ರಜೌರಿಯಲ್ಲಿ ಉಗ್ರರೊಂದಿಗೆ ಗುಂಡಿನ ಕಾಳಗ; ಸೇನಾ ಸಿಬ್ಬಂದಿ ಹುತಾತ್ಮ
ಜಮ್ಮು, ನ. ೨೨: ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಜೌರಿಯ ಕಲಕೋಟೆ ತಹಸಿಲ್‌ನ ಬಾಜಿ ಮಾಲ್ ಪ್ರದೇಶದಲ್ಲಿ ಭದ್ರತಾಪಡೆಗಳು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ. ಇಬ್ಬರು ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಮೇರೆಗೆ ಭಾರತೀಯ ಸೇನೆ ಮತ್ತು ಜಮ್ಮು-ಕಾಶ್ಮೀರ ಪೊಲೀಸರ ಶೋಧ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಉಗ್ರರೊಂದಿಗೆ ಗುಂಡಿನ ಚಕಮಕಿ ನಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ಒಬ್ಬ ಅಧಿಕಾರಿ ಹಾಗೂ ಒಬ್ಬ ಯೋಧ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಇನ್ನೊಬ್ಬರು ಗಾಯ ಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ಅಕ್ರಮ ಆಸ್ತಿ ಪ್ರಕರಣ: ಡಿಕೆಶಿ ಅರ್ಜಿ ವಿಚಾರಣೆ ಮುಂದೂಡಿಕೆ
ಬೆAಗಳೂರು, ನ. ೨೨: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬAಧಿಸಿದAತೆ ಸಿಬಿಐ ತನಿಖೆಗೆ ಹಿಂದಿನ ಸರ್ಕಾರ ನೀಡಿದ್ದ ಅನುಮತಿಯ ವಿರುದ್ಧ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನವೆಂಬರ್ ೨೯ಕ್ಕೆ ಮುಂದೂಡಿದೆ. ಶಿವಕುಮಾರ್ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಮತ್ತು ಹಿರಿಯ ವಕೀಲ ಉದಯ್ ಹೊಳ್ಳ ಅವರು ಜಂಟಿ ಮೆಮೊ ಸಲ್ಲಿಸಿದ ನಂತರ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆಯನ್ನು ಮುಂದೂಡಿದೆ. ನವೆಂಬರ್ ೧೫ ರಂದು, ಸಿಬಿಐ ತನಿಖೆ ನಡೆಸಲು ಸರ್ಕಾರದ ಅನುಮತಿಗೆ ಹೈಕೋರ್ಟ್ ತಡೆ ನೀಡಿದ್ದ ಹಿನ್ನೆಲೆ ಇನ್ನು ಎರಡು ವಾರದಲ್ಲಿ ಅರ್ಜಿ ಇತ್ಯರ್ಥಪಡಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ ಎಂದು ಸಿಬಿಐ ಹೈಕೋರ್ಟ್ ವಿಭಾಗೀಯ ಪೀಠದ ಗಮನಕ್ಕೆ ತಂದಿತ್ತು. ಹೀಗಾಗಿ ಹೈಕೋರ್ಟ್ ವಿಚಾರಣೆಯನ್ನು ನವೆಂಬರ್ ೨೨ಕ್ಕೆ ನಿಗದಿಪಡಿಸಿತ್ತು. ಆದಾಗ್ಯೂ, ಅದೇ ಸಮಯದಲ್ಲಿ ಸುಪ್ರೀಂ ಕೋರ್ಟ್ನಲ್ಲಿ ಮತ್ತೊಂದು ಪ್ರಕರಣವಿರುವುದರಿಂದ ಸಿಬಿಐ ನವೆಂಬರ್ ೨೭ ರಂದು ತನ್ನ ವಾದವನ್ನು ಮಂಡಿಸಲಿದೆ ಎಂದು ಇಂದು ಎಎಸ್‌ಜಿ ನ್ಯಾಯಾಲಯಕ್ಕೆ ತಿಳಿಸಿದರು. ನವೆಂಬರ್ ೨೭ ರಂದು ಯಾವುದೇ ವಿಚಾರಣೆ ಇರುವುದಿಲ್ಲ ಎಂದ ಹೈಕೋರ್ಟ್, ವಿಚಾರಣೆಯನ್ನು ನವೆಂಬರ್ ೨೯ಕ್ಕೆ ಮುಂದೂಡಿದೆ. ಡಿ.ಕೆ. ಶಿವಕುಮಾರ್ ವಿರುದ್ಧ ಕಾನೂನು ಕ್ರಮ ಜರುಗಿಸಲು ಸರ್ಕಾರ ೨೦೧೯ರ ಸೆಪ್ಟೆಂಬರ್ ೨೫ರಂದು ನೀಡಿದ್ದ ಅನುಮತಿಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಏಕಸದಸ್ಯ ಪೀಠ ವಜಾಗೊಳಿಸಿತ್ತು. ಹೀಗಾಗಿ ಶಿವಕುಮಾರ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.
