ಮತ್ತೊಮ್ಮೆ ಮುರುಘಾ ಶ್ರೀಗಳ ಬಂಧನ

ದಾವಣಗೆರೆ, ನ. ೨೦: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಒಂದು ವರ್ಷ ಹಿಂದೆ ಜೈಲು ಪಾಲಾಗಿ ನಾಲ್ಕು ದಿನಗಳ ಹಿಂದೆ ಜಾಮೀನು ಮೇಲೆ ಹೊರಬಂದಿದ್ದ ಚಿತ್ರದುರ್ಗದ ಮರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರನ್ನು ಮತ್ತೆ ಬಂಧಿಸಲಾಗಿದೆ. ಚಿತ್ರದುರ್ಗದ ೨ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಮುರುಘಾ ಶ್ರೀ ವಿರುದ್ಧ ಅರೆಸ್ಟ್ ವಾರಂಟ್ ಜಾರಿಯಾಗಿತ್ತು. ಹೀಗಾಗಿ ದಾವಣಗೆರೆಯ ವಿರುಕ್ತ ಮಠಕ್ಕೆ ಆಗಮಿಸಿದ ಪೊಲೀಸರು ಶ್ರೀಗಳನ್ನು ಬಂಧಿಸಿದ್ದು ಚಿತ್ರದುರ್ಗಕ್ಕೆ ಕರೆದೊಯ್ದಿದ್ದಾರೆ. ಚಿತ್ರದುರ್ಗದ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಬಿ ಕೆ ಕೋಮಲಾ ಅವರು ಜಾಮೀನು ರಹಿತ ವಾರೆಂಟ್ ಹೊರಡಿಸಿದ್ದು, ಮಂಗಳವಾರದೊಳಗೆ ಶಿವಮೂರ್ತಿ ಶರಣರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಪೊಲೀಸರಿಗೆ ಆದೇಶಿಸಿದ್ದಾರೆ. ೨೦೨೨ರ ಸೆಪ್ಟೆಂಬರ್ ೧ ರಿಂದ ಬಂಧನದಲ್ಲಿದ್ದ ಮುರುಘಾ ಶ್ರೀಗಳ ವಿರುದ್ಧ ಎರಡು PಔಅSಔ ಪ್ರಕರಣಗಳು ದಾಖಲಾಗಿದೆ. ಇದರಲ್ಲಿ ಮೊದಲ ಪ್ರಕರಣದಲ್ಲಿ ನವೆಂಬರ್ ೮ರಂದು ಹೈಕೋರ್ಟ್ ಜಾಮೀನು ನೀಡಿದ್ದರಿಂದ ನವೆಂಬರ್ ೧೬ರಂದು ಶ್ರೀಗಳು ಜೈಲಿನಿಂದ ಬಿಡುಗಡೆಯಾಗಿದ್ದರು.

ಮೂವರು ಹಮಾಸ್ ಕಮಾಂಡರ್‌ಗಳ ಹತ್ಯೆ

ಇಸ್ರೇಲ್, ನ. ೨೦: ಗಾಜಾಪಟ್ಟಿಯಲ್ಲಿ ಕಳೆದ ರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಹಮಾಸ್ ಕಮಾಂಡರ್‌ಗಳು ಹೊಡೆದುರುಳಿಸಲಾಗಿದೆ ಎಂದು ಇಸ್ರೇಲ್ ರಕ್ಷಣಾ ಪಡೆ ಇಂದು ಘೋಷಿಸಿದೆ. ಯುದ್ಧಸಾಮಗ್ರಿಗಳನ್ನು ಅಡಗಿಸಿರುವ ಗೋದಾಮಿನೊಳಗೆ ಸೇನೆ ಪ್ರವೇಶಿಸಿದಾಗ ಭಯೋತ್ಪಾದಕರು ಅಡಗಿರುವುದು ತಿಳಿದುಬಂತು. ಈ ವೇಳೆ ಸೈನಿಕರು ವೈಮಾನಿಕ ದಾಳಿಗೆ ಕರೆ ನೀಡಿದರು. ಅಂತೆ ವೈಮಾನಿಕ ದಾಳಿಯಲ್ಲಿ ಭಯೋತ್ಪಾದಕರನ್ನು ಹತ್ಯೆ ಮಾಡಿ ಕಟ್ಟಡ ಮತ್ತು ಅದರ ಶಸ್ತಾçಸ್ತçಗಳನ್ನು ನಾಶಪಡಿಸಲಾಗಿದೆ. ಕನಿಷ್ಟ ಮೂವರು ಒತ್ತೆಯಾಳುಗಳನ್ನು ಶಿಫಾ ಆಸ್ಪತ್ರೆಗೆ ಕರೆತರುವ ಸಿಸಿಟಿವಿ ದೃಶ್ಯಾವಳಿಗಳನ್ನು ಐಡಿಎಫ್ ಪ್ರಸ್ತುತಪಡಿಸಿದ್ದು ಆಸ್ಪತ್ರೆಯ ಅಡಿಯಲ್ಲಿ ಹಮಾಸ್ ಭಯೋತ್ಪಾದಕ ಮೂಲಸೌಕರ್ಯವನ್ನು ನಿರ್ಮಿಸಿಕೊಂಡಿದೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಗುಪ್ತಚರ ದೃಢಪಡಿಸಿದೆ ಎಂದು ವಕ್ತಾರ ಡೇನಿಯಲ್ ಹಗರಿ ಹೇಳಿದ್ದಾರೆ.

