ನಾಪೋಕ್ಲು, ನ. ೧೮: ಇಲ್ಲಿಗೆ ಸಮೀಪದ ಮೂರ್ನಾಡು ವಿದ್ಯಾಸಂಸ್ಥೆಯ ಪದವಿ ಕಾಲೇಜಿನ ವತಿಯಿಂದ ಭಾಗಮಂಡಲದಿAದ ತಲಕಾವೇರಿವರೆಗೆ ಸ್ವಚ್ಛತಾ ಕಾರ್ಯಕ್ರಮವನ್ನು ಕ್ಲೀನ್ ಇಂಡಿಯಾ ಬ್ರಿಗೇಡ್‌ನ ನಿರ್ದೇಶಕ ರಾಜ ಮಾದಪ್ಪನವರ ನೇತೃತ್ವ ಹಾಗೂ ಆಡಳಿತ ಮಂಡಳಿಯ ಸಹಕಾರದೊಂದಿಗೆ ಕೈಗೊಳ್ಳಲಾಯಿತು. ಕೊಡಗು ಏಕೀಕರಣ ರಂಗದ ವತಿಯಿಂದ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಭೋಜನದ ವ್ಯವಸ್ಥೆಯನ್ನು ಮಾಡಲಾಗಿತ್ತು ಎಂದು ಮೂರ್ನಾಡು ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ. ರೇಖಾ ಚಿಣ್ಣಪ್ಪ ತಿಳಿಸಿದರು.