ಡಿಸೆಂಬರ್ ೨೩ ರಂದು ಪಿಎಸ್‌ಐ ನೇಮಕಾತಿ ಮರು ಪರೀಕ್ಷೆ
ಬೆಂಗಳೂರು, ನ. ೨೨: ೫೪೫ ಪಿಎಸ್‌ಐ ನೇಮಕಾತಿ ಅಕ್ರಮ ಹಿನ್ನೆಲೆಯಲ್ಲಿ ಮರು ಪರೀಕ್ಷೆಗೆ ಕರ್ನಾಟಕ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪರೀಕ್ಷೆ ದಿನಾಂಕವನ್ನು ಘೋಷಿಸಿದೆ. ಪೊಲೀಸ್ ಸಬ್‌ಇನ್ಸ್ಪೆಕ್ಟರ್‌ಗಳ ನೇಮಕಾತಿ ಪರೀಕ್ಷೆ ಡಿಸೆಂಬರ್ ೨೩ರಂದು ಬೆಂಗಳೂರಿನಲ್ಲಿ ನಡೆಸಲಿದೆ. ಹೈಕೋರ್ಟ್ ಆದೇಶದ ಮೇರೆಗೆ ಪಿಎಸ್‌ಐ ಮರು ಪರೀಕ್ಷೆ ನಡೆಸಲಾಗುತ್ತಿದ್ದು, ಹಿಂದಿನ ಪರೀಕ್ಷೆಯಲ್ಲಿ ಪರೀಕ್ಷೆಗೆ ಹಾಜರಾಗಲು ಅರ್ಹತೆ ಪಡೆದವರು ಮರು ಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ೨೦೨೧ರ ಜನವರಿ ೨೧ರಂದು ಪೊಲೀಸ್ ಇಲಾಖೆಯು ೫೪೫ ಪಿಎಸ್‌ಐ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿತ್ತು. ೨೦೨೧ರ ಅಕ್ಟೋಬರ್ ೩೧ರಂದು ಲಿಖಿತ ಪರೀಕ್ಷೆ ನಡೆದಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಬಳಿಕ ಪರೀಕ್ಷೆ ವಿವಾದದ ಸುಳಿಯಲ್ಲಿ ಸಿಲುಕಿತ್ತು. ಹಗರಣಕ್ಕೆ ಸಂಬAಧಿಸಿದAತೆ ಆಗಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಮೃತ್ ಪಾಲ್ ಮತ್ತು ಪೊಲೀಸ್ ಉಪ ಅಧೀಕ್ಷಕರು, ಇನ್‌ಸ್ಪೆಕ್ಟರ್, ಸಬ್ ಇನ್‌ಸ್ಪೆಕ್ಟರ್, ಸಹಾಯಕ ಸಬ್ ಇನ್‌ಸ್ಪೆಕ್ಟರ್ ಮತ್ತು ಕಾನ್‌ಸ್ಟೆಬಲ್‌ಗಳ ಶ್ರೇಣಿಯ ಕೆಲವು ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಹಲವರನ್ನು ಬಂಧಿಸಲಾಗಿತ್ತು. ಇನ್ನು ಅಂದಿನ ಬಿಜೆಪಿ ಸರ್ಕಾರ ಪರೀಕ್ಷೆಯನ್ನು ರದ್ದುಪಡಿಸಿ ಮತ್ತೆ ನಡೆಸಲು ನಿರ್ಧರಿಸಿತ್ತು.
ಮುಂದಿನ ವಾರ ನಿಗಮ ಮಂಡಳಿ ನೇಮಕಾತಿ ಅಂತಿಮ
ಬೆAಗಳೂರು, ನ. ೨೨: ಮುಂದಿನ ವಾರ ಮತ್ತೊಂದು ಸುತ್ತಿನ ಚರ್ಚೆಯ ನಂತರ ಆಡಳಿತಾರೂಢ ಕಾಂಗ್ರೆಸ್ ವಿವಿಧ ನಿಗಮ ಮಂಡಳಿಗಳಿಗೆ ನೇಮಕಾತಿಯನ್ನು ಅಂತಿಮಗೊಳಿಸಲಿದೆ ಮತ್ತು ನಂತರ ಪಟ್ಟಿಯನ್ನು ಪಕ್ಷದ ವರಿಷ್ಠರಿಗೆ ಕಳುಹಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ನಿಗಮ ಮಂಡಳಿ ನೇಮಕಾತಿ ಸಂಬAಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ರಾಜ್ಯ ನಾಯರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ನಮ್ಮಲ್ಲಿ ಕೆಲವು ನಾಯಕರು ಸಹ ಅವರೊಂದಿಗೆ ಮಾತನಾಡುತ್ತಿದ್ದಾರೆ. ನಾವು ಕೆಲವು ಹಿರಿಯ ನಾಯಕರು ಮತ್ತು ಶಾಸಕರ ಅಭಿಪ್ರಾಯವನ್ನು ಕೇಳಿದ್ದೇವೆ. ಅವರು ತಾ. ೨೮ ರಂದು ಮತ್ತೆ ಬರುತ್ತಿದ್ದಾರೆ. ಈ ಮಧ್ಯೆ, ಮುಖ್ಯಮಂತ್ರಿ ಮತ್ತು ನಾನು ಚುನಾವಣಾ ಪ್ರಚಾರಕ್ಕಾಗಿ ತೆಲಂಗಾಣಕ್ಕೆ ಹೋಗುತ್ತಿದ್ದೇವೆ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಶಿವಕುಮಾರ್ ಅವರು ಹೇಳಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯನ್ನು ಗಮನದಲ್ಲಿರಿಸಿ ಕೊಂಡು ಈಗಲೇ ನಿಗಮ ಮಂಡಳಿಗಳಿಗೆ ನೇಮಕಾತಿ ಯನ್ನು ಪೂರ್ಣ ಗೊಳಿಸಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಯಾವುದೇ ಅಸಮಾಧಾನ, ಅತೃಪ್ತಿಗೆ ಆಸ್ಪದ ನೀಡದಂತೆ ಎಚ್ಚರಿಕೆಯಿಂದ ಪಟ್ಟಿಯನ್ನು ಸಿದ್ಧಗೊಳಿಸಲಾಗುತ್ತಿದೆ.