ವಿಶ್ವಕಪ್ ಮೇಲೆ ಕಾಲಿಟ್ಟ ಆಸೀಸ್ ಆಟಗಾರ

ನವದೆಹಲಿ, ನ. ೨೦: ವಿಶ್ವಕಪ್ ೨೦೨೩ ಗೆದ್ದಿರುವ ಆಸ್ಟೆçÃಲಿಯಾ ಟ್ರೋಫಿ ಗೆದ್ದ ಬಳಿಕ ಕೆಲ ಆಟಗಾರರ ಸಂಭ್ರಮಾಚರಣೆ ಅತಿರೇಕಕ್ಕೇರಿದೆ. ಆಸೀಸ್ ಆಟಗಾರ ಮಿಚೆಲ್ ಮಾರ್ಷ್ ಕೈಯಲ್ಲಿ ಬಿಯರ್ ಬಾಟಲ್ ಹಿಡಿದು ಟ್ರೋಫಿಯ ಮೇಲೆ ಪಾದವನ್ನಿಟ್ಟು ಫೋಟೋ ತೆಗೆಸಿಕೊಂಡಿದ್ದಾರೆ. ಮಿಚೆಲ್ ಮಾರ್ಷ್ ಅವರು ಕೈಯಲ್ಲಿ ಬಿಯರ್ ಬಾಟಲ್ ಹಿಡಿದುಕೊಂಡು, ವಿಶ್ವಕಪ್ ಟ್ರೋಫಿಯ ಮೇಲೆ ಎರಡೂ ಕಾಲುಗಳನ್ನು ಇಟ್ಟು ಸೋಫಾ ಮೇಲೆ ವಿಶ್ರಾಂತಿ ಮಾಡುವುದನ್ನು ಕಾಣಬಹುದು. ಈ ಫೋಟೋವನ್ನು ಆಸ್ಟೆçÃಲಿಯಾದ ನಾಯಕ ಪ್ಯಾಟ್ ಕಮ್ಮಿನ್ಸ್ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊAಡಿದ್ದಾರೆ. ಮಾರ್ಷ್ ಅವರ ಈ ನಡೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಸಾಮಾಜಿಕ ಮಾಧ್ಯಮದಲ್ಲಿ ಅನೇಕ ಮಂದಿ ಮಾರ್ಷ್ ನಡೆಗೆ ಕಿಡಿ ಕಾರಿದ್ದು, ಟ್ರೋಫಿಗೆ ಈ ರೀತಿ ‘ಅಗೌರವ’ ತೋರುವುದು ಸರಿಯಲ್ಲ ಎಂದಿದ್ದಾರೆ.

