ಮಡಿಕೇರಿ, ನ. ೨೨: ಕೊಡಗು ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘದ ವತಿಯಿಂದ ತಾ.೨೩ ರಂದು (ಇಂದು) ನಿರಂತರ ಕಲಿಕಾ ಕಾರ್ಯಾಗಾರ ಮತ್ತು ಔಷಧಿ ಕ್ಷೇತ್ರದಲ್ಲಿನ ಪ್ರಸಕ್ತ ವಿದ್ಯಮಾನಗಳ ಕುರಿತಂತೆ ವಿಚಾರಗೋಷ್ಠಿ ಆಯೋಜಿಸಲಾಗಿದೆ.
ಬೆಳಿಗ್ಗೆ ೧೦.೩೦ ಗಂಟೆಗೆ ಮಡಿಕೇರಿ ಹೊರವಲಯದಲ್ಲಿನ ಆಹನ್ ಹಿಲ್ ಕಾಟೇಜ್ನಲ್ಲಿ ವಿಚಾರಗೋಷ್ಠಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಉದ್ಘಾಟಿಸಲಿದ್ದಾರೆ ಎಂದು ಸಂಘದ ಜಿಲ್ಲಾಧ್ಯಕ್ಷ ಅಂಬೆಕಲ್ ಜೀವನ್ ಕುಶಾಲಪ್ಪ ತಿಳಿಸಿದ್ದಾರೆ.
ವಿಚಾರಗೋಷ್ಠಿಯಲ್ಲಿ ಮೈಸೂರು ವೃತ್ತದ ಉಪಔಷಧ ನಿಯಂತ್ರಕ ಬಿ.ಪಿ. ಅರುಣ್, ಕೊಡಗು ಜಿಲ್ಲೆಯ ಸಹಾಯಕ ಔಷಧ ನಿಯಂತ್ರಕ ಗುರುನಾಥ್ ಮಾಗಣಗೇರಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಎಸ್.ಎಲ್. ಹರ್ಷವರ್ಧನ್, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಂಕಿತ ಅಧಿಕಾರಿ ಡಾ. ಅನಿಲ್ ಧವನ್, ಕೊಡಗು ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಆನಂದ್, ರಾಜ್ಯ ಔಷಧಿ ವ್ಯಾಪಾರಿಗಳ ಸಂಘದ ಕಾನೂನು ಸಲಹೆಗಾರ ಕೆ.ಹರೀಶ್, ಸಂಘದ ಜಿಲ್ಲಾ ಗೌರವ ಕಾರ್ಯದರ್ಶಿ ಡಿ.ಐ. ಪುರುಷೋತ್ತಮ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ಜೀವನ್ ಮಾಹಿತಿ ನೀಡಿದ್ದಾರೆ.