ಬಂಧಿತರು ನ್ಯಾಯಾಂಗ ಬಂಧನಕ್ಕೆ
ಕುಶಾಲನಗರ, ನ. ೧೬: ಕುಶಾಲನಗರ ಸಮೀಪ ಗುಡ್ಡೆಹೊಸೂರು ಬಳಿ ರಾಷ್ಟಿçÃಯ ಹೆದ್ದಾರಿಯಲ್ಲಿ ಕಾರು ತಡೆದು ದರೋಡೆಗೆ ಯತ್ನಿಸಿದ ಪ್ರಕರಣದ ಹಿನ್ನೆಲೆಯಲ್ಲಿ ಬಂಧಿತರಾದ ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಉಳಿದಂತೆ ಪರಾರಿಯಾಗಿರುವ ನಾಲ್ವರು ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರ ತಂಡ ಬೆಂಗಳೂರಿಗೆ ತೆರಳಿದೆ.
ಕುಶಾಲನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡೆಹೊಸೂರು ಬಳಿ ವಾಹನ ತಡೆದು ಆರು ಮಂದಿ ದುಷ್ಕರ್ಮಿಗಳು ಪ್ರವಾಸಿಗರ ಮೊಬೈಲ್ ದೋಚಿದ ಪ್ರಕರಣಕ್ಕೆ ಸಂಬAಧಿಸಿದAತೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಬ್ಬರು ಆರೋಪಿಗಳಾದ ವಿನಯ್ ಮತ್ತು ದಿನು ಎಂಬವರುಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಪರಾರಿಯಾಗಿರುವ ಆರೋಪಿಗಳನ್ನು ಪತ್ತೆಹಚ್ಚಲು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಮೋಹನ್ ರಾಜ್ ನೇತೃತ್ವದಲ್ಲಿ ಪೊಲೀಸರ ತಂಡ ಬೆಂಗಳೂರಿಗೆ ತೆರಳಿದೆ ಎಂದು ಸೋಮವಾರಪೇಟೆ ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕ ಆರ್.ವಿ. ಗಂಗಾಧರಪ್ಪ ತಿಳಿಸಿದ್ದಾರೆ.