ಮಡಿಕೇರಿ, ನ. ೨೩: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆ ಮಡಿಕೇರಿ, ಸಮುದಾಯ ಆರೋಗ್ಯ ಕೇಂದ್ರ ಕುಟ್ಟ, ಗ್ರಾಮ ಪಂಚಾಯಿತಿ ಕುಟ್ಟ ಸಂಯುಕ್ತ ಆಶ್ರಯದಲ್ಲಿ ಕುಟ್ಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು.
ಶಿಬಿರದಲ್ಲಿ ಸಾಮಾನ್ಯ ವೈದ್ಯಶಾಸ್ತç, ಶಸ್ತçಚಿಕಿತ್ಸೆ, ಕಣ್ಣು, ಪ್ರಸೂತಿ ಮತ್ತು ಸ್ತಿçà ರೋಗ, ಮಕ್ಕಳ ಚರ್ಮ ರೋಗ, ಕಿವಿ, ಮೂಗು, ಗಂಟಲು, ಮೂಳೆ ಮತ್ತು ಕೀಲು, ಸಮುದಾಯ ವೈದ್ಯಕೀಯ, ದಂತ, ಮಾನಸಿಕ ರೋಗ, ಅಸಾಂಕ್ರಾಮಿಕ ರೋಗಗಳ ನುರಿತ ತಜ್ಞ ವೈದ್ಯರು ವೈದ್ಯಕೀಯ ಸೇವೆಯನ್ನು ನೀಡಿದರು.
ಶಿಬಿರದಲ್ಲಿ ಸುಮಾರು ೧೩೫ಕ್ಕಿಂತ ಹೆಚ್ಚು ಹೊರ ರೋಗಿಗಳ ವೈದ್ಯರ ಭೇಟಿ, ೬ ಯೂಡಿಐಡಿ ಕಾರ್ಡ್ಗಳು, ೨೬ಕ್ಕಿಂತ ಹೆಚ್ಚಿನ ಜನರಿಗೆ ಅಸಾಂಕ್ರಾಮಿಕ ರೋಗಗಳ ಪರೀಕ್ಷೆಯನ್ನು ಈ ಶಿಬಿರದಲ್ಲಿ ಕಲ್ಪಿಸಿಕೊಡಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ವ್ಯೆದ್ಯಕೀಯ ಕಾಲೇಜು ಮಡಿಕೇರಿಗೆ ೩೩ ರೋಗಿಗಳನ್ನು ರೆಫರ್ ಮಾಡಲಾಯಿತು.
ಶಿಬಿರದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವತಿಯಿಂದ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ, ಉಚಿತ ಆಯುಷ್ಮಾನ್ ಕಾರ್ಡ್ಗಳ ನೋಂದಣಿ, ಉಚಿತ ಯೂಡಿಐಡಿ ನೋಂದಣಿ, ದೇಹದಾನ, ನೇತ್ರದಾನ, ಅಂಗಾAಗ ದಾನ ಕುರಿತು ಹಾಗೂ ಇನ್ನಿತರ ಯೋಜನೆಗಳ ಬಗ್ಗೆ ಆರೋಗ್ಯ ಮಿತ್ರ ಅಕ್ಷಯ್ ಮಾಹಿತಿಯನ್ನು ನೀಡಿದರು.
ಮಕ್ಕಳ ವಿಭಾಗದ ಮುಖ್ಯಸ್ಥ ಡಾ. ಪುರುಷೋತ್ತಮ್, ಇ.ಎನ್.ಟಿ. ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಶ್ರೀಕಾಂತ್, ಕೀಲು ಮೂಳೆ ವಿಭಾಗದ ಡಾ. ಪ್ರಶಾಂತ್, ಸಾಮಾನ್ಯ ವ್ಯೆದ್ಯ ವಿಭಾಗದ ಡಾ. ವಿನಾಯಕ, ಕಣ್ಣಿನ ವಿಭಾಗದ ಡಾ. ಕಿರಣ್ ಭಟ್, ಸಮುದಾಯ ವೈದ್ಯಶಾಸ್ತçದ ಡಾ. ನರಸಿಂಹ ಹಾಗೂ ವೈದ್ಯಕೀಯ ಕಾಲೇಜಿನ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು, ಅರೆ ವ್ಯೆದ್ಯಕೀಯ ವಿದ್ಯಾರ್ಥಿಗಳು, ಸಿಬ್ಬಂದಿಗಳು, ಕುಟ್ಟ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ಹಾಗೂ ಸಿಬ್ಬಂದಿಗಳು, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಸಿಬ್ಬಂದಿಗಳು, ಕುಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕುಟ್ಟ ವ್ಯಾಪ್ತಿಯ ಸಾರ್ವಜನಿಕರು ಭಾಗವಹಿಸಿದ್ದರು.