ಮಡಿಕೇರಿ, ನ. ೨೩: ಕೃಷಿಕರು ಸರ್ಕಾರದ ಸೌಲಭ್ಯವನ್ನು ಪಡೆಯಲು ಕಡ್ಡಾಯವಾಗಿ ಫ್ರೂಟ್ಸ್ ತಂತ್ರಾAಶದಲ್ಲಿ ಹೆಸರು ನೋಂದಾಯಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಕೋರಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಆಧಾರ್ ಕಾರ್ಡ್ ಜೊತೆಗೆ ಫ್ರೂಟ್ಸ್ ತಂತ್ರಾAಶದಲ್ಲಿ ಹೆಸರು ನೋಂದಾಯಿಸುವುದು ಕಡ್ಡಾಯವಾಗಿದೆ. ಆ ನಿಟ್ಟಿನಲ್ಲಿ ರೈತರು ಈ ಬಗ್ಗೆ ವಿಶೇಷ ಗಮನಹರಿಸಬೇಕು.
ಜಿಲ್ಲೆಯಲ್ಲಿ ೩,೨೬,೭೭೬ ಅದರಲ್ಲಿ ೧,೪೭,೬೨೧ ಮಂದಿ ಫ್ರೂಟ್ಸ್ ತಂತ್ರAಶದಲ್ಲಿ ಹೆಸರು ನೋಂದಾಯಿಸಿ ದ್ದಾರೆ. ಉಳಿದಂತೆ ೧,೨೯, ೯೭೬ ಮಂದಿ ಫ್ರೂಟ್ಸ್ ತಂತ್ರಾAಶದಡಿ ಹೆಸರು ನೋಂದಾಯಿಸಬೇಕಿದೆ.
ಈಚಿಡಿmeಡಿ ಖegisಣಡಿಚಿಣioಟಿ ಚಿಟಿಜ Uಟಿiಜಿieಜ ಃeಟಿeಜಿiಛಿiಚಿಡಿಥಿ Iಟಿಜಿoಡಿmಚಿಣioಟಿ Sಥಿsಣem-ಜಿಡಿuiಣs ಸರ್ಕಾರದ ವತಿಯಿಂದ ಅಭಿವೃದ್ಧಿ ಗೊಳಿಸಲಾಗಿದ್ದು, ಸರ್ಕಾರದಿಂದ ಸವಲತ್ತುಗಳನ್ನು ಪಡೆಯಲು ಬಯಸುವ ಎಲ್ಲಾ ರೈತರು ಫ್ರೂಟ್ಸ್ ತಂತ್ರಾAಶದಲ್ಲಿ ನೋಂದಾಯಿಸಿ ಕೊಳ್ಳುವುದು ಅವಶ್ಯವಾಗಿದೆ ಎಂದು ಹೇಳಿದರು. ರೈತರು ಜಮೀನಿಗೆ ಸಂಬAಧಿಸಿದ ವಿವರಗಳನ್ನು ಫ್ರೂಟ್ಸ್ ತಂತ್ರಾAಶದಲ್ಲಿ ನೋಂದಾಯಿಸಿ ಕೊಂಡು ಗುರುತಿನ ಸಂಖ್ಯೆ (ಎಫ್ಐಡಿ) ಪಡೆಯಬಹುದು. ಕೃಷಿ, ತೋಟಗಾರಿಕೆ, ರೇಷ್ಮೆ, ಪಶು ಸಂಗೋಪನೆ, ಕಂದಾಯ ಇಲಾಖೆ ಮತ್ತು ಇತರೆ ಸಂಬAಧಿಸಿದ ಇಲಾಖೆಗಳಿಂದ ದೊರೆಯುವ ಸಹಾಯಧನ ಸೌಲಭ್ಯ ಪಡೆಯಲು ಮತ್ತು ಬೆಂಬಲ ಬೆಲೆ, ಬೆಳೆ ವಿಮೆ, ಬೆಳೆ ಸಾಲ, ಬೆಳೆ ಹಾನಿ ಪರಿಹಾರ, ಬ್ಯಾಂಕ್ ಸಾಲ ಪಡೆಯಲು ಹಾಗೂ ಇತರೆ ಯೋಜನೆಗಳಿಗೆ ಫ್ರೂಟ್ಸ್ ತಂತ್ರಾAಶದಲ್ಲಿರುವ ವಿವರಗಳನ್ನು ಬಳಸಲಾಗುವುದು ಎಂದರು.
