ಈರ್ವರ ಬಂಧನ

ಮಡಿಕೇರಿ, ನ. ೨೨ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಎಂದು ಕಂದಾಯ ನಿರೀಕ್ಷಕರಿಗೆ ಕರೆ ಮಾಡಿ ಹಣ ಲಪಟಾಯಿಸಿದ ಪ್ರಕರಣಕ್ಕೆ ಸಂಬAಧಿಸಿ ದಂತೆ ಪೊಲೀಸರು ಈರ್ವರನ್ನು ಬಂಧಿಸಿದ್ದಾರೆ. ಕುಶಾಲನಗರ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಸಂತೋಷ್ ಹೆಚ್.ಎನ್. ಕುಶಾಲನಗರ ತಾಲೂಕಿನ ಕಂದಾಯ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ತಾ. ೧೯ ರಂದು ರಾತ್ರಿ ೯ ಗÀಂಟೆ ಸಮಯದಲ್ಲಿ ಅಪರಿಚಿತ ವ್ಯಕ್ತಿಯು ಮೊಬೈಲ್‌ಗೆ ಕರೆ ಮಾಡಿ ಸಣ್ಣ ನೀರಾವರಿ, ವಿಜ್ಞಾನÀ ಮತ್ತು ತಂv್ರÀಜ್ಞಾನÀ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಸಹಾಯಕ ಎಂದು ಹೇಳಿಕೊಂಡು ತುರ್ತಾಗಿ ರೂ. ೨೦,೦೦೦ ಹಣದ ಅವಶ್ಯಕತೆಯಿದ್ದು, ಗೂಗಲ್ ಪೇ ಮೂಲಕ ಕಳುಹಿಸುವಂತೆ ಹಾಗೂ ಹಣವನ್ನು ಆದಷ್ಟು ಬೇಗ ಹಿಂದಿರುಗಿಸುವುದಾಗಿ ಎಂದು ಹೇಳಿದ್ದಾನೆ. ಅಪರಿಚಿತ ವ್ಯಕ್ತಿಗೆ ಕಂದಾಯ ನಿರೀಕ್ಷಕರು ರೂ.೨೦,೦೦೦ ಹಣವನ್ನು ಗೂಗಲ್ ಪೇ ಮೂಲಕ ಕಳುಹಿಸಿದ್ದಾರೆ.

ಈ ಕುರಿತು ತಾ. ೨೦ ರಂದು ಸಚಿವರ ಕಚೇರಿಯಲ್ಲಿ ವಿಚಾರಿಸಿದ್ದು ಹಣ ಕೇಳಿದ ವ್ಯಕ್ತಿ ಹಾಗೂ ಮೊಬೈಲ್ ಸಂಖ್ಯೆಗೆ ಈ ಬಗ್ಗೆ ಯಾವುದೇ ಮಾಹಿತಿ ಇರುವುದಿಲ್ಲ ಎಂದು ತಿಳಿದುಬಂದಿದೆ. ಈ ಕುರಿತು ದೂರು ಸ್ವೀಕರಿಸಿದ ಡಿವೈಎಸ್‌ಪಿ ಆರ್.ವಿ. ಗಂಗಾಧರಪ್ಪ, ಪಿಐ ಪ್ರಕಾಶ್ ಬಿ.ಜಿ., ಪಿಎಸ್‌ಐ ಗೀತಾ ಹಾಗೂ ಕಾಶಿನಾಥ ಬಗಲಿ ಮತ್ತು ಸಿಬ್ಬಂದಿಗಳು ಘಟನೆ ಸ್ಥಳಕ್ಕೆ ಭೇಟಿ ನೀಡಿ ಅಪರಾಧ ಕೃತ್ಯಕ್ಕೆ ಸಂಬAಧಿಸಿದ ಮಾಹಿತಿ ಮತ್ತು ಸಾಕ್ಷಾ÷್ಯಧಾರಗಳನ್ನು ಕಲೆಹಾಕಿ ತನಿಖೆ ಕೈಗೊಂಡು ಆರೋಪಿಗಳಾದ ಮೈಸೂರು ನಿವಾಸಿ ರಘುನಾಥ (೩೪) ಮತ್ತು ಶಿವಮೂರ್ತಿ (೩೫) ಎಂಬುವವರನ್ನು ಬಂಧಿಸಿದ್ದಾರೆ.