ಮಡಿಕೇರಿ, ನ. ೨೩ : ೨೦೨೪ ರ ಜೂನ್ ೨೧ ಕ್ಕೆ ಅವಧಿ ಪೂರ್ಣಗೊಳ್ಳಲಿರುವ ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಸಲು ಸಿದ್ಧತೆ ನಡೆಯುತ್ತಿದ್ದು, ಆ ನಿಟ್ಟಿನಲ್ಲಿ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಚುನಾವಣಾ ಆಯೋಗದ ನಿರ್ದೇಶನದಂತೆ ಈಗಾಗಲೇ ನವೆಂಬರ್ ೬ ರವರೆಗೆ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಸಂಬAಧಿಸಿದAತೆ ನಮೂನೆ-೧೮ ಮತ್ತು ೧೯ ರ ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ನಿಯಮಾನುಸಾರ ಪರಿಶೀಲಿಸಿ ವಿಲೇವಾರಿ ಮಾಡಲಾಗಿದೆ ಎಂದು ಹೇಳಿದರು.
ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಸಂಬAಧಿಸಿದAತೆ ಕೊಡಗು ಜಿಲ್ಲೆಯಲ್ಲಿ ೨೦೨೩ ನವೆಂಬರ್, ೦೬ ಕ್ಕೆ ೧೩೯೫ ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಇದರಲ್ಲಿ ೯೯೨ ಅರ್ಜಿಗಳನ್ನು ಅಂಗೀಕರಿಸಲಾಗಿದೆ. ೭೯ ಅರ್ಜಿಗಳು ವಿವಿಧ ಕಾರಣಗಳಿಂದ ತಿರಸ್ಕೃತಗೊಂಡಿವೆ. ೧೮೯ ಅರ್ಜಿಗಳನ್ನು ನೈರುತ್ಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಗೆ ವರ್ಗಾಯಿಸಲಾಗಿದೆ. ೧೩೫ ಅರ್ಜಿಗಳನ್ನು ಬೇರೆ ಮತ ಕ್ಷೇತ್ರಕ್ಕೆ ವರ್ಗಾಯಿಸಲಾಗಿದೆ. ಒಟ್ಟಾರೆ ೩೨೪ ಅರ್ಜಿಗಳನ್ನು ವರ್ಗಾಯಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
ಹಾಗೆಯೇ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಸಂಬAಧಿಸಿದAತೆ ೩೫೨೧ ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಇದರಲ್ಲಿ ೩,೦೦೩ ಅರ್ಜಿಗಳು ಅಂಗೀಕಾರವಾಗಿದೆ. ೮೨ ಅರ್ಜಿಗಳು ತಿರಸ್ಕೃತಗೊಂಡಿವೆ. ನೈರುತ್ಯ ಪದವೀಧರರ ಕ್ಷೇತ್ರ ವ್ಯಾಪ್ತಿಗೆ ೨೫೧ ಅರ್ಜಿಗಳನ್ನು ವರ್ಗಾಯಿಸಲಾಗಿದೆ. ೧೮೫ ಅರ್ಜಿಗಳನ್ನು ಬೇರೆ ಕ್ಷೇತ್ರಕ್ಕೆ ವರ್ಗಾಯಿಸಲಾಗಿದೆ. ಒಟ್ಟಾರೆ ೪೩೬ ಅರ್ಜಿಗಳನ್ನು ವರ್ಗಾಯಿಸಲಾಗಿದೆ.
ನಮೂನೆ-೧೯ ಮತ್ತು ೧೮ ರ ಅರ್ಜಿಗಳನ್ನು ಡಾಟಾ ಎಂಟ್ರಿ ಮಾಡಿ ಭಾರತ ಚುನಾವಣಾ ಆಯೋಗದ ವೇಳಾ ಪಟ್ಟಿ ಅನುಸಾರ ಇಂದು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಅದರಂತೆ ಕೊಡಗು ಜಿಲ್ಲೆಯಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಸಂಬAಧಿಸಿದAತೆ ಒಟ್ಟು ೯೯೨ ಮಂದಿ ಮತದಾರರು ಇದ್ದಾರೆ. ಇವರಲ್ಲಿ ೩೩೬ ಪುರುಷ ಮತದಾರರು ಮತ್ತು ೬೫೬ ಮಹಿಳಾ ಮತದಾರರು ಇದ್ದಾರೆ. ತಾಲೂಕುವಾರಿನಲ್ಲಿ ಮಡಿಕೇರಿ ೨೯೪, ಸೋಮವಾರಪೇಟೆ ೧೨೪, ವೀರಾಜಪೇಟೆ ೧೨೩, ಕುಶಾಲನಗರ ೨೧೧, ಪೊನ್ನಂಪೇಟೆ ೨೪೦ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಸಂಬAಧಿಸಿ ದಂತೆ ಒಟ್ಟು ೯೯೨ ಮತದಾರರು ನೋಂದಣಿ ಆಗಿದ್ದಾರೆ.