ಕೊಡಗು ಜಿಲ್ಲೆಯಲ್ಲಿ ಭೂಮಿ ತಂತ್ರಾAಶದಲ್ಲಿ ಒಟ್ಟು ಸೇರ್ಪಡೆ ಯಾಗಿರುವ ತಾಕು ಸಂಖ್ಯೆ ೩,೨೬,೭೭೬. ಸರ್ಕಾರದ ಅಧೀನದಲ್ಲಿರುವ ಹಾಗೂ ಕೃಷಿಯೇತರ ಭೂಮಿಗಳು(ಎನ್.ಎ) ಹಾಗೂ ಇತರ ತಾಲೂಕುಗಳನ್ನು ಹೊರತುಪಡಿಸಿ ಫ್ರೂಟ್ಸ್ ತಂತ್ರಾAಶದಲ್ಲಿ ಸೇರ್ಪಡೆಗೊಳಿಸ ಬೇಕಾಗಿರುವ ತಾಲೂಕುಗಳ ಒಟ್ಟು ಸಂಖ್ಯೆ ೨,೬೯,೯೦೧. ಈಗಾಗಲೇ ೧,೪೭,೬೨೧ ತಾಕುಗಳು ಸೇರ್ಪಡೆ ಗೊಂಡಿದ್ದು, ಫ್ರೂಟ್ಸ್ ತಂತ್ರಾAಶದಲ್ಲಿ ೧,೨೯,೯೭೬ ಸರ್ವೇ ನಂಬರ್ಗಳು ಸೇರ್ಪಡೆಯಾಗಲು ಬಾಕಿ ಇದೆ ಎಂದು ವಿವರಿಸಿದರು.
ಎಲ್ಲಾ ರೈತರು ಕಡ್ಡಾಯವಾಗಿ ತಮ್ಮ ಎಲ್ಲಾ ಜಮೀನುಗಳ ವಿವರಗಳನ್ನು ತಮ್ಮ ಎಫ್ಐಡಿಗೆ ಸೇರಿಸಲು ಮತ್ತು ಯಾವ ರೈತರು ಇಲ್ಲಿಯವರೆಗೆ ಎಫ್ಐಡಿಯನ್ನು ಮಾಡಿಸಿಕೊಂಡಿಲ್ಲವೋ ಅವರು ತಮ್ಮ ಹತ್ತಿರದ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರ, ತೋಟಗಾರಿಕೆ ಇಲಾಖೆ, ಕಂದಾಯ ಇಲಾಖೆ, ಪಶು ಸಂಗೋಪನಾ ಇಲಾಖೆಗಳನ್ನು ಸಂಪರ್ಕಿಸಬಹುದಾಗಿದೆ ಎಂದರು.
ಎಫ್ಐಡಿಯನ್ನು ಮಾಡಿಸಲು ತಮ್ಮ ಹೆಸರಿನಲ್ಲಿರುವ ಎಲ್ಲಾ ಜಮೀನುಗಳ ಪಹಣಿ ಪ್ರತಿಗಳು, ರೈತರ ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ತಮ್ಮ ಮೊಬೈಲ್ ಸಂಖ್ಯೆ, ಜಾತಿ ಪ್ರಮಾಣ ಪತ್ರದ ಪ್ರತಿ (ಪರಿಶಿಷ್ಟ ವರ್ಗದ ರೈತರಿಗೆ ಕಡ್ಡಾಯ) ಪಾಸ್ಪೋರ್ಟ್ ಅಳತೆಯ ಒಂದು ಭಾವಚಿತ್ರ. ದಾಖಲಾತಿಗಳು ಅವಶ್ಯವಾಗಿದೆ ಎಂದು ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಸೋಮಸುಂದರ, ಸಹಾಯಕ ನಿರ್ದೇಶಕ ಗೌರಿ ಇದ್ದರು.