ಮಡಿಕೇರಿ, ನ. ೧೭: ಕರ್ನಾಟಕ ರಾಜ್ಯ ಟೈರ್ಸ್ ಅಸೋಸಿಯೇಷನ್ನ ಜಿಲ್ಲಾ ಸಮಿತಿ ವತಿಯಿಂದ ವೀರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಅವರನ್ನು ಭೇಟಿ ಮಾಡಿ ಸಂಘದ ಬೇಡಿಕೆಗಳ ಬಗ್ಗೆ ಮನವಿ ಪತ್ರ ಸಲ್ಲಿಸಲಾಯಿತು. ಸಂಘಟನೆಯ ವತಿಯಿಂದ ಮುಖ್ಯಮಂತ್ರಿಯವರನ್ನು ಭೇಟಿ ಮಾಡಲು ಸಮಯಾವಕಾಶ ಮಾಡಿಕೊಡಬೇಕೆಂದು ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಶೇಕ್ ಅಹಮದ್, ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ.ಎಂ. ವಿಜಯ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಬೀಬುನ್ನಿಸ ಹಾಗೂ ಗೋಣಿಕೊಪ್ಪ ವಲಯ ಸಮಿತಿಯ ಸಹ ಕಾರ್ಯ ದರ್ಶಿ ಮಣಿ ಮತ್ತು ಸಂಘಟನಾ ಕಾರ್ಯದರ್ಶಿ ರಮೇಶ್ ಉಪಸ್ಥಿತರಿದ್ದರು.