(ಮೊದಲ ಪುಟದಿಂದ) ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಸಂಬAಧಿಸಿದAತೆ ಒಟ್ಟು ೩೦೦೩ ಮತದಾರರು ಇದ್ದು, ೧೩೩೧ ಪುರುಷ ಮತದಾರರು, ೧೬೭೧ ಮಹಿಳಾ ಮತದಾರರು ಇದ್ದಾರೆ. ಮಡಿಕೇರಿ ೯೨೮, ಸೋಮವಾರಪೇಟೆ ೬೯೧, ವೀರಾಜಪೇಟೆ ೩೭೭, ಕುಶಾಲನಗರ ೬೨೭, ಪೊನ್ನಂ ಪೇಟೆ ೩೮೦ ಮತದಾರರು ನೋಂದಣಿ ಆಗಿದ್ದಾರೆ ಎಂದು ವಿವರಿಸಿದರು. ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಸಂಬAಧಿಸಿದAತೆ ಅರ್ಹರು ಇನ್ನೂ ಸಹ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ ಇದೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.
ಕರಡು ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಂಡು ಮತದಾರರ ಪಟ್ಟಿಗೆ ಸಂಬAಧಿಸಿದAತೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸುವವರು ಡಿಸೆಂಬರ್ ೯ ರೊಳಗೆ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಯಾದ ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ ಹಾಗೂ ತಹಶೀಲ್ದಾರರ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದರು. ಸ್ವೀಕೃತ ವಾಗುವ ಹಕ್ಕು ಹಾಗೂ ಆಕ್ಷೇಪಣೆ ಗಳನ್ನು ಡಿಸೆಂಬರ್ ೨೫ ರೊಳಗೆ ವಿಲೇ ವಾರಿ ಮಾಡಿ ಡಿಸೆಂಬರ್ ೩೦ ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸ ಲಾಗುತ್ತದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾಹಿತಿಯಿತ್ತರು.
ಹೆಚ್ಚಿನ ಮಾಹಿತಿಗೆ ಜಿಲ್ಲಾಧಿಕಾರಿ ಗಳ, ಉಪ ವಿಭಾಗಾಧಿಕಾರಿಗಳ ಮತ್ತು ಸಂಬAಧಪಟ್ಟ ತಾಲೂಕು ಕಚೇರಿಗಳನ್ನು ಸಂಪರ್ಕಿಸಬಹುದು. ಹಾಗೂ ತಿತಿತಿ.ಛಿeoಞಚಿಡಿಟಿಚಿಣಚಿಞಚಿ. ಞಚಿಡಿ.ಟಿiಛಿ.iಟಿ ವೆಬ್ಸೈಟ್ನಲ್ಲಿಯೂ ಮಾಹಿತಿ ಲಭ್ಯವಿದ್ದು, ಮಾಹಿತಿಯನ್ನು ಪಡೆಯಬಹುದು.
