ಸುಂಟಿಕೊಪ್ಪ, ನ. ೧೭: ಸುಂಟಿಕೊಪ್ಪ ಗದ್ದೆಹಳ್ಳದ ರಾಷ್ಟಿçÃಯ ಹೆದ್ದಾರಿಯಲ್ಲಿ ಕುಶಾಲನಗರ ಕಡೆಯಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಮಾರುತಿ ಓಮಿನಿ ಕಾರು ಮತ್ತು ಮಡಿಕೇರಿ ಕಡೆಯಿಂದ ಕುಶಾಲನಗರದ ಕಡೆಗೆ ಕಾಫಿ ತುಂಬಿದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಕಾರಿನಲ್ಲಿದ್ದ ಚಾಲಕ ಸೇರಿದಂತೆ ಮೂವರಿಗೆ ಗಾಯಗಳಾಗಿ ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಲಾರಿಯ ಮುಂಭಾಗವು ಜಖಂಗೊAಡಿದೆ. ಅದೃಷ್ಟವಷಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಕೂಡಲೇ ಸಾರ್ವಜನಿಕರು ಹಾಗೂ ಪೊಲೀಸರು ಸೇರಿ ಕಾರಿನಲ್ಲಿದ್ದವರನ್ನು ಹೊರಗೆಳೆದು ಸುಂಟಿಕೊಪ್ಪ ಆಸ್ಪತ್ರೆಗೆ ದಾಖಲಿಸುವಲ್ಲಿ ನೆರವಾದರು. ಸುಂಟಿಕೊಪ್ಪ ಠಾಣಾಧಿಕಾರಿ ಹಾಗೂ ಸಿಬ್ಬಂದಿ ಲಾರಿ ಹಾಗೂ ಕಾರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.