ಚAದ್ರಬಾಬು ನಾಯ್ಡುಗೆ ಜಾಮೀನು ಮಂಜೂರು

ಆAಧ್ರಪ್ರದೇಶ, ನ. ೨೦: ಕೌಶಲ್ಯಾಭಿವೃದ್ಧಿ ಪ್ರಕರಣಕ್ಕೆ ಸಂಬAಧಿಸಿದAತೆ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಆಂಧ್ರಪ್ರದೇಶ ಹೈಕೋರ್ಟ್ ಸಾಮಾನ್ಯ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ನಾಯ್ಡು ಅವರಿಗೆ ನವೆಂಬರ್ ೨೮ ರವರೆಗೆ ಮಧ್ಯಂತರ ಜಾಮೀನು ನೀಡಲಾಗಿತ್ತು. ಸದ್ಯ ನಾಯ್ಡು ಅವರು ನ.೨೮ ರವರೆಗೆ ಮಧ್ಯಂತರ ಜಾಮೀನಿನ ಮೇಲೆ ಹೊರಗಿದ್ದಾರೆ ಎಂದು ವರದಿಯಾಗಿದೆ. ಬಹುಕೋಟಿ ಕೌಶಲ್ಯ ಅಭಿವೃದ್ಧಿ ನಿಗಮದ ಹಗರಣದಲ್ಲಿ ಅಪರಾಧ ತನಿಖಾ ಇಲಾಖೆ (ಸಿಐಡಿ) ಬಂಧಿಸಿದ ಒಂದು ದಿನದ ನಂತರ ಸೆಪ್ಟೆಂಬರ್ ೧೦ ರಿಂದ ಅವರನ್ನು ರಾಜಮಂಡ್ರಿ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು ಮತ್ತು ವಿಜಯವಾಡದ ಎಸಿಬಿ ಪ್ರಕರಣಗಳ ವಿಶೇಷ ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಚಂದ್ರಬಾಬು ನಾಯ್ಡು ಸಿಎಂ ಆಗಿದ್ದಾಗ ಆಂಧ್ರಪ್ರದೇಶದಾದ್ಯAತ ಕೌಶಲ ಕೇಂದ್ರಗಳನ್ನು ತೆರೆಯುವಲ್ಲಿ ನಿಗಮಕ್ಕೆ ಬಿಡುಗಡೆಯಾಗಿದ್ದ ಸುಮಾರು ೩,೩೦೦ ರೂ. ಕೋಟಿ ಹಣದಲ್ಲಿ ನಾಯ್ಡು ಅವರಿಂದ ಸರ್ಕಾರಕ್ಕೆ ೩೭೧ಕೋಟಿ ವಂಚನೆ ಆಗಿದೆ ಎಂಬ ಆರೋಪದ ಮೇಲೆ ಸಿಐಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಈ ಪ್ರಕರಣದಲ್ಲಿ ನಾಯ್ಡು ೩ನೇ ಆರೋಪಿಯಾಗಿದ್ದಾರೆ.

ಮಕ್ಕಳ ಆಟಿಕೆ ಮಳಿಗೆಯಲ್ಲಿ ಭೀಕರ ಅಗ್ನಿ ಅವಘಡ

ಬೆಂಗಳೂರು, ನ. ೨೦: ಬೆಂಗಳೂರಿನ ಕುಂಬಾರಪೇಟೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಮಕ್ಕಳ ಆಟಿಕೆ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಕೆಆರ್ ಮಾರುಕಟ್ಟೆ ಸಮೀಪದಲ್ಲಿರುವ ಕುಂಬಾರಪೇಟೆಯಲ್ಲಿರುವ ಮಕ್ಕಳ ಆಟದ ಸಾಮಾನು, ಎಲೆಕ್ಟಾçನಿಕ್ಸ್ ವಸ್ತು ಮಾರಾಟದ ಮಳಿಗೆಯ ಮೂರನೇ ಮಹಡಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ನೋಡ ನೋಡುತ್ತಲೇ ಬೆಂಕಿಯ ಕೆನ್ನಾಲಿಗೆ ೬ನೇ ಮಹಡಿವರೆಗೂ ಹಬ್ಬಿದೆ ಪ್ಲಾಸ್ಟಿಕ್ ಗೋದಾಮಿನ ೩, ೪ನೇ ಮಹಡಿಯಲ್ಲಿ ಮಧ್ಯಾಹ್ನ ೩ ಗಂಟೆ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿತ್ತು. ಕೂಡಲೇ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿ ಒಂದು ಗಂಟೆಯಾದರೂ ಸ್ಥಳಕ್ಕೆ ಆಗಮಿಸಲಿಲ್ಲ. ಇದರಿಂದಾಗಿ ಬೆಂಕಿ ಮತ್ತಷ್ಟು ಹೆಚ್ಚಾಯಿತು. ತಡವಾಗಿ ಐದು ವಾಹನಗಳಲ್ಲಿ ಬಂದ ೩೦ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ. ಆದರೆ, ಬೆಂಕಿ ಧಗಧಗಿಸಿದ ಪರಿಣಾಮ ಮೂರನೇ ಮಹಡಿಯಿಂದ ಆರನೇ ಮಹಡಿಗೆ ಬೆಂಕಿ ಹಬ್ಬಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ.

