ಸಿದ್ದಾಪುರ, ನ. ೨೦: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಏರ್ಪಡಿಸಲಾದ ೨೦೨೩ನೇ ಸಾಲಿನ ತಾಲೂಕು ಮಟ್ಟದ ದೇಶಭಕ್ತಿ ಗಾಯನ ಸ್ಪರ್ಧೆಯಲ್ಲಿ ಚೆನ್ನಯ್ಯನಕೋಟೆ ಸ.ಹಿ.ಪ್ರಾ. ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ದ್ವಿತೀಯ ಹಾಗೂ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ಪ್ರಥಮ ಸ್ಥಾನದ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ಸಭಾಂಗಣದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ಬಗ್ಗೆ ಶಾಲಾ ಅಭಿವೃದ್ಧಿ ಸಮಿತಿ ಹಾಗೂ ಶಾಲಾ ಶಿಕ್ಷಕರಗಳು ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿ, ಗೌರವಿಸಿದ್ದಾರೆ. ಚಿತ್ರದುರ್ಗದಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಎಂಟು ವಿದ್ಯಾರ್ಥಿಗಳಾದ ನಸರೀನಾ, ಫರ್ಜಾನಾ, ದರ್ಶಿನಿ, ಲಕ್ಷಿö್ಮ, ಬಿಂದು, ಧನಲಕ್ಷಿö್ಮ, ನೇತ್ರಾ, ಸ್ಮಿತಾ ಹಾಗೂ ಶಾಲಾ ಶಿಕ್ಷಕಿ ಬಿ.ಬಿ. ಜಾಜಿ ಮಕ್ಕಳೊಂದಿಗೆ ಭಾಗವಹಿಸಲಿದ್ದಾರೆ. ಅಭಿನಂದನಾ ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಅಧ್ಯಕ್ಷ ಶಂಕರ, ಶಾಲಾ ಮುಖ್ಯ ಶಿಕ್ಷಕಿ ರಾಜಮ್ಮ ಸೇರಿದಂತೆ ಶಾಲಾ ಅಭಿವೃದ್ಧಿ ಸಮಿತಿಯ ಪ್ರಮುಖರು ಹಾಗೂ ಶಾಲಾ ಶಿಕ್ಷಕರು ಹಾಜರಿದ್ದರು.