್ಥಪಡಿಸಿ ಕಾನೂನು ಪ್ರಕಾರ ೯೦ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಲಾಗುವುದು. ಇಲ್ಲಿನ ೩೪ ಕುಟುಂಬಗಳಿಗೆ ೯೪ಸಿರಡಿ ನಿವೇಶನ ರಹಿತರಿಗೆ ನಿವೇಶನ ಒದಗಿಸ ಲಾಗುವುದು. ಪಾಲೆಮಾಡು ಕಾನ್ಸಿರಾಮ್

(ಮೊದಲ ಪುಟದಿಂದ) ನಗರದ ಅಭಿವೃದ್ಧಿಗೆ ಗ್ರಾಮ ಪಂಚಾಯಿತಿ ವತಿಯಿಂದ ಎಲ್ಲಾ ರೀತಿಯ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವಲ್ಲಿ ಸರ್ಕಾರಕ್ಕೆ ಗ್ರಾಮ ಪಂಚಾಯಿತಿ ಮೂಲಕ ಕ್ರಿಯಾ ಯೋಜನೆಯ ಪ್ರಸ್ತಾವನೆ ಸಲ್ಲಿಸಲಾಗುವುದು.

ಗ್ರಾಮದಲ್ಲಿ ೨೬೦ ಕುಟುಂಬಗಳು ವಾಸಿಸುತ್ತಿದ್ದು, ನ್ಯಾಯಬೆಲೆ ಅಂಗಡಿ ಆರಂಭ, ಹಾಗೆಯೇ ಹತ್ತಿರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಆರಂಭಕ್ಕೆ ಕ್ರಮವಹಿಸಲಾಗುವುದು. ಜೊತೆಗೆ ಬಸ್ ಸೌಲಭ್ಯ ಕಲ್ಪಿಸಲು ಸಾರಿಗೆ ಇಲಾಖೆಯೊಂದಿಗೆ ಚರ್ಚಿಸಲಾಗುವುದು ಎಂದು ನುಡಿದರು.

ಗ್ರಾಮದ ಮುಖ್ಯಸ್ಥ ಕೆ.ಮೊಣ್ಣಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ ಇಲ್ಲಿನ ಜನರ ಬದುಕು ಹಸನು ಮಾಡುವ ನಿಟ್ಟಿನಲ್ಲಿ ಕಳೆದ ೧೬ ವರ್ಷಗಳಿಂದ ಹೋರಾಟ ಮಾಡಿಕೊಂಡು ಬರಲಾಗಿದ್ದು, ಇಲ್ಲಿನ ಕುಂದುಕೊರತೆಯನ್ನು ಪರಿಹರಿಸಬೇಕು. ಹಕ್ಕುಪತ್ರ ವಿತರಣೆಯಲ್ಲಿ ಲೋಪವಾಗಿದ್ದು, ಇದನ್ನು ಸರಿಪಡಿಸಬೇಕು. ೧೨೦೦ ಕ್ಕೂ ಹೆಚ್ಚು ಜನರು ವಾಸ ಮಾಡುತ್ತಿದ್ದು, ಕನಿಷ್ಟ ಸೌಲಭ್ಯಗಳನ್ನು ಈಡೇರಿಸಬೇಕು.

ಇಲ್ಲಿನ ಕ್ರೀಡಾಂಗಣ ನಿರ್ಮಾಣ ಮತ್ತು ಸ್ಮಶಾನ ಜಾಗ ಸಂಬAಧಿಸಿದAತೆ ಗೊಂದಲವಿದ್ದು, ಇದನ್ನು ಸರಿಪಡಿಸಬೇಕು. ಜನಸಂಖ್ಯೆ ಆಧಾರದಲ್ಲಿ ಪ್ರತಿ ಕುಟುಂಬಕ್ಕೂ ೨ ಎಕರೆ ಭೂಮಿ ಒದಗಿಸಬೇಕು. ಸಮಾಜಮುಖಿಯಾಗಿ ಬದುಕಲು ಅವಕಾಶ ಮಾಡಬೇಕು. ನೊಂದ ಜನರಿಗೆ ನ್ಯಾಯ ಒದಗಿಸಬೇಕು ಎಂದು ಮೊಣ್ಣಪ್ಪ ಅವರು ಇದೇ ಸಂದರ್ಭದಲ್ಲಿ ಕೋರಿದರು. ಗ್ರಾ.ಪಂ. ಅಧ್ಯಕ್ಷ ಎಚ್.ಎ.ಹಂಸ ಜಿ.ಪಂ.ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ, ಹಮೀದ್ ಅವರು ಮಾತನಾಡಿದರು.

ಜಿ.ಪಂ. ಸಿಇಓ ವರ್ಣಿತ್ ನೇಗಿ, ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಲ್ಲಾಳ್, ಗ್ರಾ.ಪಂ.ಉಪಾಧ್ಯಕ್ಷೆ ಅನುರಾಧ, ಗ್ರಾ.ಪಂ.ಸದಸ್ಯರು, ತಹಶೀಲ್ದಾರ್ ಪ್ರವೀಣ್ ಕುಮಾರ್, ತಾ.ಪಂ. ಇಒ ಶೇಖರ್, ಭೂ ದಾಖಲೆಗಳ ಉಪ ನಿರ್ದೇಶಕ ಪಿ. ಶ್ರೀನಿವಾಸ್, ಪಿಡಿಓ ಅಬ್ದುಲ್ಲಾ, ರಂಜಿತ್ ಮೌರ್ಯ, ಲಕ್ಷಿö್ಮ, ಇತರರು ಇದ್ದರು.