ಟಿಎಂಸಿ ನಾಯಕನ ಹತ್ಯೆ - ಮೂವರ ಬಂಧನ

ಕೋಲ್ಕತ್ತಾ, ನ. ೨೦: ಪಶ್ಚಿಮ ಬಂಗಾಳದ ಪರಗಣ ಜಿಲ್ಲೆಯಲ್ಲಿ ನಡೆದ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಸ್ಥಳೀಯ ನಾಯಕನ ಹತ್ಯೆಗೆ ಸಂಬAಧಿಸಿದAತೆ ಮೂವರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನಂತರ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಜೋಯ್‌ನಗರದ ಬಮುಂಗಾಚಿ ಪ್ರದೇಶದ ಟಿಎಂಸಿ ಅಧ್ಯಕ್ಷ ಸೈಫುದ್ದೀನ್ ಲಸ್ಕರ್ (೪೭) ಅವರನ್ನು ನ.೧೩ರ ಮುಂಜಾನೆ ಅವರ ಮನೆಯ ಸಮೀಪದಲ್ಲಿ ಗುಂಡಿಕ್ಕಿ ಹತ್ಯೆಗೈಯಲಾಗಿತ್ತು. ಪಂಚಾಯಿತಿ ಅಧ್ಯಕ್ಷೆ, ಲಸ್ಕರ್ ಅವರ ಪತ್ನಿಯ ಬೆಂಬಲಿಗರು, ದುಷ್ಕರ್ಮಿಗಳ ಪೈಕಿ ಇಬ್ಬರು ಶಂಕಿತ ಆರೋಪಿಗಳನ್ನು ಹಿಡಿದು ಗುಂಪು ಹಲ್ಲೆ ನಡೆಸಿದ್ದರು. ಗುಂಪು ದಾಳಿಯಲ್ಲಿ ಓರ್ವ ಮೃತಪಟ್ಟಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತೊಬ್ಬನನ್ನು ರಕ್ಷಿಸಿ ಬಂಧಿಸಿದ್ದರು.

ಸಮಯ ಬಂದರೆ ದತ್ತ ಮಾಲೆಯನ್ನೂ ಹಾಕುತ್ತೇನೆ - ಹೆಚ್.ಡಿ.ಕೆ.

ಚಿಕ್ಕಮಗಳೂರು, ನ. ೨೦: ದತ್ತ ಮಾಲೆ ಏಕೆ ಹಾಕಬಾರದು, ಸಮಯ ಬಂದರೆ ದತ್ತ ಮಾಲೆಯನ್ನೂ ಹಾಕುತ್ತೇನೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ದತ್ತಮಾಲೆ ಹಾಕುವುದು ದೇವರ ಕಾರ್ಯಕ್ರಮ, ಕಾನೂನು ಬಾಹಿರ ಅಲ್ಲ. ಕಾನೂನು ಬಾಹಿರವಾದ ಯಾವುದೇ ಕೆಲಸ ಮಾಡುವುದಿಲ್ಲ. ಸಂಸ್ಕೃತಿ ಉಳಿಸಲು ಕಾನೂನಾತ್ಮವಾಗಿ ಏನು ಬೇಕಾದರೂ ಮಾಡುತ್ತೇನೆ ಎಂದರು. ಜಾತ್ಯತೀತತೆ ಎಂದರೆ ಏನು, ಅಲ್ಲೆಲ್ಲೋ ಹೋಗಿ ಕಾಂಗ್ರೆಸ್‌ನ ಒಬ್ಬ ಮಂತ್ರಿ ಮಾತನಾಡಿದ್ದಾರಲ್ಲ, ನಮ್ಮ ಸಮಾಜದ ಖಾದರ್ ಅವರಿಗೆ ಬಿಜೆಪಿ ಶಾಸಕರು ಕೈಮುಗಿಯಬೇಕು, ಇದು ಜಾತ್ಯತೀತ ಅಲ್ವಾ ಎಂದಿದ್ದಾರೆ. ಅದು ಜಾತ್ಯಾತೀತಯೇ, ಜಾತ್ಯತೀತತೆ ಬಗ್ಗೆ ಚರ್ಚೆ ಮಾಡಲು ಕಾಂಗ್ರೆಸ್‌ನವರಿಗೆ ಯಾವ ಯೋಗ್ಯತೆ ಇದೆ ಎಂದು ಪ್ರಶ್ನಿಸಿದರು. ಅವರಿಗೆ ಅವರ ಧರ್ಮದ ಬಗ್ಗೆ ಅಷ್ಟು ಅಭಿಮಾನ ಇದ್ದರೆ, ನಮ್ಮ ಧರ್ಮಾಭಿಮಾನ ತೋರಿಸಲು ನಾನು ಭಯಪಡುವುದಿಲ್ಲ. ಅಗತ್ಯ ಬಂದರೆ ನಮ್ಮ ಸಂಸ್ಕೃತಿ ಉಳಿಸಲು ದತ್ತಮಾಲೆ ಹಾಕುತ್ತೇನೆ ಎಂದರು.