ಮತದಾರರ ಪಟ್ಟಿ ಪರಿಷ್ಕರಣೆ: ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಸಂಬAಧ ಕರಡು ಮತದಾರರ ಪಟ್ಟಿಯನ್ನು ಅಕ್ಟೋಬರ್ ೨೭ ರಂದು ಪ್ರಕಟಿಸಿದ್ದು, ಅಕ್ಟೋಬರ್ ೨೭ ರಿಂದ ಡಿಸೆಂಬರ್ ೯ ರವರೆಗೆ ೨೦೨೪ರ ಜನವರಿ ೧, ೨೦೨೪ ರ ಏಪ್ರಿಲ್ ೧, ೨೦೨೪ ರ ಜುಲೈ ೧ ಮತ್ತು ೨೦೨೪ರ ಅಕ್ಟೋಬರ್ ೧ ಕ್ಕೆ ೧೮ ವರ್ಷ ಪೂರ್ಣ ಗೊಳ್ಳುವ ಯುವಕ, ಯುವತಿಯರು ಮತ್ತು ೧೮ ವರ್ಷ ಮೇಲ್ಪಟ್ಟ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪ ಡೆಯಾಗದೆ ವಂಚಿತರಾಗಿದ್ದಲ್ಲಿ ಮತದಾ ರರ ಪಟ್ಟಿಗೆ ಹೆಸರು ಸೇರಿಸಲು ನಮೂನೆ-೬ ರಲ್ಲಿ ಅರ್ಜಿ ಸಲ್ಲಿಸಬ ಹುದು. ಈಗಾಗಲೇ ಮತದಾರರ ಪಟ್ಟಿ ಯಲ್ಲಿ ಹೆಸರು ಸೇರ್ಪಡೆಯಾಗಿರುವ ಮತದಾರರು ಮೃತ, ಸ್ಥಳಾಂತರ, ಪುನ ರಾವರ್ತನೆ ಆಗಿದ್ದಲ್ಲಿ ಹೆಸರುಗಳನ್ನು ತೆಗೆಯಲು ನಮೂನೆ-೭ ರಲ್ಲಿ ಆಕ್ಷೇ ಪಣೆ ಅರ್ಜಿಯನ್ನು ಪಡೆಯಲಾಗುತ್ತದೆ ಎಂದರು. ಮತದಾರರ ಗುರುತಿನ ಚೀಟಿಯಲ್ಲಿನ ನಮೂದುಗಳು ತಪ್ಪಾಗಿದ್ದಲ್ಲಿ ತಿದ್ದುಪಡಿ ಮಾಡಲು ಹಾಗೂ ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯಿಂದ ಇನ್ನೊಂದು ಮತಗ ಟ್ಟೆಗೆ ವರ್ಗಾವಣೆ ಮಾಡಲು ನಮೂನೆ-೮ ರಲ್ಲಿ ಅರ್ಜಿ ಸ್ವೀಕರಿಸಲಾಗುತ್ತಿದೆ.
ನಮೂನೆ-೬, ೬ಎ, ೭ ಮತ್ತು ೮ರ ಅರ್ಜಿಗಳನ್ನು ಭಾರತ ಚುನಾವಣಾ ಆಯೋಗವು ಅಭಿವೃದ್ಧಿಪಡಿಸಿರುವ ಮೊಬೈಲ್ ಅಪ್ಲಿಕೇಷನ್ ಮತದಾರರ ಸಹಾಯವಾಣಿ ಆಪ್(ವೋಟರ್ ಹೆಲ್ಫ್ಲೈನ್ ಆ್ಯಪ್) ಹಾಗೂ hಣಣಠಿs://voಣeಡಿs.eಛಿi.gov.iಟಿ/ ವೋಟರ್ಸ್ ಸರ್ವಿಸ್ ಪೋರ್ಟಲ್ ಮೂಲಕ ಆನ್ ಲೈನ್ನಲ್ಲಿ ನೇರವಾಗಿ ಸಲ್ಲಿಸಬಹುದು.
ಡಿಸೆಂಬರ್ ೨ ಮತ್ತು ಡಿಸೆಂಬರ್ ೩ ರಂದು ಮತಗಟ್ಟೆಗಳಲ್ಲಿ ವಿಶೇಷ ನೋಂದಣಿ ಕಾರ್ಯಕ್ರಮವನ್ನು ಕೂಡ ಹಮ್ಮಿಕೊಳ್ಳಲಾಗಿದ್ದು, ನಾಗರಿಕರು ಇದರ ಉಪಯೋಗವನ್ನು ಪಡೆದು ಕೊಂಡು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿರುವ ಬಗ್ಗೆ ಖಚಿತಪಡಿಸಿಕೊಳ್ಳಬಹುದು. ನೋಂದಣಿ ಆಗದೆ ಇದ್ದಲ್ಲಿ ನಮೂನೆ-೬ ರಲ್ಲಿ ಅರ್ಜಿಯನ್ನು ಸ್ಥಳ ದಲ್ಲಿಯೇ ನೀಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಹಾಜರಿದ್ದರು.