ಮಡಿಕೇರಿ, ನ. ೨೩: ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ-೨೦೨೩-೨೪ ರ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ನವೆಂಬರ್ ೨೪ ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಲಿದೆ.

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯರು ಹಾಗೂ ಮೂರ್ನಾಡು ಸಾಹಿತಿ ಡಾ. ಮೇಚೀರ ಸುಭಾಷ್ ನಾಣಯ್ಯ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಸಿ.ಪುಟ್ಟರಾಜು, ಪ್ರಾಚಾರ್ಯರ ಸಂಘದ ಅಧ್ಯಕ್ಷರಾದ ಪಿ.ಎಂ.ದೇವಕಿ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್.ವಿಜಯ ಇತರರು ಪಾಲ್ಗೊಳ್ಳಲಿದ್ದಾರೆ. ನಂತರ ಮಧ್ಯಾಹ್ನ ೩ ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಪ್ರಾಚಾರ್ಯರ ಸಂಘದ ಅಧ್ಯಕ್ಷರಾದ ಪಿ.ಎಂ.ದೇವಕಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಸಿ.ಪುಟ್ಟರಾಜು, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್.ವಿಜಯ ಅವರು ಭಾಗವಹಿಸಲಿದ್ದಾರೆ.