ಮಡಿಕೇರಿ, ನ. ೨೨: ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ ಸಂಸ್ಥೆಗಳಿಗೆ ಪ್ರೋತ್ಸಾಹ ರೂಪದಲ್ಲಿ ಸಹಾಯಧನ ನೀಡಿ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಸಾಂಸ್ಕೃತಿಕ ವಾತಾವರಣ ಉಂಟುಮಾಡುವಲ್ಲಿ ಶ್ರಮಿಸುತ್ತಿರುವ ಸಂಘ ಸಂಸ್ಥೆಗಳನ್ನು ಪ್ರೋತ್ಸಾಹಿಸಲು ೨೦೨೩-೨೪ನೇ ಸಾಲಿನ ಸಾಮಾನ್ಯ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಸಂಘ ಸಂಸ್ಥೆಗಳಿಗೆ ಧನಸಹಾಯ ನೀಡಲು ಸೇವಾಸಿಂಧು sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ಮುಖಾಂತರ ಡಿಸೆಂಬರ್ ೧೩ ರವರೆಗೆ ಕಾಲಾವಕಾಶ ನೀಡಿ ಅರ್ಜಿ ಆಹ್ವಾನಿಸಲಾಗಿದೆ.
ಮಾರ್ಗಸೂಚಿಯನ್ನು ಸೇವಾಸಿಂಧು ಪೋರ್ಟಲ್ ಹಾಗೂ ಇಲಾಖೆಯ ವೆಬ್‌ಸೈಟ್ ತಿತಿತಿ.ಞಚಿಟಿಟಿಚಿಜಚಿsiಡಿi.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಅಳವಡಿಸಲಾಗಿದೆ. ಹೆಚ್ಚಿನ ಮಾಹಿತಿಗೆ ೦೮೦-೨೨೨೭೯೯೫೪/ ೯೯೮೬೮೩೭೦೩೭/ ೮೭೯೨೬೬೨೮೧೪/ ೮೭೯೨೬೬೨೮೧೬/ ೦೮೦೨೨೨೧೩೫೩೦ ಹಾಗೂ ಆಯಾಯ ಜಿಲ್ಲೆಯ ವ್ಯವಸ್ಥಾಪಕರು, ಸೇವಾ ಸಿಂಧು ಇವರನ್ನು ಸಂಪರ್ಕಿಸಬಹುದು. ನಿಗಧಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅರ್ಜಿಯನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸುವುದಿಲ್ಲ) ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಧರಣಿದೇವಿ ಮಾಲಗತ್ತಿ ಅವರು ತಿಳಿಸಿದ್ದಾರೆ.